ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಫೆಬ್ರವರಿ 18ರಂದು ಪ್ರದೀಪ್ ವಿ. ಎಲಿ ಅಧಿಕಾರ ಸ್ವೀಕಾರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಜಿಲ್ಲಾ ಘಟಕಕ್ಕೆ ಹೊಸ ನಾಯಕತ್ವ

On: February 17, 2026 11:08 PM
Follow Us:

ಶಿವಮೊಗ್ಗದಲ್ಲಿ ನೂತನ ಜಿಲ್ಲಾ ಘಟಕ ಪದಗ್ರಹಣ ಸಮಾರಂಭ: ವೀರಶೈವ ಲಿಂಗಾಯತ ಸಮಾಜದ ಬಾಂಧವರಿಗೆ ಭಾಗವಹಿಸುವಂತೆ ಆಹ್ವಾನ

ಶಿವಮೊಗ್ಗ, ಫೆ. 17: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ, ಶಿವಮೊಗ್ಗ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಫೆಬ್ರವರಿ 18, 2026 ರಂದು ಬುಧವಾರ ಸಂಜೆ 5-30ಕ್ಕೆ ನಗರದಲ್ಲಿ ನಡೆಯಲಿದೆ. ಈ ಸಮಾರಂಭವು ಮಹಾನಗರ ಪಾಲಿಕೆ ಸಮೀಪದ ಶ್ರೀ ವೀರಶೈವ ಕಲ್ಯಾಣ ಮಂದಿರದಲ್ಲಿ ಆಯೋಜಿಸಲಾಗಿದೆ.

ಈ ಶುಭ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಪ್ರದೀಪ್ ವಿ. ಎಲಿ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಪೂಜ್ಯ ಗುರುಗಳ ದಿವ್ಯ ಸಾನಿಧ್ಯದಲ್ಲಿ ಹಾಗೂ ಗಣ್ಯ ಅತಿಥಿಗಳ ಉಪಸ್ಥಿತಿಯಲ್ಲಿ ನಡೆಯುವ ಈ ಸಮಾರಂಭಕ್ಕೆ ವೀರಶೈವ ಲಿಂಗಾಯತ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಂಘಟನೆಯ ನೂತನ ಅಧ್ಯಕ್ಷರು ಮನವಿ ಮಾಡಿದ್ದಾರೆ.

ಪದಗ್ರಹಣ ಸಮಾರಂಭವು ಪೂಜ್ಯ ಗುರುಗಳ ಪಾವನ ಸಾನಿಧ್ಯದಲ್ಲಿ ಭಕ್ತಿಭಾವಪೂರ್ಣವಾಗಿ ನೆರವೇರಲಿದೆ. ಆನಂದಪುರದ ಶ್ರೀ ಮುರುಘರಾಜೇಂದ್ರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು, ಹೀರೆಮಠ, ಬಳಕಿಯ ರಾಚೋಟೇಶ್ವರ ಶಿವಾಚಾರ್ಯ ಸ್ವಾಮಿಗಳು ಹಾಗೂ ಶ್ರೀಮದ್ ರಂಭಾಪುರಿ ಖಾಸಾ ಶ್ರೀಮನ್ ಮಹಾಸಂಸ್ಥಾನ, ಮಳಲಿ ಮಠದ ಡಾ. ಗುರುನಾಗಭೂಷಣ ಶಿವಾಚಾರ್ಯ ಸ್ವಾಮಿಗಳು ಅವರ ದಿವ್ಯ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ನಡೆಯಲಿದೆ.

ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲಾ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಗೌರವಾಧ್ಯಕ್ಷರು ಹಾಗೂ ಬಸವೇಶ್ವರ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷರಾದ ಎಸ್.ಎಸ್. ಜ್ಯೋತಿಪ್ರಕಾಶ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಸಮಾರಂಭದಲ್ಲಿ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ. ರಾಘವೇಂದ್ರ, ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಮಾಜಿ ವಿಧಾನಪರಿಷತ್ ಸದಸ್ಯರಾದ ರುದ್ರೇಗೌಡ್ರು ಎಸ್. ಹಾಗೂ ವಿಧಾನಪರಿಷತ್ ಸದಸ್ಯರು ಮತ್ತು ರಾಷ್ಟ್ರೀಯ ವೈದ್ಯಕೀಯ ಘಟಕದ ಉಪಾಧ್ಯಕ್ಷರಾದ ಡಾ. ಧನಂಜಯ ಸರ್ಜಿ ಉಪಸ್ಥಿತರಿರಲಿದ್ದಾರೆ. ಮಾಜಿ ಶಾಸಕರಾದ ಆಯನೂರು ಮಂಜುನಾಥ್, ಕ.ರಾ.ಸ.ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ, ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಅಧ್ಯಕ್ಷರಾದ ಪ್ರದೀಪ್ ಕಂಕನವಾಡಿ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷರಾದ ರುದ್ರಮುನಿ ಸಜ್ಜನ್ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.

ಇದೇ ವೇಳೆ ಮಹಾನಗರ ಪಾಲಿಕೆಯ ಮಾಜಿ ವಿರೋಧ ಪಕ್ಷದ ನಾಯಕರು ಹೆಚ್.ಸಿ. ಯೋಗೀಶ್, ಗೌರವ ಕಾರ್ಯದರ್ಶಿಗಳಾದ ಎಸ್.ಪಿ. ದಿನೇಶ್, ಬಸವೇಶ್ವರ ಪಟ್ಟಣ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಬಳ್ಳೆಕೆರೆ ಸಂತೋಷ್, ಮಹಿಳಾ ಘಟಕದ ಅಧ್ಯಕ್ಷರಾದ ಅನಿತಾ ರವಿಶಂಕರ್, ವೀರಶೈವ ಕಲ್ಯಾಣ ಮಂದಿರದ ಅಧ್ಯಕ್ಷರಾದ ವಿರೂಪಾಕ್ಷಪ್ಪ ಜೆ. ಹಾಗೂ ಮಾಜಿ ಜಿಲ್ಲಾಧ್ಯಕ್ಷರಾದ ಶಿವರಾಜ್ ಬಿ. ಸೇರಿದಂತೆ ಅನೇಕ ಗಣ್ಯರು ಸಮಾರಂಭದ ಗೌರವ ಹೆಚ್ಚಿಸಲಿದ್ದಾರೆ.

ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ನೂತನ ಜಿಲ್ಲಾ ಅಧ್ಯಕ್ಷರಾದ ಪ್ರದೀಪ್ ವಿ. ಎಲಿ ಹಾಗೂ ಉಪಾಧ್ಯಕ್ಷರಾದ ಉಮೇಶ್ ಕೆ.ಬಿ., ಉಮೇಶ್ ಹಿರೇಮಠ, ರಮೇಶಣ್ಣ ಮಲ್ಲಿಗೇನಹಳ್ಳಿ, ಪ್ರಧಾನ ಕಾರ್ಯದರ್ಶಿ ಎಂ. ಮುತ್ತಣ್ಣ ಮತ್ತು ಕಾರ್ಯಕಾರಿ ಮಂಡಳಿಯ ಸದಸ್ಯರು ಈ ಪದಗ್ರಹಣ ಸಮಾರಂಭಕ್ಕೆ ವೀರಶೈವ ಲಿಂಗಾಯತ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಂಘಟನೆಯ ಬಲವರ್ಧನೆಗೆ ಕೈಜೋಡಿಸುವಂತೆ ಕೋರಿದ್ದಾರೆ.

ಸಮಾಜದ ಐಕ್ಯತೆ, ಸಂಘಟನೆ ಮತ್ತು ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಹೊಸ ದಿಕ್ಕು ನೀಡುವ ಉದ್ದೇಶದಿಂದ ಈ ಪದಗ್ರಹಣ ಸಮಾರಂಭವನ್ನು ಆಯೋಜಿಸಲಾಗಿದ್ದು, ಸಮಾಜದ ಎಲ್ಲ ವರ್ಗಗಳ ಸಹಕಾರವೇ ಕಾರ್ಯಕ್ರಮದ ಯಶಸ್ಸಿಗೆ ಕಾರಣವಾಗಲಿದೆ ಎಂದು ಸಂಘಟನೆಯವರು ತಿಳಿಸಿದ್ದಾರೆ.

K.M.Sathish Gowda

Join WhatsApp

Join Now

Facebook

Join Now

Leave a Comment