ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಯುವಜನತೆಗೆ ಶರಣಸಂಸ್ಕೃತಿ ತಲುಪಿಸಲು ವಚನ ಗಾಯನ ಸ್ಪರ್ಧೆ: ರಾಜಶೇಖರ್ ಹೆಚ್.ಕೆ.

On: January 15, 2026 6:45 PM
Follow Us:

ಶಿವಮೊಗ್ಗ: ಇಂದಿನ ತಂತ್ರಜ್ಞಾನಾಧಾರಿತ ಜೀವನ ಶೈಲಿಯಲ್ಲಿ ಯುವಜನತೆ ಹಳೆಯ ಸಂಸ್ಕೃತಿ, ಆಚಾರ-ವಿಚಾರಗಳು ಹಾಗೂ ಶರಣ ಸಂಸ್ಕೃತಿ ಯಿಂದ ನಿಧಾನವಾಗಿ ದೂರವಾಗುತ್ತಿರುವುದು ಸಮಾಜದ ಮುಂದಿರುವ ದೊಡ್ಡ ಸವಾಲಾಗಿದೆ. ಇಂತಹ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಸಮಾಜದ ಮೂಲ ಮೌಲ್ಯಗಳಾದ ವಚನ ಸಾಹಿತ್ಯ, ಗುರುಪರಂಪರೆ ಮತ್ತು ಶರಣರ ತತ್ವಚಿಂತನೆಯನ್ನು ಯುವ ಮನಸ್ಸುಗಳಿಗೆ ತಲುಪಿಸುವ ಉದ್ದೇಶದಿಂದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ (ರಿ), ಮಹಾನಗರ ಪಾಲಿಕೆ ಘಟಕ ಹಾಗೂ ಜಿಲ್ಲಾ ಮಾಧ್ಯಮ ಘಟಕ, ಶಿವಮೊಗ್ಗ ಇವರ ಸಹಯೋಗದಲ್ಲಿ ವಚನ ಗಾಯನ ಸ್ಪರ್ಧೆ ಹಾಗೂ ಸಮಾಜದ ಪ್ರತಿಭಾನ್ವಿತರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಹಾನಗರ ಪಾಲಿಕೆ ಘಟಕದ ಅಧ್ಯಕ್ಷ ರಾಜಶೇಖರ್ ಹೆಚ್.ಕೆ. ತಿಳಿಸಿದ್ದಾರೆ.

ಈ ಕಾರ್ಯಕ್ರಮವು ಜನವರಿ 18, 2026 ಭಾನುವಾರ ಬೆಳಗ್ಗೆ 10 ಗಂಟೆಗೆ ಶಿವಮೊಗ್ಗ ನಗರದ ವೆಂಕಟೇಶ ನಗರದಲ್ಲಿರುವ ಬಸವ ಕೇಂದ್ರದಲ್ಲಿ ನಡೆಯಲಿದೆ. ವಚನ ಗಾಯನ ಸ್ಪರ್ಧೆಯ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮಾಜದ ಸಾಧಕರನ್ನು ಗೌರವಿಸುವ ಕಾರ್ಯವನ್ನು ಕೂಡ ಈ ಸಮಾರಂಭದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ವಚನ ಸಾಹಿತ್ಯವು ಕೇವಲ ಧಾರ್ಮಿಕ ಪಠ್ಯವಷ್ಟೇ ಅಲ್ಲ; ಅದು ಸಮಾಜ ಪರಿವರ್ತನೆಯ ಶಕ್ತಿಯುತ ಸಾಧನವಾಗಿದೆ. ಶರಣರು ನೀಡಿದ ವಚನಗಳು ಸಮಾನತೆ, ಕಾಯಕ, ದಾಸೋಹ ಮತ್ತು ಮಾನವೀಯ ಮೌಲ್ಯಗಳನ್ನು ಸಾರುತ್ತವೆ. ಇಂತಹ ಅಮೂಲ್ಯ ವಿಚಾರಧಾರೆ ಇವತ್ತಿನ ಯುವ ಸಮಾಜಕ್ಕೆ ತಲುಪಬೇಕಾದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ವಚನ ಗಾಯನ ಸ್ಪರ್ಧೆಯನ್ನು ಆಯೋಜಿಸುವ ಮೂಲಕ ಯುವಜನತೆಯಲ್ಲಿ ಸಂಸ್ಕೃತಿ ಕುರಿತು ಆಸಕ್ತಿ ಬೆಳೆಸುವ ಪ್ರಯತ್ನ ಮಾಡಲಾಗಿದೆ ಎಂದು ರಾಜಶೇಖರ್ ಹೆಚ್.ಕೆ. ಅಭಿಪ್ರಾಯಪಟ್ಟರು.

