ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಸಿಎಂ ಸಿದ್ದರಾಮಯ್ಯ 17ನೇ ಬಜೆಟ್ ಹಿನ್ನಲೆಯಲ್ಲಿ ಶಿವಮೊಗ್ಗದಲ್ಲಿ ವಿಶೇಷ ಪೂಜೆ, ಕೋಟೆ ಶ್ರೀ ಮಾರಿಕಾಂಬಾ ದೇವಿಗೆ ಮಡ್ಲಕ್ಕಿ ಸಮರ್ಪಣೆ

On: February 28, 2026 4:06 PM
Follow Us:

ಶಿವಮೊಗ್ಗ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6ರಂದು 17ನೇ ಬಾರಿ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಕರ್ನಾಟಕದ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಬಜೆಟ್ ಮಂಡನೆ ಮಾಡಿದ ಹೆಗ್ಗಳಿಕೆಗೆ ಪಾತ್ರರಾಗುತ್ತಿರುವ ಈ ಮಹತ್ವದ ಕ್ಷಣದ ಅಂಗವಾಗಿ, ಅವರ ಅಭಿಮಾನಿಗಳು ಮತ್ತು ಬೆಂಬಲಿಗರು ಧಾರ್ಮಿಕ ಪೂಜೆ-ಪುನಸ್ಕಾರಗಳ ಮೂಲಕ ಶುಭಾಶಯ ಕೋರಿದರು.

ಕೋಟೆ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮಾಜಿ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಅವರ ನೇತೃತ್ವದಲ್ಲಿ “ಕರುನಾಡ ದೊರೆ ಸಿದ್ದರಾಮಯ್ಯ ಅಭಿಮಾನಿ ಬಳಗ”ದಿಂದ ಕೋಟೆ ಶ್ರೀ ಮಾರಮ್ಮ ದೇವಿಗೆ ಮಡ್ಲಕ್ಕಿ ಸಮರ್ಪಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ರಾಜ್ಯದ ಜನತೆಗೆ ಇನ್ನಷ್ಟು ಜನಪರ ಯೋಜನೆಗಳನ್ನು ನೀಡುವ ಶಕ್ತಿ ಹಾಗೂ ಆರೋಗ್ಯವನ್ನು ಮುಖ್ಯಮಂತ್ರಿಗಳಿಗೆ ದೇವರು ಕರುಣಿಸಲಿ, ರಾಜ್ಯದ ಆಡಳಿತ ಸುದೀರ್ಘವಾಗಿ, ಸುಗಮವಾಗಿ ನಡೆಯಲಿ ಎಂದು ಭಕ್ತಿಭಾವದಿಂದ ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ಯುವ ಮುಖಂಡ ಕೆ. ರಂಗನಾಥ್ ಮಾತನಾಡಿ “ಸಾಮಾಜಿಕ ನ್ಯಾಯ ಮತ್ತು ಜನಪರ ಆಡಳಿತಕ್ಕೆ ಬದ್ಧರಾಗಿರುವ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಅಭಿವೃದ್ಧಿಗೆ ದಿಕ್ಕು ತೋರಿಸುವ ಮತ್ತೊಂದು ಬಜೆಟ್ ಮಂಡಿಸಲಿದ್ದಾರೆ. ರೈತರು, ಮಹಿಳೆಯರು, ಯುವಕರು ಹಾಗೂ ಬಡ ವರ್ಗದ ಜನರಿಗೆ ಅನುಕೂಲಕರ ಯೋಜನೆಗಳು ಮುಂದುವರಿಯಲಿ” ಎಂದು ಆಶಯ ವ್ಯಕ್ತಪಡಿಸಿದರು.

