ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

2026-27ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆ: ವಿಧಾನಸೌಧದಲ್ಲಿ ಸಿಎಂ ಸಮ್ಮುಖದಲ್ಲಿ ಹೆಚ್.ಆರ್. ಬಸವರಾಜಪ್ಪ ನೇತೃತ್ವದ ರೈತರ ಬೇಡಿಕೆಗಳು

On: February 18, 2026 2:45 PM
Follow Us:

ಬೆಂಗಳೂರು: ರಾಜ್ಯದ 2026-27ನೇ ಸಾಲಿನ ಬಜೆಟ್‌ ತಯಾರಿ ಹಿನ್ನಲೆಯಲ್ಲಿ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಮಹತ್ವದ ಪೂರ್ವಭಾವಿ ಸಭೆ ನಡೆಯಿತು. ರೈತ ಸಂಘಗಳ ಮುಖಂಡರೊಂದಿಗೆ ನಡೆದ ಈ ಸಭೆಯಲ್ಲಿ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿಗೆ ಸಂಬಂಧಿಸಿದ ಹಲವು ಪ್ರಮುಖ ವಿಚಾರಗಳು ಚರ್ಚೆಗೆ ಬಂದವು.

ಸಭೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷರಾದ ಹೆಚ್‌.ಆರ್‌. ಬಸವರಾಜಪ್ಪ ಅವರು ಭಾಗವಹಿಸಿ, ರೈತರ ಪರವಾಗಿ ಅನೇಕ ತುರ್ತು ಮತ್ತು ದೀರ್ಘಕಾಲಿಕ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಾಪಸು ಪಡೆಯುವುದು, ವಿದ್ಯುತ್‌ ಖಾಸಗೀಕರಣಕ್ಕೆ ಕಡಿವಾಣ ಹಾಕುವುದು ಸೇರಿದಂತೆ ಕೃಷಿ ಕ್ಷೇತ್ರದ ಸ್ಥಿರತೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಪ್ರಮುಖ ಬೇಡಿಕೆಗಳು:

  • ಭದ್ರಾ ಮೇಲ್ದಂಡೆ ಯೋಜನೆಗೆ ₹3000 ಕೋಟಿ ವಿಶೇಷ ಅನುದಾನ ಮೀಸಲಿಡಬೇಕು
  • ಸಮಗ್ರ ಸಾವಯವ ಕೃಷಿಗೆ ಉತ್ತೇಜನ ನೀಡಿ, ಮೌಲ್ಯವರ್ಧಿತ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ವಿಸ್ತರಿಸಬೇಕು
  • ₹10,000 ಕೋಟಿ ಆವರ್ತ ನಿಧಿ ಸ್ಥಾಪಿಸಿ, ಬೆಲೆ ಕುಸಿತದ ಸಂದರ್ಭಗಳಲ್ಲಿ ಖರೀದಿ ಕೇಂದ್ರಗಳ ಮೂಲಕ ತಕ್ಷಣ ಖರೀದಿ ವ್ಯವಸ್ಥೆ ಜಾರಿಗೆ ತರಬೇಕು
  • ಎಲ್ಲಾ ನೀರಾವರಿ ಯೋಜನೆಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು
  • ರೈತರ ಆಕಸ್ಮಿಕ ಮರಣಕ್ಕೆ ₹10 ಲಕ್ಷ ಪರಿಹಾರ ಘೋಷಿಸಬೇಕು
  • ಕೃಷಿ, ಗ್ರಾಮೀಣಾಭಿವೃದ್ಧಿ ಹಾಗೂ ಸಹಕಾರಿ ಬ್ಯಾಂಕ್‌ಗಳ ರೈತರ ಸಾಲದ ಬಡ್ಡಿ ಮನ್ನಾ ಮಾಡಬೇಕು
  • ಐಪಿ ಸೆಟ್‌ಗಳಿಗಾಗಿ ರೈತರ ಸ್ವಯಂ ವೆಚ್ಚ ಯೋಜನೆಯನ್ನು ರದ್ದುಗೊಳಿಸಬೇಕು
  • ಕಬ್ಬು ಬೆಳೆಗಾರರ ಬಾಕಿ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು
  • ಫಲವತ್ತಾದ ಕೃಷಿ ಭೂಮಿಯ ಬಲವಂತದ ಭೂಸ್ವಾಧೀನವನ್ನು ನಿಲ್ಲಿಸಬೇಕು

ಇದಲ್ಲದೆ, ಕೃಷಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಇನ್ನೂ ಹಲವು ವಿಚಾರಗಳನ್ನು ರೈತ ಸಂಘದ ಮುಖಂಡರು ಪ್ರಸ್ತಾಪಿಸಿದರು.

ಬೇಡಿಕೆಗಳಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು, ಸಾಧ್ಯವಾಗುವ ಎಲ್ಲ ಕ್ರಮಗಳನ್ನು ಬಜೆಟ್‌ನಲ್ಲಿ ಒಳಗೊಂಡು ರೈತರ ಹಿತಾಸಕ್ತಿಯನ್ನು ಕಾಪಾಡುವುದಾಗಿ ಭರವಸೆ ನೀಡಿದರು.

ಸಭೆಯಲ್ಲಿ ಕೃಷಿ ಸಚಿವರಾದ ಚೆಲುವರಾಯಸ್ವಾಮಿ, ವೆಂಕಟೇಶ್, ನೀತಿ ಆಯೋಗದ ಉಪಾಧ್ಯಕ್ಷರಾದ ಬಿ.ಆರ್. ಪಾಟೀಲ್, ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ಸರ್ಕಾರದ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯದ ಬಜೆಟ್‌ ರೂಪಿಸುವ ಪ್ರಕ್ರಿಯೆಯಲ್ಲಿ ರೈತರ ಮಾತು ಕೇಳಿ, ಅವರ ಸಮಸ್ಯೆಗಳಿಗೆ ಸ್ಪಂದಿಸುವ ಈ ಸಭೆ ಮಹತ್ವದ ಹೆಜ್ಜೆಯಾಗಿ ಪರಿಣಮಿಸಿದೆ. ರೈತ ಸಂಘಗಳು ಈಗ ಬಜೆಟ್‌ನಲ್ಲಿ ಸ್ಪಷ್ಟವಾದ ಘೋಷಣೆಗಳ ನಿರೀಕ್ಷೆಯಲ್ಲಿ ಇವೆ.

K.M.Sathish Gowda

Join WhatsApp

Join Now

Facebook

Join Now

Read more

ಬಿಎಸ್‌ವೈ ವಿಧಾನಸಭೆಯಲ್ಲಿ ಒಂಟಿ ಸಲಗನಂತೆ ಹೋರಾಡಿದ ನಾಯಕ: ಗೋವಿಂದ ಕಾರಜೋಳ

‘ಅಭಿಮಾನೋತ್ಸವ’ ಯಶಸ್ವಿ, ಮುಂದಿನ ದಿನಗಳಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಇಂದಿನಿಂದಲೇ ಶ್ರಮಿಸಿ: ಬಿ.ವೈ.ರಾಘವೇಂದ್ರ ಕರೆ

ನೀಟ್ ವಿಚಾರದಲ್ಲಿ ಕೇಂದ್ರದ ವಿರುದ್ಧ ಅಪಪ್ರಚಾರ, ಹಿಜಾಬ್ ಮೂಲಕ ಮತಬ್ಯಾಂಕ್ ರಾಜಕಾರಣ: ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ಎನ್.ಕೆ ಆರೋಪ

​ಶಿವಮೊಗ್ಗದಲ್ಲಿ ಹರಿದುಬರಲಿದೆ ಭಕ್ತಿಯ ಮಹಾಪೂರ: 34 ವರ್ಷಗಳ ಬಳಿಕ ಜಗದ್ಗುರುಗಳ ಭವ್ಯ ಅಡ್ಡಪಲ್ಲಕ್ಕಿ ಉತ್ಸವ, ಬಿಎಸ್‌ವೈಗೆ ಅಭಿನಂದನೆ ಹಾಗೂ ಬಸವೇಶ್ವರ ಸೊಸೈಟಿಯ ಶತಮಾನೋತ್ಸವದ ತ್ರಿವೇಣಿ ಸಂಗಮ!

​ರೇಣುಕಾಸ್ವಾಮಿ ಹತ್ಯೆ ಕೇಸ್: ದರ್ಶನ್‌ಗೆ ಸುಪ್ರೀಂ ‘ಶಾಕ್’; ಇನ್ನೂ ಒಂದು ವರ್ಷ ಜೈಲೇ ಫಿಕ್ಸ್!

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ (SIR) ಚುನಾವಣಾ ಆಯೋಗದ ‘ಮಹಾ ಮಾಸ್ಟರ್ ಪ್ಲಾನ್’: ಜೂನ್ 30ರಿಂದ ಮನೆ-ಮನೆಗೆ ಅಧಿಕಾರಿಗಳ ಭೇಟಿ ಆರಂಭ

Leave a Comment