ಕಾರ್ಯಕ್ರಮವನ್ನು ಬಿ.ವೈ. ರಾಘವೇಂದ್ರ, ಲೋಕಸಭಾ ಸದಸ್ಯರು, ಶಿವಮೊಗ್ಗ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ನಿರ್ದೇಶಕರು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜಶೇಖರ್ ಹೆಚ್.ಕೆ., ಅಧ್ಯಕ್ಷರು, ಮಹಾನಗರ ಪಾಲಿಕೆ ಘಟಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ (ರಿ), ಶಿವಮೊಗ್ಗ ವಹಿಸಲಿದ್ದಾರೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ
ಎಸ್. ರುದ್ರೇಗೌಡ್ರು, ಮಾಜಿ ಶಾಸಕರು, ವಿಧಾನ ಪರಿಷತ್, ರುದ್ರಮುನಿ ಎನ್. ಸಜ್ಜನ್, ಅಧ್ಯಕ್ಷರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ಶಿವಮೊಗ್ಗ, ಬೆನಕಪ್ಪ, ಅಧ್ಯಕ್ಷರು, ಬಸವ ಕೇಂದ್ರ, ಶಿವಮೊಗ್ಗ, ಹೆಚ್.ಸಿ. ಯೋಗೇಶ್, ಮಾಜಿ ವಿರೋಧ ಪಕ್ಷದ ನಾಯಕರು, ಮಹಾನಗರ ಪಾಲಿಕೆ, ಶಿವಮೊಗ್ಗ ಇವರು ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಅರುಣ್ ವಿ.ಟಿ. (ಉಪಾಧ್ಯಕ್ಷರು, ಮಹಾನಗರ ಪಾಲಿಕೆ ಘಟಕ), ಉಮೇಶ್ ಕತ್ತಿಗೆ (ಪ್ರಧಾನ ಕಾರ್ಯದರ್ಶಿ) ತೇಜಸ್ವಿ ಬಿ.ಇ. (ಖಜಾಂಚಿ, ಮಹಾನಗರ ಪಾಲಿಕೆ ಘಟಕ), ಅನಿಲ್ ಕುಮಾರ್ ಸಿ. ಪಾಟೀಲ್ (ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಯುವ ಘಟಕ) ಹಾಗೂ ಸತೀಶ್ ಮುಂಚೆಮನೆ (ಖಜಾಂಚಿ, ಜಿಲ್ಲಾ ಮಾಧ್ಯಮ ಘಟಕ) ಇವರು ಉಪಸ್ಥಿತರಿರುತ್ತಾರೆ.

ಪ್ರತಿಭಾನ್ವಿತರಿಗೆ ಸನ್ಮಾನ

ಈ ಸಂದರ್ಭದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಶರಣ ಕಾಯಕ ರತ್ನ ಪ್ರಶಸ್ತಿ ಪುರಸ್ಕೃತ ಶ್ರೀ ಸಿ.ಎಸ್. ಷಡಾಕ್ಷರಿ, ಶ್ರೀಮತಿ ಡಾ. ಸಿ. ನಂದಿನಿ ಪ್ರವೀಣ್, ಕು. ಲಲಿತೇಶ್ವರಿ ಕೆ.ಎಸ್., ಕು. ಅದಿತಿ ರಾಜೇಶ್ ಅವರನ್ನು ಸನ್ಮಾನಿಸಲಾಗುವುದು. ಸಾಧಕರನ್ನು ಗೌರವಿಸುವ ಮೂಲಕ ಯುವಜನತೆಗೆ ಪ್ರೇರಣೆಯಾಗಬೇಕು ಎಂಬುದೇ ನಮ್ಮ ಆಶಯವಾಗಿದೆ ಎಂದು ಅವರು ಹೇಳಿದರು.

ಸಂಜೆ ಸಮಾರೋಪ ಹಾಗೂ ಬಹುಮಾನ ವಿತರಣೆ

ವಚನ ಗಾಯನ ಸ್ಪರ್ಧೆಯ ಸಮಾರೋಪ ಹಾಗೂ ಬಹುಮಾನ ವಿತರಣೆ ಸಮಾರಂಭವು ಅದೇ ದಿನ ಸಂಜೆ 4 ಗಂಟೆಗೆ ಶಿವಮೊಗ್ಗ ನಗರದ ವೆಂಕಟೇಶ ನಗರದಲ್ಲಿರುವ ಬಸವ ಕೇಂದ್ರದಲ್ಲೇ ನಡೆಯಲಿದೆ. ಈ ಸಂದರ್ಭದಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿದ ಪ್ರತಿಭಾನ್ವಿತರಿಗೆ ಬಹುಮಾನ ವಿತರಿಸಲಾಗುತ್ತದೆ. ಬಹುಮಾನ ವಿತರಣೆಯನ್ನು ಸಿ.ಎಸ್. ಷಡಾಕ್ಷರಿ, ಅಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಅವರು ನೆರವೇರಿಸಲಿದ್ದಾರೆ.

