ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಯುವಜನರ ಕಣ್ಣೀರು ಕಾಣದ ಸರ್ಕಾರ: ಕುರ್ಚಿ ಕಾಳಗದಲ್ಲಿ ಸಿಎಂ–ಡಿಸಿಎಂ ಬ್ಯುಸಿ ಎಂದು ವಿಜಯೇಂದ್ರ ವಾಗ್ದಾಳಿ

On: February 24, 2026 5:03 PM
Follow Us:

ಬೆಂಗಳೂರು: ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಯುವಜನರ ಸಮಸ್ಯೆಗಳ ಬಗ್ಗೆ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕುರ್ಚಿ ಕಾಳಗದಲ್ಲಿ ತೊಡಗಿಕೊಂಡು ಯುವಜನರ ಕಣ್ಣೀರು ಕಾಣದಂತೆ ವರ್ತಿಸುತ್ತಿದ್ದಾರೆ ಎಂದು ಅವರು ಕಟುವಾಗಿ ಟೀಕಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಎರಡೂವರೆ ವರ್ಷಗಳಿಂದ ಯುವಜನತೆ ಉದ್ಯೋಗಕ್ಕಾಗಿ ಹೋರಾಟ ನಡೆಸುತ್ತಿದ್ದು, ಪ್ರತಿಭಟನೆ-ಆಂದೋಲನಗಳ ಮೂಲಕ ತಮ್ಮ ನೋವನ್ನು ವ್ಯಕ್ತಪಡಿಸುತ್ತಿದ್ದಾರೆ. ಆದರೂ ಸರ್ಕಾರ ಕಿವಿಗೊಡದೆ ಭಂಡತನ ಪ್ರದರ್ಶಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿಯ ಅಧಿವೇಶನದ ಸಂದರ್ಭದಲ್ಲೂ ವಿದ್ಯಾರ್ಥಿಗಳ ಒಕ್ಕೂಟ ಪ್ರತಿಭಟನೆ ನಡೆಸಿದಾಗ ಲಾಠಿಚಾರ್ಜ್ ಮಾಡಲಾಗಿದೆ. ಇಷ್ಟಾದರೂ ಸರ್ಕಾರ ಎಚ್ಚತ್ತುಕೊಳ್ಳದಿರುವುದು ದುಃಖಕರವೆಂದರು. ಮುಖ್ಯಮಂತ್ರಿಗಳ ಭೇಟಿಗೆ ಸಮಯ ನಿಗದಿಪಡಿಸಲು ರಾಜ್ಯ ಹೈಕೋರ್ಟ್ ಮಧ್ಯಸ್ಥಿಕೆ ವಹಿಸಬೇಕಾದ ಸ್ಥಿತಿ ನಿರ್ಮಾಣವಾಗಿರುವುದು ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಸುಮಾರು 2 ಲಕ್ಷ 85 ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ ಬಿದ್ದಿವೆ. ಆದರೆ ಅವುಗಳ ಭರ್ತಿಗೆ ಸರ್ಕಾರದಿಂದ ಯಾವುದೇ ಸ್ಪಷ್ಟ ಕ್ರಮ ಕೈಗೊಳ್ಳಲಾಗಿಲ್ಲ. ಮೀಸಲಾತಿ ಗೊಂದಲವನ್ನು ನೆಪವನ್ನಾಗಿ ಮಾಡಿಕೊಂಡು ನ್ಯಾಯಾಲಯದಲ್ಲಿ ಸರಿಯಾಗಿ ವಾದ ಮಂಡಿಸದೇ ಕಾಲಹರಣ ಮಾಡಲಾಗುತ್ತಿದೆ. ಯುವಜನರ ಭವಿಷ್ಯವನ್ನು ಅಂಧಕಾರಕ್ಕೆ ತಳ್ಳುವ ಕೆಲಸ ನಡೆಯುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದರು.

