ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಶಿಕಾರಿಪುರದಲ್ಲಿ ಗನ್ ಫ್ಯಾಕ್ಟರಿ ಬಯಲು,..!: ಹಳೆಯ ಮನೆ ಮೇಲೆ ಪೊಲೀಸ್ ದಾಳಿ – 7 ಬಂದೂಕು ವಶ

On: February 5, 2026 8:05 PM
Follow Us:

ಶಿಕಾರಿಪುರ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಭದ್ರಾಪುರ ಗ್ರಾಮದಲ್ಲಿ ನಾಡಬಂದೂಕುಗಳನ್ನು ಅಕ್ರಮವಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದ ಅಡ್ಡೆಯನ್ನು ಪೊಲೀಸರು ಭೇದಿಸಿದ್ದಾರೆ.

ಭದ್ರಾಪುರ ಗ್ರಾಮದ 3ನೇ ಕ್ರಾಸ್ ನಿವಾಸಿ, ಕಾರ್ಪೆಂಟರ್ ಕೆಲಸ ಮಾಡುತ್ತಿದ್ದ ಲಕ್ಷ್ಮಣಪ್ಪ ಬಿನ್ ಮಲ್ಲಪ್ಪ (67) ಎಂಬಾತ ತನ್ನ ಮನೆಯ ಪಕ್ಕದಲ್ಲಿರುವ ಹಳೆಯ ಮನೆಯನ್ನು ನಾಡಬಂದೂಕು ತಯಾರಿಕಾ ಕೇಂದ್ರವಾಗಿಸಿಕೊಂಡಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

ದಿನಾಂಕ 04-02-2026ರಂದು ಬಂದ ಬಾತ್ಮೀದಾರರ ಮಾಹಿತಿಯನ್ನು ಆಧರಿಸಿ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ.22/2026 ಕಲಂ 25(1)(ಎ) ಶಸ್ತ್ರಾಸ್ತ್ರ ತಿದ್ದುಪಡಿ ಅಧಿನಿಯಮ–2019ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮಾನ್ಯ ನ್ಯಾಯಾಲಯದಿಂದ ಶೋಧನಾ ವಾರೆಂಟ್ ಪಡೆದು ಸಂಜೆ 6 ಗಂಟೆಗೆ ಪೊಲೀಸರು ಆರೋಪಿತನ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಶೋಧನೆಯ ವೇಳೆ ಹಳೆಯ ಮನೆಯೊಳಗೆ ಬಚ್ಚಿಟ್ಟಿದ್ದ 7 ಸಿಂಗಲ್ ಬ್ಯಾರಲ್ ನಾಡಬಂದೂಕುಗಳು, ಬಂದೂಕು ತಯಾರಿಕೆಗೆ ಬಳಸುತ್ತಿದ್ದ ಉಪಕರಣಗಳು ಹಾಗೂ ಸಂಬಂಧಿತ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿತ ಲಕ್ಷ್ಮಣಪ್ಪನನ್ನು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಈ ಕಾರ್ಯಾಚರಣೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ., ಐಪಿಎಸ್ ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎ.ಜಿ. ಕಾರಿಯಪ್ಪ ಹಾಗೂ ರಮೇಶ್ ಅವರ ನಿರ್ದೇಶನದಂತೆ, ಶಿಕಾರಿಪುರ ಉಪವಿಭಾಗದ ಡಿವೈಎಸ್‌ಪಿ ಕೇಶವ ಕೆ.ಇ ಅವರ ಮೇಲ್ವಿಚಾರಣೆಯಲ್ಲಿ ನಡೆದಿದ್ದು, ಶಿಕಾರಿಪುರ ನಗರ ವೃತ್ತದ ಸಿಪಿಐ ಸಂತೋಷ್ ಎಂ. ಪಾಟೀಲ್ ಅವರ ನೇತೃತ್ವದ ವಿಶೇಷ ತಂಡ ಅಪರಾಧವನ್ನು ಭೇದಿಸಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಹರಡುತ್ತಿದ್ದ ನಾಡಬಂದೂಕು ಜಾಲಕ್ಕೆ ಶಿಕಾರಿಪುರ ಪೊಲೀಸರು ಬಲವಾದ ಸಂದೇಶ ನೀಡಿದ್ದಾರೆ. ಅಕ್ರಮ ಶಸ್ತ್ರಾಸ್ತ್ರಗಳ ವಿರುದ್ಧ ಪೊಲೀಸ್ ನಿಗಾ ಇನ್ನಷ್ಟು ಕಠಿಣವಾಗಲಿದೆ.

K.M.Sathish Gowda

Join WhatsApp

Join Now

Facebook

Join Now

Read more

‘ಅಭಿಮಾನೋತ್ಸವ’ ಯಶಸ್ವಿ, ಮುಂದಿನ ದಿನಗಳಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಇಂದಿನಿಂದಲೇ ಶ್ರಮಿಸಿ: ಬಿ.ವೈ.ರಾಘವೇಂದ್ರ ಕರೆ

ನೀಟ್ ವಿಚಾರದಲ್ಲಿ ಕೇಂದ್ರದ ವಿರುದ್ಧ ಅಪಪ್ರಚಾರ, ಹಿಜಾಬ್ ಮೂಲಕ ಮತಬ್ಯಾಂಕ್ ರಾಜಕಾರಣ: ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ಎನ್.ಕೆ ಆರೋಪ

​ಶಿವಮೊಗ್ಗದಲ್ಲಿ ಹರಿದುಬರಲಿದೆ ಭಕ್ತಿಯ ಮಹಾಪೂರ: 34 ವರ್ಷಗಳ ಬಳಿಕ ಜಗದ್ಗುರುಗಳ ಭವ್ಯ ಅಡ್ಡಪಲ್ಲಕ್ಕಿ ಉತ್ಸವ, ಬಿಎಸ್‌ವೈಗೆ ಅಭಿನಂದನೆ ಹಾಗೂ ಬಸವೇಶ್ವರ ಸೊಸೈಟಿಯ ಶತಮಾನೋತ್ಸವದ ತ್ರಿವೇಣಿ ಸಂಗಮ!

​ರೇಣುಕಾಸ್ವಾಮಿ ಹತ್ಯೆ ಕೇಸ್: ದರ್ಶನ್‌ಗೆ ಸುಪ್ರೀಂ ‘ಶಾಕ್’; ಇನ್ನೂ ಒಂದು ವರ್ಷ ಜೈಲೇ ಫಿಕ್ಸ್!

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ (SIR) ಚುನಾವಣಾ ಆಯೋಗದ ‘ಮಹಾ ಮಾಸ್ಟರ್ ಪ್ಲಾನ್’: ಜೂನ್ 30ರಿಂದ ಮನೆ-ಮನೆಗೆ ಅಧಿಕಾರಿಗಳ ಭೇಟಿ ಆರಂಭ

ನೀಟ್ ಅಕ್ರಮದಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲ: ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟ ಖಂಡನೀಯ – ಮುಖ್ಯಮಂತ್ರಿ ಸಿದ್ದರಾಮಯ್ಯ

Leave a Comment