ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಸಿ.ಎಸ್. ಷಡಾಕ್ಷರಿ ನೇತೃತ್ವದಲ್ಲಿ ಸರ್ಕಾರಿ ನೌಕರರ ಬೇಡಿಕೆ ಮಂಡನೆ: ಶೀಘ್ರ ಆದೇಶಕ್ಕೆ ಆರ್ಥಿಕ ಇಲಾಖೆಯ ಸ್ಪಂದನೆ

On: January 19, 2026 6:52 PM
Follow Us:

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ ಅವರ ನೇತೃತ್ವದ ನಿಯೋಗವು ಇಂದು ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳಾದ ಡಾ. ಪಿ.ಸಿ. ಜಾಫರ್ ಅವರನ್ನು ಭೇಟಿ ಮಾಡಿ, ಸರ್ಕಾರಿ ನೌಕರರಿಗೆ ಸಂಬಂಧಿಸಿದ ಮಹತ್ವದ ಬೇಡಿಕೆಗಳು ಹಾಗೂ ಆರ್ಥಿಕ ವಿಷಯಗಳ ಕುರಿತು ಸವಿಸ್ತಾರ ಚರ್ಚೆ ನಡೆಸಿತು.

ಸರ್ಕಾರಿ ನೌಕರರ ವೇತನ, ನಿವೃತ್ತಿ ಸೌಲಭ್ಯಗಳು, ವೈದ್ಯಕೀಯ ವೆಚ್ಚ ಹಾಗೂ ವರ್ಗಾವಣೆ ಸಂದರ್ಭದಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ಸಂಘದ ವತಿಯಿಂದ ಮನವಿ ಸಲ್ಲಿಸಲಾಗಿದ್ದು, ಈ ಎಲ್ಲ ವಿಷಯಗಳಿಗೂ ಆರ್ಥಿಕ ಇಲಾಖೆ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಸಿ.ಎಸ್.ಷಡಾಕ್ಷರಿ ಹೇಳಿದರು.

ಸಿ.ಜಿ.ಹೆಚ್.ಎಸ್ ದರ ಪರಿಷ್ಕರಣೆ ಕುರಿತು ಸ್ಪಷ್ಟ ಭರವಸೆ

2025ನೇ ಸಾಲಿನ ಹೊಸ CGHS ದರಗಳನ್ನು ರಾಜ್ಯದಲ್ಲಿ ಜಾರಿಗೆ ತರಲು ಸಂಬಂಧಿಸಿದ ಕಡತವು ಈಗಾಗಲೇ ಆರ್ಥಿಕ ಇಲಾಖೆಯಲ್ಲಿ ಪರಿಶೀಲನೆಯಲ್ಲಿದ್ದು, ಶೀಘ್ರವಾಗಿ ಅನುಮೋದನೆ ನೀಡಿ ಅಧಿಕೃತ ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಕಾರ್ಯದರ್ಶಿಗಳು ಭರವಸೆ ನೀಡಿದ್ದಾರೆ. ಇದರಿಂದ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರಿಗೆ ವೈದ್ಯಕೀಯ ವೆಚ್ಚದ ಭಾರ ಗಣನೀಯವಾಗಿ ಕಡಿಮೆಯಾಗಲಿದೆ ಎಂದು ಷಡಾಕ್ಷರಿ ತಿಳಿಸಿದರು.

ನಿವೃತ್ತಿ ಪೂರ್ವ ಕಾಲ್ಪನಿಕ ವೇತನ ಬಡ್ತಿ – ನೌಕರರ ದೀರ್ಘಕಾಲದ ಬೇಡಿಕೆ

ವಾರ್ಷಿಕ ವೇತನ ಬಡ್ತಿಗೆ ಕೇವಲ ಒಂದು ದಿನ ಮುನ್ನ ಜೂನ್ ಮತ್ತು ಡಿಸೆಂಬರ್ ತಿಂಗಳಲ್ಲಿ ನಿವೃತ್ತಿಯಾಗುವ ನೌಕರರಿಗೆ ಒಂದು ಕಾಲ್ಪನಿಕ ವಾರ್ಷಿಕ ವೇತನ ಬಡ್ತಿಯನ್ನು ಮಂಜೂರು ಮಾಡುವ ಪ್ರಸ್ತಾವನೆಯೂ ಆರ್ಥಿಕ ಇಲಾಖೆಯ ಪರಿಶೀಲನೆಯಲ್ಲಿದ್ದು, ಈ ಕುರಿತು ಈಗಾಗಲೇ ಸಭೆ ನಡೆದಿದೆ. ಶೀಘ್ರದಲ್ಲೇ ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳಲಿದೆ ಎಂಬ ಭರವಸೆಯನ್ನು ಕಾರ್ಯದರ್ಶಿಗಳು ನೀಡಿದ್ದಾರೆ ಎಂದು ಹೇಳಿದರು. ಇದು ಸಾವಿರಾರು ನಿವೃತ್ತ ನೌಕರರಿಗೆ ಆರ್ಥಿಕವಾಗಿ ಮಹತ್ವದ ಲಾಭ ನೀಡಲಿದೆ ಎಂದು ಷಡಾಕ್ಷರಿ ಅಭಿಪ್ರಾಯಪಟ್ಟರು.

