ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಸಾರಿಗೆ ಕಾರ್ಮಿಕರ ಸಂಕಷ್ಟಕ್ಕೆ ಸರ್ಕಾರವೇ ಕಾರಣ: 38 ತಿಂಗಳ ಬಾಕಿ ವೇತನ ತಕ್ಷಣ ಪಾವತಿಸಲಿ – ಬಿ.ವೈ. ವಿಜಯೇಂದ್ರ

On: February 18, 2026 7:30 PM
Follow Us:

ಬೆಂಗಳೂರು: ರಾಜ್ಯದ ಸಾರಿಗೆ ನಿಗಮಗಳಲ್ಲಿ ದುಡಿಯುತ್ತಿರುವ ಸಾವಿರಾರು ಕಾರ್ಮಿಕರಿಗೆ ಕಳೆದ 38 ತಿಂಗಳಿನಿಂದ ಬಾಕಿ ಇರುವ ವೇತನವನ್ನು ಪಾವತಿಸದೇ ಸರ್ಕಾರ ನಿರ್ಲಕ್ಷ್ಯ ವಹಿಸಿರುವುದು ಅತ್ಯಂತ ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ವಿವಿಧ ಸಾರಿಗೆ ನಿಗಮಗಳು—ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC), ಬೆಂಗಳೂರು ಮಹಾನಗರ ಸಾರಿಗೆ ನಿಗಮ (BMTC), ಉತ್ತರ ಪಶ್ಚಿಮ ಕರ್ನಾಟಕ ರಸ್ತೆ ಸಾರಿಗೆ ನಿಗಮ (NWKRTC) ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC)—ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರು ಆರ್ಥಿಕ ಸಂಕಷ್ಟದಲ್ಲಿ ದಿನನಿತ್ಯ ಜೀವನ ನಡೆಸುತ್ತಿರುವುದು ಸರ್ಕಾರದ ಕಾರ್ಮಿಕ ವಿರೋಧಿ ಧೋರಣೆಯ ಸ್ಪಷ್ಟ ಉದಾಹರಣೆ ಎಂದು ಅವರು ಟೀಕಿಸಿದ್ದಾರೆ.

01.01.2024ರಿಂದ ಜಾರಿಗೆ ಬರಬೇಕಿದ್ದ ವೇತನ ಪರಿಷ್ಕರಣೆಯನ್ನೂ ಉದ್ದೇಶಪೂರ್ವಕವಾಗಿ ವಿಳಂಬಗೊಳಿಸಿರುವುದು ಕಾರ್ಮಿಕರ ನ್ಯಾಯಸಮ್ಮತ ಹಕ್ಕುಗಳನ್ನು ಹರಣ ಮಾಡುವಂತಾಗಿದೆ. ತಮ್ಮ ಪರಿಶ್ರಮದ ಪ್ರತಿಫಲಕ್ಕಾಗಿ ಕಾಯುತ್ತಿರುವ ನೌಕರರನ್ನು ಈ ರೀತಿ ನಿರ್ಲಕ್ಷಿಸುವುದು ಸಾಮಾಜಿಕ ನ್ಯಾಯಕ್ಕೆ ಮಾಡಿದ ಅವಮಾನವಾಗಿದೆ ಎಂದು ಅವರು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಕರ್ನಾಟಕ ರಸ್ತೆ ಸಾರಿಗೆ ಮಜೂರು ಸಂಘ ಒಕ್ಕೂಟ (ರಿ) ಕೈಗೊಂಡಿರುವ “ಅಸಹಕಾರ ಚಳವಳಿ” ಸಂಪೂರ್ಣ ನ್ಯಾಯಸಮ್ಮತವಾಗಿದ್ದು, ಅವರ ಹೋರಾಟಕ್ಕೆ ಭಾರತೀಯ ಜನತಾ ಪಕ್ಷ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.

ಸರ್ಕಾರವು ತನ್ನ ಆಡಳಿತ ವೈಫಲ್ಯವನ್ನು ಮರೆಮಾಚಲು ಕಾರ್ಮಿಕರ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಿರುವುದು ಅತ್ಯಂತ ವಿಷಾದನೀಯ. ಸಾರಿಗೆ ನಿಗಮಗಳು ರಾಜ್ಯದ ಜೀವನಾಡಿಯಾಗಿದ್ದು, ಜನಸೇವೆಯ ಪ್ರಮುಖ ಅಂಗವಾಗಿವೆ. ಇಂತಹ ಮಹತ್ವದ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಾರ್ಮಿಕರ ಹಕ್ಕುಗಳನ್ನು ಕಡೆಗಣಿಸುವುದು ಸರ್ಕಾರದ ಜವಾಬ್ದಾರಿಯಿಲ್ಲದ ನಡೆ ಎಂದು ಅವರು ಆರೋಪಿಸಿದ್ದಾರೆ.

