ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ದುಬಾರಿ ಬದುಕಿನ ನಡುವೆ ಬಡವರ ಮನೆ ಕನಸು ನನಸಾದ ಕ್ಷಣ: ಹುಬ್ಬಳ್ಳಿಯಲ್ಲಿ ಐತಿಹಾಸಿಕ ಮನೆ ವಿತರಣಾ ಸಮಾರಂಭ

On: January 24, 2026 6:03 PM
Follow Us:

ದುಬಾರಿ ಜೀವನ ವೆಚ್ಚದ ಈ ಕಾಲಘಟ್ಟದಲ್ಲಿ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಸ್ವಂತ ಮನೆ ಎಂಬುದು ಅಸಾಧ್ಯ ಕನಸಿನಂತಾಗಿತ್ತು. ಆದರೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೃಹ ಯೋಜನೆಗಳು ಅನೇಕ ನಿರಾಶ್ರಿತ ಕುಟುಂಬಗಳ ಬದುಕಿಗೆ ಹೊಸ ಭರವಸೆಯನ್ನು ತಂದಿವೆ. ಸ್ವಂತ ಸೂರು ದೊರೆತ ಸಂತಸದೊಂದಿಗೆ ಫಲಾನುಭವಿಗಳು ತಮ್ಮ ಬದುಕಿಗೆ ನೆಮ್ಮದಿ ಮರಳಿದೆಯೆಂದು ಅಭಿಪ್ರಾಯ ವ್ಯಕ್ತಪಡಿಸಿ, ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸಿದರು.

ಹುಬ್ಬಳ್ಳಿ: ವಸತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗೃಹಮಂಡಳಿ ಸಹಯೋಗದಲ್ಲಿ ಇಂದು ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಭವ್ಯ ಸಮಾರಂಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಿರ್ಮಿಸಲಾದ ಸಾವಿರಾರು ಮನೆಗಳನ್ನು ಅರ್ಹ ವಸತಿ ರಹಿತ ಕುಟುಂಬಗಳಿಗೆ ಹಸ್ತಾಂತರಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ಗೃಹಮಂಡಳಿ ವತಿಯಿಂದ ನಿರ್ಮಿಸಲಾದ 42,345 ಮನೆಗಳು ಹಾಗೂ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ವತಿಯಿಂದ ನಿರ್ಮಿಸಲಾದ 46,000 ಮನೆಗಳನ್ನು ಫಲಾನುಭವಿಗಳಿಗೆ ವಿತರಿಸಿ, ಹೊಸ ಸೂರಿನಡಿ ಸುಖ, ಶಾಂತಿ ಮತ್ತು ಭದ್ರ ಬದುಕು ಕಟ್ಟಿಕೊಳ್ಳುವಂತೆ ಶುಭಾಶಯ ಕೋರಿದರು.

ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷರೂ, ರಾಜ್ಯಸಭೆಯ ವಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಸಚಿವರಾದ ಸತೀಶ್ ಜಾರಕಿಹೊಳಿ, ಹೆಚ್.ಸಿ. ಮಹದೇವಪ್ಪ, ಹೆಚ್.ಕೆ. ಪಾಟೀಲ್, ಕೆ.ಹೆಚ್. ಮುನಿಯಪ್ಪ, ಸಂತೋಷ್ ಲಾಡ್, ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಪ್ರಸಾದ್ ಅಬ್ಬಯ್ಯ, ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್, ಸಲೀಂ ಅಹ್ಮದ್, ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು, ಮುಖಂಡರು ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಭಾಗವಹಿಸಿದ್ದರು.

ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಇತಿಹಾಸದಲ್ಲೇ ಅಪರೂಪದ ಈ ಕಾರ್ಯಕ್ರಮಕ್ಕೆ ಎರಡು ಲಕ್ಷಕ್ಕೂ ಅಧಿಕ ಜನಸ್ತೋಮ ಸಾಕ್ಷಿಯಾಯಿತು. ಸಮಾರಂಭಕ್ಕೆ ಆಗಮಿಸಿದ ಸಾರ್ವಜನಿಕರಿಗೆ ರುಚಿಕರ ಹಾಗೂ ಶುಚಿಯಾದ ಆಹಾರ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಅತ್ಯಂತ ಅಚ್ಚುಕಟ್ಟಾದ ಸಿದ್ಧತೆಗಳನ್ನು ಮಾಡಲಾಗಿತ್ತು. ಜನಸಂದಣಿ ಅಪಾರವಾಗಿದ್ದರೂ ಸಹ, ಆಹಾರ ವಿತರಣೆಯಲ್ಲಿ ಶಿಸ್ತು, ಸ್ವಚ್ಛತೆ ಮತ್ತು ವ್ಯವಸ್ಥಿತ ನಿರ್ವಹಣೆಗೆ ವಿಶೇಷ ಗಮನ ನೀಡಲಾಗಿತ್ತು.

