ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆ ಸಂಭ್ರಮ: ಶಿವಮೊಗ್ಗದ ಗೋಪಿ ವೃತ್ತದಲ್ಲಿ ಕಾಂಗ್ರೆಸ್ ಹರ್ಷಾಚರಣೆ

On: January 7, 2026 6:29 PM
Follow Us:

ಶಿವಮೊಗ್ಗ: ನಗರದ ಗೋಪಿ ವೃತ್ತದಲ್ಲಿ ಇಂದು ಜಿಲ್ಲಾ ಕಾಂಗ್ರೆಸ್ ಸಮಿತಿವತಿಯಿಂದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತೀ ಹೆಚ್ಚು ಅವಧಿ ಸೇವೆ ಸಲ್ಲಿಸಿದ ಮುಖ್ಯಮಂತ್ರಿಯಾಗಿ ಇತಿಹಾಸ ನಿರ್ಮಿಸಿರುವುದನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಅಂಗವಾಗಿ ಸಾರ್ವಜನಿಕರಿಗೆ ಸಿಹಿ ಹಂಚಿ, ಪಟಾಕಿ ಸಿಡಿಸುವ ಮೂಲಕ ಹರ್ಷಾಚರಣೆ ನಡೆಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಮಾತನಾಡಿ, ನುಡಿದಂತೆ ನಡೆದ ಸರ್ಕಾರವಿದ್ದರೆ ಅದು ಕಾಂಗ್ರೆಸ್ ಸರ್ಕಾರ ಎಂದು ಹೇಳಿದರು. ರಾಜ್ಯದ ಕಟ್ಟಕಡೆಯ ಬಡವರಿಗೂ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ನೆರವಿನ ಹಸ್ತ ಚಾಚಿದ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ, ಭರವಸೆ ನೀಡಿದ ಎಲ್ಲ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿಕೊಂಡು ಬಂದಿದೆ. ಇದಕ್ಕೆ ರಾಜ್ಯದ ಜನತೆ ನೀಡುತ್ತಿರುವ ಆಶೀರ್ವಾದವೇ ಅವರ ಆಡಳಿತದ ಯಶಸ್ಸಿನ ಗುಟ್ಟು ಎಂದು ಹೇಳಿದರು.

ವಿರೋಧ ಪಕ್ಷಗಳು ಅನಗತ್ಯ ಟೀಕೆಗಳನ್ನು ಮಾಡುತ್ತಿದ್ದರೂ ಸಹ, ಗ್ಯಾರಂಟಿ ಯೋಜನೆಗಳಿಗಾಗಿ ಸರ್ಕಾರ 56,000 ಕೋಟಿ ರೂಪಾಯಿ ಮೊತ್ತವನ್ನು ವಿನಿಯೋಗಿಸಿ, ಅನ್ನಭಾಗ್ಯ, ಶಕ್ತಿಭಾಗ್ಯ, ಗೃಹಲಕ್ಷ್ಮೀ, ಯುವನಿಧಿ ಹಾಗೂ ಗೃಹಜ್ಯೋತಿ ಯೋಜನೆಗಳ ಮೂಲಕ ಜನಸಾಮಾನ್ಯರ ಮನೆಮಾತಾಗಿದೆ. ಈ ಜನಪರ ಆಡಳಿತದ ಯಶಸ್ಸನ್ನು ಸಂಭ್ರಮದಿಂದ ಆಚರಿಸುವುದಕ್ಕಾಗಿ ಇಂದಿನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಅಹಿಂದ ನಾಯಕ, ನುಡಿದಂತೆ ನಡೆದ ಯಶಸ್ಸಿನ ಪ್ರತೀಕ, ಎಲ್ಲಾ ವರ್ಗದ ಜನರ ಹಿತವನ್ನು ಬಯಸುವ ಹಾಗೂ ಸದಾ ಶೋಷಿತರ ಜೊತೆಗೆ ನಿಂತ ನಾಯಕನಾಗಿ ರಾಜ್ಯದ ಅಭಿವೃದ್ಧಿಗೆ ಹರಿಕಾರರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೇವರಾಜು ಅರಸು ಅವರ ನಂತರ ಅತೀ ಹೆಚ್ಚು ಅವಧಿ ಆಡಳಿತ ನಡೆಸಿದ ಮುಖ್ಯಮಂತ್ರಿಯಾಗಿ ಶ್ರೇಯಸ್ಸು ಪಡೆದಿರುವುದು ನಮಗೆ ನಿಜಕ್ಕೂ ಅಪಾರ ಸಂತಸ ತಂದಿದೆ. ಜನಪರ ಆಡಳಿತದ ಮೂಲಕ ರಾಜ್ಯವನ್ನು ಪ್ರಗತಿಯ ಹಾದಿಯಲ್ಲಿ ಮುನ್ನಡೆಸುತ್ತಿರುವ ಅವರಿಗೆ ಆ ದೇವರು ಇನ್ನೂ ಹೆಚ್ಚಿನ ಆರೋಗ್ಯ ಹಾಗೂ ದೀರ್ಘ ಆಯುಷ್ಯ ನೀಡಲಿ, ಮುಂದೆಯೂ ಉತ್ತಮ ಆಡಳಿತ ನೀಡುವ ಅವಕಾಶ ಲಭಿಸಲಿ ಎಂಬುದು ನಮ್ಮ ಹಾರೈಕೆ.

– ರಮೇಶ್ ಎಸ್.ಎನ್
ಅಧ್ಯಕ್ಷರು, ಶಿವಮೊಗ್ಗ ನಗರ ಕಾರ್ಮಿಕ ಘಟಕ

ಸಂಭ್ರಮಾಚರಣೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖರು ಹಾಗೂ ಪದಾಧಿಕಾರಿಗಳಾದ ಎನ್. ರಮೇಶ್, ಕಲಗೋಡು ರತ್ನಾಕರ್, ಜಿ.ಡಿ. ಮಂಜುನಾಥ್, ಶರತ್ ಮರಿಯಪ್ಪ, ಚಿನ್ನಪ್ಪ, ಸುವರ್ಣಾನಾಗರಾಜ್, ಶಿವಾನಂದ್, ಸೈಯದ್ ವಾಹಿದ್ ಅಡ್ಡು, ದೇವಿಕುಮಾರ್, ಮಹಮ್ಮದ್ ಆರೀಫ್, ಗೋಣಿ ಮಾಲತೇಶ್, ಸ್ಟೆಲ್ಲಾ ಮಾರ್ಟಿನ್, ಶ್ವೇತಾಬಂಡಿ, ಹಾಲಪ್ಪ, ಕಲೀಂಪಾಷಾ, ಮಂಜುನಾಥ್ ಬಾಬು, ಹೆಚ್.ಎಂ. ಮಧು, ಪಾಲಾಕ್ಷಿ, ಶಿವಪ್ಪ, ಯಮುನಾರಂಗೇಗೌಡ ಸೇರಿದಂತೆ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

K.M.Sathish Gowda

Join WhatsApp

Join Now

Facebook

Join Now

Leave a Comment