ತಕ್ಷಣವೇ 38 ತಿಂಗಳ ವೇತನ ಹಿಂಬಾಕಿಯನ್ನು ಬಿಡುಗಡೆ ಮಾಡುವುದು ಹಾಗೂ 01.01.2024ರಿಂದಲೇ ವೇತನ ಪರಿಷ್ಕರಣೆಯನ್ನು ಜಾರಿಗೊಳಿಸುವುದು ಸರ್ಕಾರದ ಪ್ರಾಥಮಿಕ ಕರ್ತವ್ಯವಾಗಿದೆ. ಇಲ್ಲವಾದಲ್ಲಿ, ಕಾರ್ಮಿಕರ ಹೋರಾಟ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದ್ದು, ಅದರ ಸಂಪೂರ್ಣ ಹೊಣೆಗಾರಿಕೆ ರಾಜ್ಯ ಸರ್ಕಾರದ ಮೇಲಿದೆ ಎಂದು ಅವರು ಎಚ್ಚರಿಸಿದ್ದಾರೆ.

ಕಾರ್ಮಿಕರ ಸಹನೆಗೆ ಮಿತಿ ಇದೆ ಎಂಬುದನ್ನು ಸರ್ಕಾರ ಮನಗಾಣಬೇಕು. ಇನ್ನಷ್ಟು ವಿಳಂಬ ಮಾಡದೆ ತಕ್ಷಣ ಕ್ರಮ ಕೈಗೊಂಡು, ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವ ಮೂಲಕ ಉದ್ವಿಗ್ನ ಪರಿಸ್ಥಿತಿಯನ್ನು ಶಮನಗೊಳಿಸಬೇಕು ಎಂದು ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

K.M.Sathish Gowda

Join WhatsApp

Join Now

Facebook

Join Now

Read more

ಯುವಕರು ಸಂಘಟಿತರಾಗಿ ನಾರಾಯಣ ಗುರುಗಳ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲಿ: ಸಚಿವ ಮಧು ಬಂಗಾರಪ್ಪ

ಧರ್ಮ, ಪರಂಪರೆ ಹಾಗೂ ಮಠಮಾನ್ಯಗಳ ಸಂರಕ್ಷಣೆಗೆ ಸಂಘಟಿತ ಪ್ರಯತ್ನ ಅಗತ್ಯ: ಭಿನ್ನಾಭಿಪ್ರಾಯ ಬದಿಗಿಟ್ಟು ಸಮಾಜದ ಹಿತಕ್ಕಾಗಿ ಒಂದಾಗ ಬೇಕು: ವೀರಶೈವ ಲಿಂಗಾಯತ ಸಮಾಜದ ಒಗ್ಗಟ್ಟು ಕಾಪಾಡುವುದು ಎಲ್ಲರ ಜವಾಬ್ದಾರಿ: ಬಿ.ವೈ. ವಿಜಯೇಂದ್ರ

ಭಕ್ತಿಯ ಮಹಾಪ್ರವಾಹದಲ್ಲಿ ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಲಕ್ಷಾಂತರ ಜನರ ಸಾಕ್ಷಿ! ಕಾಲಿಡಲೂ ಜಾಗವಿಲ್ಲ, ಬಾನಂಗಳದಲ್ಲಿ ಜೈಕಾರ! ಶಿವಮೊಗ್ಗದಲ್ಲಿ ಮೈ ನವಿರೇಳಿಸಿದ ಗಣೇಶೋತ್ಸವದ ಅದ್ಧೂರಿ ಮೆರವಣಿಗೆ!

ಸೆ.26-27ರಂದು ಬೆಂಗಳೂರಿನಲ್ಲಿ ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಮಹಾಸಮ್ಮೇಳನ: ಪಂಚಪೀಠಾಧೀಶರ ಸಾನ್ನಿಧ್ಯ

ಶಿವಮೊಗ್ಗ ಹಿಂದೂ ಗಣಪತಿ ಮೆರವಣಿಗೆಗೆ ಭಕ್ತಿಯ ಸಾಥ್: ಐದು ಸಾವಿರ ಭಕ್ತರಿಗೆ ಅನ್ನದಾಸೋಹ: ಮೂರನೇ ವರ್ಷವೂ ಸೇವಾ ಪರಂಪರೆ ಮುಂದುವರಿಸಿದ ಎಸ್‌ಆರ್‌ವಿ ಎಂಟರ್‌ಪ್ರೈಸಸ್ ಗೆಳೆಯರ ಬಳಗ

50 ವರ್ಷಗಳ ದಾಂಪತ್ಯ ಜೀವನ ಸಮಾಜಕ್ಕೆ ಮಾದರಿ: ಸಂಸ್ಕಾರ, ಶಿಕ್ಷಣದೊಂದಿಗೆ ಬದುಕು ಕಟ್ಟಿಕೊಳ್ಳಿ: ತಾಯ್ನಾಡಿಗೆ ಮರಳಿ ಸೇವೆ ಸಲ್ಲಿಸಿ ಎಂದು ವಿದ್ಯಾರ್ಥಿಗಳಿಗೆ ಕೆ.ಈ. ಕಾಂತೇಶ್ ಕರೆ

Leave a Comment