ಬೆಳಗಿನ ಉಪಹಾರವಾಗಿ 30 ಸಾವಿರಕ್ಕೂ ಹೆಚ್ಚು ಜನರಿಗೆ ಉಪ್ಪಿಟ್ಟು ವಿತರಿಸಲಾಗಿದ್ದು, ನಂತರ ಮಧ್ಯಾಹ್ನದ ಊಟವಾಗಿ ಪಲಾವ್, ಮೊಸರನ್ನ, ಮೈಸೂರು ಪಾಕ್ ಹಾಗೂ ಸೇರುವಾ ನೀಡಲಾಯಿತು. ಒಟ್ಟಾರೆ 1.50 ಲಕ್ಷಕ್ಕೂ ಹೆಚ್ಚು ಜನರಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ 2 ಲಕ್ಷ ವಾಟರ್ ಬಾಟಲ್‌ಗಳ ವ್ಯವಸ್ಥೆ ಮಾಡಲಾಗಿತ್ತು. ಆಹಾರ ವಿತರಣೆಗೆ ಒಟ್ಟು 124 ಕೌಂಟರ್‌ಗಳನ್ನು ಸ್ಥಾಪಿಸಲಾಗಿದ್ದು, ಅಡುಗೆ ತಯಾರಿಕೆಗೆ 300 ಸಿಬ್ಬಂದಿ, ಊಟ ವಿತರಣೆಗೆ 200 ಸಿಬ್ಬಂದಿ ಹಾಗೂ ಸ್ವಚ್ಛತಾ ಕಾರ್ಯಕ್ಕಾಗಿ 150 ಕಾರ್ಮಿಕರನ್ನು ನಿಯೋಜಿಸಲಾಗಿತ್ತು. ಊಟದ ನಂತರ ಕೈ ತೊಳೆಯುವ ವ್ಯವಸ್ಥೆಗೆ 20 ನೀರಿನ ಟ್ಯಾಂಕರ್‌ಗಳನ್ನು ನಿಲ್ಲಿಸಲಾಗಿತ್ತು.

K.M.Sathish Gowda

Join WhatsApp

Join Now

Facebook

Join Now

Read more

‘ಕೊಟ್ಟ ಮಾತು ಉಳಿಯುತ್ತದೆಯೇ?’ – ಕಾಂಗ್ರೆಸ್ ಒಳಕಿಚ್ಚಿಗೆ ಸುರೇಶ್ ಮಾರ್ಮಿಕ ನುಡಿ, ಡಿಕೆಶಿ ದೆಹಲಿ ಪಯಣ ರಾಜಕೀಯ ಚರ್ಚೆ ತೀವ್ರ

“ಮೊದಲು ನಿಮ್ಮ ಹೈಕಮಾಂಡ್‌ ಹುಡುಕಿ, ಬಳಿಕ ಮೋದಿ ಬಗ್ಗೆ ಮಾತನಾಡಿ”: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ತೀವ್ರ ವಾಗ್ದಾಳಿ

ಪ್ಲಾಸ್ಟಿಕ್ ಮುಕ್ತ ಶಿವರಾತ್ರಿ ಉತ್ಸವಕ್ಕೆ ಹರಕೆರೆ ಹರಕೇಶ್ವರ ದೇವಸ್ಥಾನದಲ್ಲಿ ಸಂಕಲ್ಪ

ಜನಸೇವೆಗೆ ಬದ್ಧ ನಾಯಕತ್ವ: ಹಾರನಹಳ್ಳಿಯಲ್ಲಿ ಡಿ.ಎಸ್. ಅರುಣ್ ಅವರಿಂದ ಪಂಚಾಯಿತಿ ಕಟ್ಟಡ ಉದ್ಘಾಟನೆ ಹಾಗೂ ಹಕ್ಕುಪತ್ರ ವಿತರಣೆ

‘ಎಲ್ಲರೂ ಬಾಯಿ ಮುಚ್ಚಿಕೊಂಡಿರಬೇಕು’: ಕಾಂಗ್ರೆಸ್ ನಾಯಕರಿಗೆ ಡಿಕೆಶಿ ಖಡಕ್ ಸಂದೇಶ

ಜನಸಂಖ್ಯೆಗೆ ಅನುಗುಣವಾಗಿ ಎಸ್‌ಸಿ–ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ಕೇಂದ್ರದ ಮೇಲೆ ಒತ್ತಡ: ಮುಖ್ಯಮಂತ್ರಿ ಸಿದ್ದರಾಮಯ್ಯ

Leave a Comment