ವರ್ಗಾವಣೆ ನಂತರ ವೇತನ ಬಾಕಿ ಸಮಸ್ಯೆಗೆ ಪರಿಹಾರ ನಿರೀಕ್ಷೆ

ಅಧಿಕಾರಿ ಅಥವಾ ನೌಕರರನ್ನು ಸ್ಥಳ ತೋರಿಸದೆ ವರ್ಗಾವಣೆ ಮಾಡಿದ ಸಂದರ್ಭದಲ್ಲಿ, ಮುಂದಿನ ಸ್ಥಳ ನಿಯುಕ್ತಿಗಾಗಿ ಸಕ್ಷಮ ಪ್ರಾಧಿಕಾರದಲ್ಲಿ ವರದಿ ಮಾಡಿಕೊಂಡರೂ ಹಲವಾರು ತಿಂಗಳು ವೇತನ ಪಾವತಿಯಾಗದೆ ಇರುವ ಸಮಸ್ಯೆಯನ್ನು ಸಂಘದ ವತಿಯಿಂದ ಗಮನಕ್ಕೆ ತರಲಾಗಿದೆ. ಇಂತಹ ನೌಕರರ ವೇತನವನ್ನು ಸೆಳೆಯಲು ಅನುಮತಿ ನೀಡಿ ಸೂಕ್ತ ಆದೇಶ ಹೊರಡಿಸುವಂತೆ ಮನವಿ ಮಾಡಲಾಗಿದ್ದು, ಈ ವಿಷಯಕ್ಕೂ ಆರ್ಥಿಕ ಇಲಾಖೆ ಸಹಾನುಭೂತಿಯಿಂದ ಸ್ಪಂದಿಸಿದೆ ಎಂದು ಷಡಾಕ್ಷರಿ ಹೇಳಿದರು.

ಶೀಘ್ರ ಸರ್ಕಾರಿ ಆದೇಶಗಳ ನಿರೀಕ್ಷೆ

ಮೇಲ್ಕಂಡ ಎಲ್ಲ ಬೇಡಿಕೆಗಳು ನ್ಯಾಯಸಮ್ಮತವಾಗಿದ್ದು, ಸರ್ಕಾರಿ ನೌಕರರ ಹಿತದೃಷ್ಟಿಯಿಂದ ಶೀಘ್ರದಲ್ಲೇ ಸಂಬಂಧಿಸಿದ ಅಧಿಕೃತ ಸರ್ಕಾರಿ ಆದೇಶಗಳನ್ನು ಹೊರಡಿಸಲಾಗುವುದು ಎಂಬ ಸ್ಪಷ್ಟ ಭರವಸೆಯನ್ನು ಆರ್ಥಿಕ ಇಲಾಖೆ ನೀಡಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಎಸ್. ಬಸವರಾಜು, ಶಂಭುಗೌಡ, ಉಪಾಧ್ಯಕ್ಷ ಮೋಹನ್ ಕುಮಾರ್, ಪ್ರಶಾಂತ್ ಕುಮಾರ್ ಸೇರಿದಂತೆ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸರ್ಕಾರದ ಸಕಾರಾತ್ಮಕ ಸ್ಪಂದನೆಗೆ ಸಂಘ ಸಂತಸ ವ್ಯಕ್ತಪಡಿಸಿದೆ.

ಸರ್ಕಾರಿ ನೌಕರರ ಆರ್ಥಿಕ ಭದ್ರತೆ, ಸೇವಾ ಗೌರವ ಹಾಗೂ ನಿವೃತ್ತಿ ನಂತರದ ಜೀವನದ ಭದ್ರತೆಗೆ ಈ ನಿರ್ಣಯಗಳು ಮಹತ್ವದ ಮೈಲಿಗಲ್ಲಾಗಲಿವೆ ಎಂದು ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ.

K.M.Sathish Gowda

Join WhatsApp

Join Now

Facebook

Join Now

Read more

‘ಕೊಟ್ಟ ಮಾತು ಉಳಿಯುತ್ತದೆಯೇ?’ – ಕಾಂಗ್ರೆಸ್ ಒಳಕಿಚ್ಚಿಗೆ ಸುರೇಶ್ ಮಾರ್ಮಿಕ ನುಡಿ, ಡಿಕೆಶಿ ದೆಹಲಿ ಪಯಣ ರಾಜಕೀಯ ಚರ್ಚೆ ತೀವ್ರ

“ಮೊದಲು ನಿಮ್ಮ ಹೈಕಮಾಂಡ್‌ ಹುಡುಕಿ, ಬಳಿಕ ಮೋದಿ ಬಗ್ಗೆ ಮಾತನಾಡಿ”: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ತೀವ್ರ ವಾಗ್ದಾಳಿ

ಪ್ಲಾಸ್ಟಿಕ್ ಮುಕ್ತ ಶಿವರಾತ್ರಿ ಉತ್ಸವಕ್ಕೆ ಹರಕೆರೆ ಹರಕೇಶ್ವರ ದೇವಸ್ಥಾನದಲ್ಲಿ ಸಂಕಲ್ಪ

ಜನಸೇವೆಗೆ ಬದ್ಧ ನಾಯಕತ್ವ: ಹಾರನಹಳ್ಳಿಯಲ್ಲಿ ಡಿ.ಎಸ್. ಅರುಣ್ ಅವರಿಂದ ಪಂಚಾಯಿತಿ ಕಟ್ಟಡ ಉದ್ಘಾಟನೆ ಹಾಗೂ ಹಕ್ಕುಪತ್ರ ವಿತರಣೆ

‘ಎಲ್ಲರೂ ಬಾಯಿ ಮುಚ್ಚಿಕೊಂಡಿರಬೇಕು’: ಕಾಂಗ್ರೆಸ್ ನಾಯಕರಿಗೆ ಡಿಕೆಶಿ ಖಡಕ್ ಸಂದೇಶ

ಜನಸಂಖ್ಯೆಗೆ ಅನುಗುಣವಾಗಿ ಎಸ್‌ಸಿ–ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ಕೇಂದ್ರದ ಮೇಲೆ ಒತ್ತಡ: ಮುಖ್ಯಮಂತ್ರಿ ಸಿದ್ದರಾಮಯ್ಯ

Leave a Comment