ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಶಿವಮೊಗ್ಗ ನಗರದಲ್ಲಿ ‘ಅಕ್ಕ ಪಡೆ’ಗೆ ಚಾಲನೆ ಮಹಿಳಾ ಸುರಕ್ಷತೆಗೆ ಬಲವಾದ ಪೊಲೀಸ್ ವ್ಯವಸ್ಥೆ: ಅಸಭ್ಯ ವರ್ತನೆಗೆ ಕಠಿಣ ಎಚ್ಚರಿಕೆ,.!

On: January 7, 2026 7:01 PM
Follow Us:

ಶಿವಮೊಗ್ಗ: ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ಹಾಗೂ ಶಿವಮೊಗ್ಗ ನಗರ ಮತ್ತು ಹೊರವಲಯದಲ್ಲಿ ಸಮಾಜಘಾತುಕ ಶಕ್ತಿಗಳ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ‘ಅಕ್ಕ ಪಡೆ’ಯನ್ನು ರಚಿಸಲಾಗಿದ್ದು, ಇಂದು ಬೆಳಗ್ಗೆ ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಅದಕ್ಕೆ ವಿದ್ಯುಕ್ತ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಖಿಲ್ ಬಿ, ಹಾಗೂ ಸಂತೋಷ್ ಎಂ.ಎಸ್, ಮಾನ್ಯ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿವಮೊಗ್ಗ ರವರು ಅಕ್ಕ ಪಡೆಗೆ ಅಧಿಕೃತವಾಗಿ ಚಾಲನೆ ನೀಡಿ ಶುಭಹಾರೈಸಿದರು.

ಅಕ್ಕ ಪಡೆಗೆ ನಿಯೋಜಿಸಲಾದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಬಸ್ ನಿಲ್ದಾಣ, ಮಾರುಕಟ್ಟೆ, ದೇವಸ್ಥಾನ, ಉದ್ಯಾನವನಗಳು ಸೇರಿದಂತೆ ಜನಸಂಚಾರ ಹೆಚ್ಚಿರುವ ಪ್ರದೇಶಗಳಲ್ಲಿ ನಿರಂತರ ಗಸ್ತು ನಡೆಸಲಿದ್ದಾರೆ. ಅದರೊಂದಿಗೆ ಶಾಲಾ–ಕಾಲೇಜುಗಳು ಆರಂಭವಾಗುವ ಮತ್ತು ಮುಕ್ತಾಯವಾಗುವ ಸಮಯದಲ್ಲಿ, ಲೇಡಿಸ್ ಹಾಸ್ಟೇಲ್‌ಗಳ ಸುತ್ತಮುತ್ತ ವಿಶೇಷ ನಿಗಾ ವಹಿಸಲಾಗುತ್ತದೆ. ಮಹಿಳೆಯರು ಹಾಗೂ ಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸುವವರ ಮೇಲೆ ತಕ್ಷಣದ ಕ್ರಮ ಜರುಗಿಸಲಾಗುವ ಮೂಲಕ ತಪ್ಪಿತಸ್ಥರಿಗೆ ಕಠಿಣ ಸಂದೇಶ ರವಾನಿಸಲಾಗುತ್ತದೆ.

ಅಕ್ಕ ಪಡೆಗೆ ನಿಯೋಜಿಸಲಾದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಬಸ್ ನಿಲ್ದಾಣ, ಮಾರುಕಟ್ಟೆ, ದೇವಸ್ಥಾನ, ಉದ್ಯಾನವನಗಳು ಸೇರಿದಂತೆ ಜನಸಂಚಾರ ಹೆಚ್ಚಿರುವ ಪ್ರದೇಶಗಳಲ್ಲಿ ನಿರಂತರ ಗಸ್ತು ನಡೆಸಲಿದ್ದಾರೆ. ಅದರೊಂದಿಗೆ ಶಾಲಾ–ಕಾಲೇಜುಗಳು ಆರಂಭವಾಗುವ ಮತ್ತು ಮುಕ್ತಾಯವಾಗುವ ಸಮಯದಲ್ಲಿ, ಲೇಡಿಸ್ ಹಾಸ್ಟೇಲ್‌ಗಳ ಸುತ್ತಮುತ್ತ ವಿಶೇಷ ನಿಗಾ ವಹಿಸಲಾಗುತ್ತದೆ. ಮಹಿಳೆಯರು ಹಾಗೂ ಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸುವವರ ಮೇಲೆ ತಕ್ಷಣದ ಕ್ರಮ ಜರುಗಿಸಲಾಗುವ ಮೂಲಕ ತಪ್ಪಿತಸ್ಥರಿಗೆ ಕಠಿಣ ಸಂದೇಶ ರವಾನಿಸಲಾಗುತ್ತದೆ.

