ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

NPS ವಿರುದ್ಧ ಹೋರಾಟಕ್ಕೆ ಮತ್ತಷ್ಟು ಬಲ: “ನೌಕರರಿಗೆ ನ್ಯಾಯ ಸಿಗುವವರೆಗೂ ಹೋರಾಟ ನಿರಂತರ” – ಸಿ.ಎಸ್. ಷಡಾಕ್ಷರಿ ಭರವಸೆ

On: January 18, 2026 10:22 PM
Follow Us:

ದಾವಣಗೆರೆಯಲ್ಲಿ ಅಖಿಲ ಕರ್ನಾಟಕ NPS ನೌಕರರ ಸಂಘದ 2ನೇ ರಾಜ್ಯ ಕಾರ್ಯಕಾರಿಣಿ ಸಭೆ

ದಾವಣಗೆರೆ: ಅಖಿಲ ಕರ್ನಾಟಕ NPS ನೌಕರರ ಸಂಘ, ಬೆಂಗಳೂರು ಇವರ ವತಿಯಿಂದ 2ನೇ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ದಾವಣಗೆರೆಯಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ NPS ನೌಕರರ ಸಂಘದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಆಹ್ವಾನಿತ ಗಣ್ಯರು ಸಭೆಯಲ್ಲಿ ಭಾಗವಹಿಸಿ, ಹೊಸ ಪಿಂಚಣಿ ಯೋಜನೆ (NPS) ಯಿಂದ ಸರ್ಕಾರಿ ನೌಕರರು ಎದುರಿಸುತ್ತಿರುವ ಅನ್ಯಾಯ, ಆತಂಕ ಮತ್ತು ಭವಿಷ್ಯದ ಅಸ್ಥಿರತೆ ಕುರಿತು ಸುದೀರ್ಘ ಚರ್ಚೆ ನಡೆಸಿದರು.

ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ ಅವರು ಭಾಗವಹಿಸಿ, NPS ನೌಕರರ ಸಂಘದ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲವನ್ನು ಘೋಷಿಸಿದರು. ಮಾತನಾಡಿದ ಅವರು, “ಸರ್ಕಾರಿ ನೌಕರರ ಜೀವನ ಭದ್ರತೆಯೇ ಆಡಳಿತ ವ್ಯವಸ್ಥೆಯ ಶಕ್ತಿ. NPS ಯೋಜನೆಯಿಂದ ನೌಕರರ ನಿವೃತ್ತಿ ಜೀವನ ಅಸುರಕ್ಷಿತವಾಗಿದ್ದು, ಹಳೆಯ ಪಿಂಚಣಿ ಯೋಜನೆ (OPS) ಪುನಃ ಜಾರಿಯಾಗಬೇಕೆಂಬುದು ನೌಕರರ ನ್ಯಾಯಸಮ್ಮತ ಬೇಡಿಕೆ. ಈ ಹೋರಾಟದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಸದಾ ನಿಮ್ಮೊಂದಿಗೆ ನಿಲ್ಲಲಿದೆ” ಎಂದು ಭರವಸೆ ನೀಡಿದರು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ NPS ನೌಕರರ ಸಂಘದ ರಾಜ್ಯಾಧ್ಯಕ್ಷರಾದ ನಾಗನಗೌಡ ಎಂ.ಎ. ಅವರು ಮಾತನಾಡಿ, “NPS ವ್ಯವಸ್ಥೆ ನೌಕರರನ್ನು ಮಾರುಕಟ್ಟೆ ಆಧಾರಿತ ಅಪಾಯಕ್ಕೆ ಒಡ್ಡಿದೆ. ವರ್ಷಗಳ ಸೇವೆಯ ನಂತರವೂ ಖಚಿತ ಪಿಂಚಣಿ ಇಲ್ಲದಿರುವುದು ದೊಡ್ಡ ಅನ್ಯಾಯ. ಸಂಘಟಿತ ಹೋರಾಟದ ಮೂಲಕವೇ ಸರ್ಕಾರದ ಗಮನ ಸೆಳೆದು ನ್ಯಾಯ ಪಡೆಯಬೇಕು” ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷರಾದ ಎಸ್. ಬಸವರಾಜ, ಪ್ರಧಾನ ಕಾರ್ಯದರ್ಶಿಗಳಾದ ಚಂದ್ರಶೇಖರ, ಗೌರವ ಸಲಹೆಗಾರರಾದ ಎಂ.ವಿ. ರುದ್ರಪ್ಪ, ಕಾರ್ಯಾಧ್ಯಕ್ಷರಾದ ಸದಾನಂದ, ದಾವಣಗೆರೆ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ವೀರೇಶ್ ಒಡೆಯನಪುರ, ದೆಹಲಿಯ ಪ್ರತಿನಿಧಿ ದೇವರಾಜ್ ಸೇರಿದಂತೆ ಅನೇಕ ನಾಯಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಅಂತರರಾಜ್ಯ ಮಟ್ಟದ ಬೆಂಬಲವನ್ನು ಸೂಚಿಸುವಂತೆ ತಮಿಳುನಾಡು ರಾಜ್ಯದ ಪ್ರತಿನಿಧಿಗಳಾದ ಸೆಲ್ವಕುಮಾರ್ ಹಾಗೂ ಪ್ರೇಡ್ರಿಕ್ ಏಂಜಲ್ ಅವರು ಭಾಗವಹಿಸಿ, NPS ವಿರುದ್ಧ ದೇಶವ್ಯಾಪಿ ಹೋರಾಟಕ್ಕೆ ಒಗ್ಗಟ್ಟಿನ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಸಭೆಯಲ್ಲಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಹೋರಾಟದ ರೂಪರೇಷು, ಸರ್ಕಾರದೊಂದಿಗೆ ಚರ್ಚೆ, ಪ್ರತಿಭಟನೆ, ಮನವಿ ಹಾಗೂ ಕಾನೂನು ಹೋರಾಟ ಸೇರಿದಂತೆ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. NPS ನೌಕರರಿಗೆ ನ್ಯಾಯ ಸಿಗುವವರೆಗೂ ಹೋರಾಟವನ್ನು ನಿಲ್ಲಿಸಬಾರದು ಎಂಬ ಒಗ್ಗಟ್ಟಿನ ಸಂಕಲ್ಪವನ್ನು ಸಭೆ ವ್ಯಕ್ತಪಡಿಸಿತು.