ವಿದ್ಯಾರ್ಥಿಗಳ ಒಕ್ಕೂಟ ಬೆಂಗಳೂರು, ಕಲಬುರ್ಗಿ, ಧಾರವಾಡ ಸೇರಿದಂತೆ ವಿವಿಧೆಡೆ ಪ್ರತಿಭಟನೆ ನಡೆಸಿದರೂ ಸರ್ಕಾರದ ನಿಲುವಿನಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಒಂದೆಡೆ ಅಭಿವೃದ್ಧಿ ಸ್ಥಗಿತವಾಗಿದೆ; ಇನ್ನೊಂದೆಡೆ ನೌಕರರಿಗೆ ಸಂಬಳ ನೀಡಲೂ ಸರ್ಕಾರಕ್ಕೆ ಕಷ್ಟವಾಗುತ್ತಿದೆ. ಇಂತಹ ಸಂದರ್ಭದಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸದೇ ಯುವಜನರೊಂದಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಅವರು ಕಟುವಾಗಿ ಟೀಕಿಸಿದರು.

“ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳಾಗಿವೆ. ಇಷ್ಟು ಸಮಯದಲ್ಲಿ ಒಂದು ಹುದ್ದೆಯನ್ನೂ ಭರ್ತಿ ಮಾಡದವರು ಇನ್ಮೇಲೆ ಮಾಡುತ್ತಾರೆಯೇ?” ಎಂದು ಪ್ರಶ್ನಿಸಿದ ಅವರು, ಯುವಜನರ ತಾಳ್ಮೆಯನ್ನು ಇನ್ನೆಷ್ಟು ದಿನ ಪರೀಕ್ಷಿಸುತ್ತೀರಿ ಎಂದು ಸವಾಲು ಹಾಕಿದರು. ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಕೂಡಲೇ ಆರಂಭಿಸಿ, ಕೆಪಿಎಸ್ಸಿ ವ್ಯವಸ್ಥೆಯನ್ನು ಸಮಗ್ರವಾಗಿ ಸುಧಾರಿಸಬೇಕು ಎಂದು ಆಗ್ರಹಿಸಿದರು.

ಹುಬ್ಬಳ್ಳಿಯಲ್ಲಿ ಬಡವರಿಗೆ ಮನೆ ವಿತರಣೆ ಕಾರ್ಯಕ್ರಮ ನಡೆಸಿ ಸ್ವಯಂ ಪ್ರಶಂಸೆಗೆ ಮುಂದಾಗಿರುವ ಸರ್ಕಾರ, ವಾಸ್ತವದಲ್ಲಿ ಹಿಂದಿನ ಬಿಜೆಪಿ ಸರ್ಕಾರ ಕೈಗೊಂಡ ಯೋಜನೆಗಳನ್ನು ತಮ್ಮದಾಗಿಸಿಕೊಳ್ಳಲು ಯತ್ನಿಸುತ್ತಿದೆ ಎಂದು ಆರೋಪಿಸಿದರು. ಕೇಂದ್ರ ಸರ್ಕಾರದ ಸಹಯೋಗದಲ್ಲಿ ಅನುಮೋದನೆ ಪಡೆದ ಯೋಜನೆಗಳನ್ನು ತಮ್ಮ ಸಾಧನೆ ಎಂದು ಬಿಂಬಿಸುವುದು ರಾಜಕೀಯ ನೈತಿಕತೆಯ ಕೊರತೆಯನ್ನು ತೋರಿಸುತ್ತದೆ ಎಂದು ಹೇಳಿದರು. “ಈ ಸರ್ಕಾರದ ಸಾಧನೆ ಎಂದರೆ ಕೇವಲ ಕಾಲಹರಣ ಮತ್ತು ಪ್ರಚಾರ ರಾಜಕೀಯ,” ಎಂದು ವ್ಯಂಗ್ಯವಾಡಿದರು.

ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆಯ ಪರಿಸ್ಥಿತಿಯೂ ಹದಗೆಟ್ಟಿದೆ ಎಂದು ಅವರು ಆರೋಪಿಸಿದರು. ಶಿವಮೊಗ್ಗದಲ್ಲಿ 10ನೇ ತರಗತಿಯ ಬಾಲಕನ ಬರ್ಬರ ಹತ್ಯೆ, ದಕ್ಷಿಣ ಕನ್ನಡ, ಯಲ್ಲಾಪುರ ಸೇರಿದಂತೆ ಹಲವು ಕಡೆ ನಡೆದ ಅಹಿತಕರ ಘಟನೆಗಳು ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸುತ್ತವೆ ಎಂದರು. ಗೃಹ ಇಲಾಖೆಯ ಕಾರ್ಯಕ್ಷಮತೆ ಕುರಿತು ಗಂಭೀರ ಪ್ರಶ್ನೆಗಳು ಉದ್ಭವಿಸಿವೆ ಎಂದು ಹೇಳಿದರು.

ಒಟ್ಟಿನಲ್ಲಿ, ಯುವಜನರ ಬದುಕು ಕಟ್ಟಿಕೊಡುವ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸುವಲ್ಲಿ ಸರ್ಕಾರದ ಇಚ್ಛಾಶಕ್ತಿ ಕಾಣುತ್ತಿಲ್ಲ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ರಾಜಕೀಯ ಲಾಭ-ನಷ್ಟಗಳ ಲೆಕ್ಕಾಚಾರ ಬಿಟ್ಟು ಯುವಜನರ ಭವಿಷ್ಯಕ್ಕೆ ಆದ್ಯತೆ ನೀಡಬೇಕು ಎಂದು ವಿಜಯೇಂದ್ರ ಅವರು ಕಟುವಾಗಿ ಆಗ್ರಹಿಸಿದರು.

K.M.Sathish Gowda

Join WhatsApp

Join Now

Facebook

Join Now

Read more

‘ಅಭಿಮಾನೋತ್ಸವ’ ಯಶಸ್ವಿ, ಮುಂದಿನ ದಿನಗಳಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಇಂದಿನಿಂದಲೇ ಶ್ರಮಿಸಿ: ಬಿ.ವೈ.ರಾಘವೇಂದ್ರ ಕರೆ

ನೀಟ್ ವಿಚಾರದಲ್ಲಿ ಕೇಂದ್ರದ ವಿರುದ್ಧ ಅಪಪ್ರಚಾರ, ಹಿಜಾಬ್ ಮೂಲಕ ಮತಬ್ಯಾಂಕ್ ರಾಜಕಾರಣ: ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ಎನ್.ಕೆ ಆರೋಪ

​ಶಿವಮೊಗ್ಗದಲ್ಲಿ ಹರಿದುಬರಲಿದೆ ಭಕ್ತಿಯ ಮಹಾಪೂರ: 34 ವರ್ಷಗಳ ಬಳಿಕ ಜಗದ್ಗುರುಗಳ ಭವ್ಯ ಅಡ್ಡಪಲ್ಲಕ್ಕಿ ಉತ್ಸವ, ಬಿಎಸ್‌ವೈಗೆ ಅಭಿನಂದನೆ ಹಾಗೂ ಬಸವೇಶ್ವರ ಸೊಸೈಟಿಯ ಶತಮಾನೋತ್ಸವದ ತ್ರಿವೇಣಿ ಸಂಗಮ!

​ರೇಣುಕಾಸ್ವಾಮಿ ಹತ್ಯೆ ಕೇಸ್: ದರ್ಶನ್‌ಗೆ ಸುಪ್ರೀಂ ‘ಶಾಕ್’; ಇನ್ನೂ ಒಂದು ವರ್ಷ ಜೈಲೇ ಫಿಕ್ಸ್!

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ (SIR) ಚುನಾವಣಾ ಆಯೋಗದ ‘ಮಹಾ ಮಾಸ್ಟರ್ ಪ್ಲಾನ್’: ಜೂನ್ 30ರಿಂದ ಮನೆ-ಮನೆಗೆ ಅಧಿಕಾರಿಗಳ ಭೇಟಿ ಆರಂಭ

ನೀಟ್ ಅಕ್ರಮದಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲ: ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟ ಖಂಡನೀಯ – ಮುಖ್ಯಮಂತ್ರಿ ಸಿದ್ದರಾಮಯ್ಯ

Leave a Comment