ಈ ಪೂಜಾ ಕಾರ್ಯಕ್ರಮದಲ್ಲಿ ಯುವ ಮುಖಂಡ ಕೆ. ರಂಗನಾಥ್, ಸೂಡ ಸದಸ್ಯ ಎಂ. ಪ್ರವೀಣ್ ಕುಮಾರ್, ಹಾಪ್ ಕಾಮ್ಸ್ ನಿರ್ದೇಶಕ ಶರತ್ ಮರಿಯಪ್ಪ, ಸಿಟಿ ಕೋ-ಆಪರೇಟಿವ್ ಬ್ಯಾಂಕ್ ನಿರ್ದೇಶಕ ಬಿ. ಲೋಕೇಶ್, ಗ್ಯಾರೆಂಟಿ ಪ್ರಾಧಿಕಾರದ ಸದಸ್ಯರಾದ ಎಸ್. ಕುಮಾರೇಶ್ ಮತ್ತು ಎಸ್. ಬಸವರಾಜ್ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು. ಪ್ರಮುಖರಾದ ಹೆಚ್.ಪಿ. ಗಿರೀಶ್, ಎಂ. ರಾಕೇಶ್, ಕೆ.ಎಲ್. ಪವನ್, ಗುರುಪ್ರಸಾದ್, ಮನ್ವಿಕ್ ಜೈನ್, ಚೇತನ್, ಸುಹಾಸ್, ನಾಗೇಶ್, ಹರೀಶ್, ಪ್ರಜ್ವಲ್, ಭವಿತ್ ಹಾಗೂ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಮುಖ್ಯಮಂತ್ರಿಗಳ 17ನೇ ಬಜೆಟ್ ಮಂಡನೆಗೆ ರಾಜ್ಯದಾದ್ಯಂತ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಹೆಚ್ಚಿನ ನಿರೀಕ್ಷೆ ಮೂಡಿದ್ದು, ಅಭಿಮಾನಿಗಳಿಂದ ಹಾರೈಕೆಗಳ ಸುರಿಮಳೆ ಹರಿದುಬರುತ್ತಿದೆ.

K.M.Sathish Gowda

Join WhatsApp

Join Now

Facebook

Join Now

Read more

ಕುಮಾರಸ್ವಾಮಿ ಸಿಎಂ ವಿಚಾರ ಮೋದಿ–ಶಾ ಕೈಯಲ್ಲಿ: ದೇವೇಗೌಡರ ಸ್ಪಷ್ಟ ಸಂದೇಶ

84ನೇ ಜನ್ಮದಿನ ಸಂಭ್ರಮದಲ್ಲಿ ಬಿಎಸ್‌ವೈ ಸಂಕಲ್ಪ: ರಾಜ್ಯ ಸುತ್ತಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವುದಾಗಿ ಯಡಿಯೂರಪ್ಪ ಘೋಷಣೆ

ತಮಿಳು ಸೂಪರ್‌ಸ್ಟಾರ್ ವಿಜಯ್ ವೈಯಕ್ತಿಕ ಜೀವನದಲ್ಲಿ ತಿರುವು: ಪತ್ನಿ ಸಂಗೀತಾ ವಿಚ್ಛೇದನ ಕೋರಿ ಅರ್ಜಿ

ಶಿಕಾರಿಪುರದಲ್ಲಿ ಯಡಿಯೂರಪ್ಪನವರ ಜನ್ಮದಿನ ಸಂಭ್ರಮ: ಕುಟುಂಬ ಸದಸ್ಯರಿಂದ ವಿಶೇಷ ಪೂಜೆ ಹಾಗೂ ಪ್ರಾರ್ಥನೆ

ಮಕ್ಕಳ ಹಿತದೃಷ್ಟಿಯಿಂದ ಕಠಿಣ ನಿರ್ಧಾರ ಸಾಧ್ಯತೆ: ‘ಮೊಬೈಲ್ ಬಿಡಿ, ಪುಸ್ತಕ ಹಿಡಿಯಿರಿ’ ಅಭಿಯಾನಕ್ಕೆ ಮುಂದಾದ ಸಚಿವ ಮಧು ಬಂಗಾರಪ್ಪ

ಜವಾಹರಲಾಲ್ ನೆಹರು ತಾರಾಲಯದಲ್ಲಿ ವಿಜ್ಞಾನ ಸಂಭ್ರಮ: ಸೋಶಿಯಲ್ ಮೀಡಿಯಾ ಯುಗದಲ್ಲಿ ವೈಜ್ಞಾನಿಕ ದೃಷ್ಟಿಕೋನ ಅಗತ್ಯ- ಮಧು ಬಂಗಾರಪ್ಪ

Leave a Comment