ಒಟ್ಟಾರೆ, ದಾವಣಗೆರೆಯಲ್ಲಿ ನಡೆದ ಈ ರಾಜ್ಯ ಕಾರ್ಯಕಾರಿಣಿ ಸಭೆ NPS ನೌಕರರ ಹೋರಾಟಕ್ಕೆ ಹೊಸ ಉತ್ಸಾಹ, ಆತ್ಮವಿಶ್ವಾಸ ಹಾಗೂ ದಿಕ್ಕು ನೀಡಿದ್ದು, “ನ್ಯಾಯ ಖಂಡಿತ ಸಿಗುತ್ತದೆ” ಎಂಬ ಭರವಸೆಯ ಸಂದೇಶವನ್ನು ರಾಜ್ಯದಾದ್ಯಂತ ಕಳುಹಿಸಿತು.

K.M.Sathish Gowda

Join WhatsApp

Join Now

Facebook

Join Now

Read more

ಯುವಕರು ಸಂಘಟಿತರಾಗಿ ನಾರಾಯಣ ಗುರುಗಳ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲಿ: ಸಚಿವ ಮಧು ಬಂಗಾರಪ್ಪ

ಧರ್ಮ, ಪರಂಪರೆ ಹಾಗೂ ಮಠಮಾನ್ಯಗಳ ಸಂರಕ್ಷಣೆಗೆ ಸಂಘಟಿತ ಪ್ರಯತ್ನ ಅಗತ್ಯ: ಭಿನ್ನಾಭಿಪ್ರಾಯ ಬದಿಗಿಟ್ಟು ಸಮಾಜದ ಹಿತಕ್ಕಾಗಿ ಒಂದಾಗ ಬೇಕು: ವೀರಶೈವ ಲಿಂಗಾಯತ ಸಮಾಜದ ಒಗ್ಗಟ್ಟು ಕಾಪಾಡುವುದು ಎಲ್ಲರ ಜವಾಬ್ದಾರಿ: ಬಿ.ವೈ. ವಿಜಯೇಂದ್ರ

ಭಕ್ತಿಯ ಮಹಾಪ್ರವಾಹದಲ್ಲಿ ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಲಕ್ಷಾಂತರ ಜನರ ಸಾಕ್ಷಿ! ಕಾಲಿಡಲೂ ಜಾಗವಿಲ್ಲ, ಬಾನಂಗಳದಲ್ಲಿ ಜೈಕಾರ! ಶಿವಮೊಗ್ಗದಲ್ಲಿ ಮೈ ನವಿರೇಳಿಸಿದ ಗಣೇಶೋತ್ಸವದ ಅದ್ಧೂರಿ ಮೆರವಣಿಗೆ!

ಸೆ.26-27ರಂದು ಬೆಂಗಳೂರಿನಲ್ಲಿ ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಮಹಾಸಮ್ಮೇಳನ: ಪಂಚಪೀಠಾಧೀಶರ ಸಾನ್ನಿಧ್ಯ

ಶಿವಮೊಗ್ಗ ಹಿಂದೂ ಗಣಪತಿ ಮೆರವಣಿಗೆಗೆ ಭಕ್ತಿಯ ಸಾಥ್: ಐದು ಸಾವಿರ ಭಕ್ತರಿಗೆ ಅನ್ನದಾಸೋಹ: ಮೂರನೇ ವರ್ಷವೂ ಸೇವಾ ಪರಂಪರೆ ಮುಂದುವರಿಸಿದ ಎಸ್‌ಆರ್‌ವಿ ಎಂಟರ್‌ಪ್ರೈಸಸ್ ಗೆಳೆಯರ ಬಳಗ

50 ವರ್ಷಗಳ ದಾಂಪತ್ಯ ಜೀವನ ಸಮಾಜಕ್ಕೆ ಮಾದರಿ: ಸಂಸ್ಕಾರ, ಶಿಕ್ಷಣದೊಂದಿಗೆ ಬದುಕು ಕಟ್ಟಿಕೊಳ್ಳಿ: ತಾಯ್ನಾಡಿಗೆ ಮರಳಿ ಸೇವೆ ಸಲ್ಲಿಸಿ ಎಂದು ವಿದ್ಯಾರ್ಥಿಗಳಿಗೆ ಕೆ.ಈ. ಕಾಂತೇಶ್ ಕರೆ

Leave a Comment