ಈ ಹೊಸ ವ್ಯವಸ್ಥೆಯಿಂದ ಮಹಿಳೆಯರಿಗೆ ಆತ್ಮವಿಶ್ವಾಸ ಹೆಚ್ಚಾಗಲಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಸುರಕ್ಷತೆಯ ಭರವಸೆ ಮೂಡಲಿದೆ. ವಿದ್ಯಾರ್ಥಿನಿಯರು, ಕೆಲಸಕ್ಕೆ ತೆರಳುವ ಮಹಿಳೆಯರು ಹಾಗೂ ಮನೆಮಂದಿಯವರು ಯಾವುದೇ ಆತಂಕವಿಲ್ಲದೆ ಸಂಚರಿಸುವಂತ ವಾತಾವರಣ ನಿರ್ಮಾಣವಾಗಲಿದೆ. ಅಷ್ಟೇ ಅಲ್ಲದೆ, ಅಪರಾಧಗಳಿಗೆ ಅವಕಾಶವೇ ಇಲ್ಲದಂತೆ ಮುನ್ನೆಚ್ಚರಿಕಾ ಕ್ರಮಗಳ ಮೂಲಕ ಸಮಾಜದಲ್ಲಿ ಶಿಸ್ತು ಮತ್ತು ಕಾನೂನು ಗೌರವ ಹೆಚ್ಚುವ ನಿರೀಕ್ಷೆಯಿದೆ.

ಒಟ್ಟಾರೆ, ಶಿವಮೊಗ್ಗ ನಗರದಲ್ಲಿ ಅಕ್ಕ ಪಡೆ ಪ್ರಾರಂಭವಾಗಿರುವುದು ಮಹಿಳಾ ಸುರಕ್ಷತೆಗಾಗಿ ಕೈಗೊಳ್ಳಲಾದ ಮಹತ್ವದ ಹೆಜ್ಜೆಯಾಗಿದ್ದು, ಇನ್ನುಮುಂದೆ ಅಸಭ್ಯ ವರ್ತನೆಗೆ ತೊಡಗುವವರಿಗೆ ಇದು ಸ್ಪಷ್ಟ ಎಚ್ಚರಿಕೆಯಾಗಿದೆ. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಪೊಲೀಸರು ಯಾವುದೇ ಸಡಿಲಿಕೆ ತೋರದೆ ಕ್ರಮ ಕೈಗೊಳ್ಳಲಿದ್ದಾರೆ ಎಂಬ ಸಂದೇಶವನ್ನು ಅಕ್ಕ ಪಡೆ ಬಲವಾಗಿ ಸಾರುತ್ತಿದೆ.

K.M.Sathish Gowda

Join WhatsApp

Join Now

Facebook

Join Now

Read more

ಯುವಕರು ಸಂಘಟಿತರಾಗಿ ನಾರಾಯಣ ಗುರುಗಳ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲಿ: ಸಚಿವ ಮಧು ಬಂಗಾರಪ್ಪ

ಧರ್ಮ, ಪರಂಪರೆ ಹಾಗೂ ಮಠಮಾನ್ಯಗಳ ಸಂರಕ್ಷಣೆಗೆ ಸಂಘಟಿತ ಪ್ರಯತ್ನ ಅಗತ್ಯ: ಭಿನ್ನಾಭಿಪ್ರಾಯ ಬದಿಗಿಟ್ಟು ಸಮಾಜದ ಹಿತಕ್ಕಾಗಿ ಒಂದಾಗ ಬೇಕು: ವೀರಶೈವ ಲಿಂಗಾಯತ ಸಮಾಜದ ಒಗ್ಗಟ್ಟು ಕಾಪಾಡುವುದು ಎಲ್ಲರ ಜವಾಬ್ದಾರಿ: ಬಿ.ವೈ. ವಿಜಯೇಂದ್ರ

ಭಕ್ತಿಯ ಮಹಾಪ್ರವಾಹದಲ್ಲಿ ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಲಕ್ಷಾಂತರ ಜನರ ಸಾಕ್ಷಿ! ಕಾಲಿಡಲೂ ಜಾಗವಿಲ್ಲ, ಬಾನಂಗಳದಲ್ಲಿ ಜೈಕಾರ! ಶಿವಮೊಗ್ಗದಲ್ಲಿ ಮೈ ನವಿರೇಳಿಸಿದ ಗಣೇಶೋತ್ಸವದ ಅದ್ಧೂರಿ ಮೆರವಣಿಗೆ!

ಸೆ.26-27ರಂದು ಬೆಂಗಳೂರಿನಲ್ಲಿ ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಮಹಾಸಮ್ಮೇಳನ: ಪಂಚಪೀಠಾಧೀಶರ ಸಾನ್ನಿಧ್ಯ

ಶಿವಮೊಗ್ಗ ಹಿಂದೂ ಗಣಪತಿ ಮೆರವಣಿಗೆಗೆ ಭಕ್ತಿಯ ಸಾಥ್: ಐದು ಸಾವಿರ ಭಕ್ತರಿಗೆ ಅನ್ನದಾಸೋಹ: ಮೂರನೇ ವರ್ಷವೂ ಸೇವಾ ಪರಂಪರೆ ಮುಂದುವರಿಸಿದ ಎಸ್‌ಆರ್‌ವಿ ಎಂಟರ್‌ಪ್ರೈಸಸ್ ಗೆಳೆಯರ ಬಳಗ

50 ವರ್ಷಗಳ ದಾಂಪತ್ಯ ಜೀವನ ಸಮಾಜಕ್ಕೆ ಮಾದರಿ: ಸಂಸ್ಕಾರ, ಶಿಕ್ಷಣದೊಂದಿಗೆ ಬದುಕು ಕಟ್ಟಿಕೊಳ್ಳಿ: ತಾಯ್ನಾಡಿಗೆ ಮರಳಿ ಸೇವೆ ಸಲ್ಲಿಸಿ ಎಂದು ವಿದ್ಯಾರ್ಥಿಗಳಿಗೆ ಕೆ.ಈ. ಕಾಂತೇಶ್ ಕರೆ

Leave a Comment