ಈ ಸಮಾರಂಭದ ಅಧ್ಯಕ್ಷತೆಯನ್ನು ಸೋಮನಾಥ್ ಕೆ.ಆರ್., ಅಧ್ಯಕ್ಷರು, ಜಿಲ್ಲಾ ಮಾಧ್ಯಮ ಘಟಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವಹಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಎಸ್.ಎಸ್. ಜ್ಯೋತಿಪ್ರಕಾಶ್, ಅಧ್ಯಕ್ಷರು, ಬಸವೇಶ್ವರ ವೀರಶೈವ ಲಿಂಗಾಯತ ಸಮಾಜ ಸೇವಾ ಸಂಘ, ಶಿವಮೊಗ್ಗ, ಎಸ್.ಪಿ. ದಿನೇಶ್, ಗೌರವ ಕಾರ್ಯದರ್ಶಿ, ಬಸವೇಶ್ವರ ವೀರಶೈವ ಲಿಂಗಾಯತ ಸಮಾಜ ಸೇವಾ ಸಂಘ, ಶಿವಮೊಗ್ಗ, ಬಳ್ಳೆಕೆರೆ ಸಂತೋಷ್, ಪ್ರಧಾನ ಕಾರ್ಯದರ್ಶಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ, ಶಿವಮೊಗ್ಗ ಹಾಗೂ ಶ್ರೀಮತಿ ವಾಗ್ಗೇವಿ ಬಸವರಾಜ್, ಅಧ್ಯಕ್ಷರು, ಜಿಲ್ಲಾ ಮಹಿಳಾ ಘಟಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಇವರು ಪಾಲ್ಗೊಳ್ಳಲಿದ್ದಾರೆ.

ಶರಣಸಂಸ್ಕೃತಿ ಯುವಜನತೆಗೆ ತಲುಪಿಸುವ ಪ್ರಯತ್ನ

ಹಿಂದಿನ ಕಾಲದಲ್ಲಿ ವೀರಶೈವ ಲಿಂಗಾಯತ ಧರ್ಮವು ಸಮಾಜ ಸುಧಾರಣೆಯಲ್ಲಿ ಮಹತ್ವದ ಪಾತ್ರ ವಹಿಸಿದೆ. ಇಂದಿನ ಕಾಲದಲ್ಲಿ ವ್ಯವಸ್ಥೆಗಳು ಬದಲಾಗಿದ್ದರೂ, ಮೌಲ್ಯಗಳು ಜೀವಂತವಾಗಿರಬೇಕು. ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಿದಾಗ ಮಾತ್ರ ಸಮಾಜದ ಯುವಜನತೆಗೆ ದಿಕ್ಕು ನೀಡಲು ಸಾಧ್ಯವಾಗುತ್ತದೆ. ಈ ಕಾರ್ಯಕ್ರಮವು ಶರಣಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಜೊತೆಗೆ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲಿದೆ ಎಂಬ ವಿಶ್ವಾಸವಿದೆ ಎಂದು ರಾಜಶೇಖರ್ ಹೆಚ್.ಕೆ. ಅವರು ತಿಳಿಸಿದ್ದಾರೆ.

K.M.Sathish Gowda

Join WhatsApp

Join Now

Facebook

Join Now

Read more

ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಆಯುರ್ವೇದ ಮಹತ್ವದ ಪಾತ್ರ ವಹಿಸುತ್ತದೆ: ಶ್ರೀ ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ

ಹುತಾತ್ಮ ಯೋಧರ ಪತ್ನಿಯ ತ್ಯಾಗವೇ ಶ್ರೇಷ್ಠತೆ: ತರಳಬಾಳು ಜಗದ್ಗುರುಗಳ ಹೃದಯಸ್ಪರ್ಶಿ ಸಂದೇಶ

ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ವೈಯಕ್ತಿಕ–ಕುಟುಂಬ ನಿಂದನೆಗೆ ತೆರೆ ಎಳೆಯಲು ರಾಜಕೀಯ ನಾಯಕರಿಗೆ ಜಗದ್ಗುರುಗಳ ಖಡಕ್ ಸೂಚನೆ,.!

ಬೆಳ್ಳಿ ಪಲ್ಲಕ್ಕಿಯಲ್ಲಿ ಜಗದ್ಗುರುಗಳ ದರ್ಶನ: ಭದ್ರಾವತಿಯಲ್ಲಿ ತರಳಬಾಳು ಹುಣ್ಣಿಮೆಯ ವೈಭವ, ಲಕ್ಷಾಂತರ ಭಕ್ತರ ಸಮಾಗಮ

ತರಳಬಾಳು ಹುಣ್ಣಿಮೆ ಮಹೋತ್ಸವ 2026: ‘ಮನೆಯೊಳಗೆ ಧರ್ಮ, ಹೊರಗೆ ಸಂವಿಧಾನ’ – ನ್ಯಾಯಮೂರ್ತಿ ಶ್ರೀಶಾನಂದ ಸಂದೇಶ

ತರಳಬಾಳು ಹುಣ್ಣಿಮೆ ಮಹೋತ್ಸವ 2026: ಸಮೂಹ ಮಾಧ್ಯಮ ಸಮಾಜದ ದಿಕ್ಕು ನಿರ್ಧರಿಸುವ ಶಕ್ತಿಯಾಗಿದೆ: ಸಿ.ಎಸ್. ಷಡಾಕ್ಷರಿ

Leave a Comment