ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಕೊನೆಯ ಉಸಿರು ಇರುವವರೆಗೂ ರಾಜಕೀಯದಲ್ಲೇ ಇರುತ್ತೇನೆ; ‘ನನ್ನನ್ನು ಬೆಳೆಸಿದಂತೆ ಯತೀಂದ್ರನನ್ನೂ ಬೆಳೆಸಿ’ – ಸಿದ್ದರಾಮಯ್ಯ ಮನವಿ

On: March 13, 2026 7:05 PM
Follow Us:

ಮೈಸೂರು: ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷದೊಳಗೆ ಅಧಿಕಾರ ಹಂಚಿಕೆ ಕುರಿತ ಚರ್ಚೆಗಳು ಜೋರಾಗಿರುವ ಹಿನ್ನೆಲೆಯಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ರಾಜಕೀಯ ಜೀವನದ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. “ನನ್ನ ಕೊನೆಯ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಇರುತ್ತೇನೆ. ಜನರ ಸೇವೆ ಮಾಡುತ್ತಲೇ ಇರುತ್ತೇನೆ” ಎಂದು ಅವರು ಸ್ಪಷ್ಟಪಡಿಸಿದರು.

ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರ ವ್ಯಾಪ್ತಿಯ ವರಕೋಡು ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಮ್ಮ ರಾಜಕೀಯ ಜೀವನದ ಬಗ್ಗೆ ಮನಬಿಚ್ಚಿ ಮಾತನಾಡಿದರು. “ಈ ಪ್ರದೇಶದ ಜನರ ಆಶೀರ್ವಾದದಿಂದಲೇ ನಾನು ರಾಜಕೀಯದಲ್ಲಿ ಇಷ್ಟು ಎತ್ತರಕ್ಕೆ ಬೆಳೆದಿದ್ದೇನೆ. ಇಂದು ದೇವಸ್ಥಾನ ಉದ್ಘಾಟನೆ ಮಾಡುವ ಅವಕಾಶ ಸಿಕ್ಕಿರುವುದು ನನಗೆ ತುಂಬಾ ಸಂತೋಷ ತಂದಿದೆ. ನನ್ನ ರಾಜಕೀಯ ಬದುಕಿನಲ್ಲಿ ಸೋಲು-ಗೆಲುವು ಎರಡನ್ನೂ ಕಂಡಿದ್ದೇನೆ. ಆದರೆ ಜನರ ಮೇಲಿನ ವಿಶ್ವಾಸದಿಂದಲೇ ನಾನು ಈ ಮಟ್ಟಕ್ಕೆ ಬಂದಿದ್ದೇನೆ” ಎಂದು ಹೇಳಿದರು.

ಮುಂದುವರಿದು ಮಾತನಾಡಿದ ಸಿದ್ದರಾಮಯ್ಯ, “ನಾನು ರಾಜಕೀಯದಲ್ಲಿರುವವರೆಗೂ ಜನರ ಸೇವೆಯೇ ನನ್ನ ಧ್ಯೇಯ. ಕೊನೆಯ ಉಸಿರು ಇರುವವರೆಗೂ ರಾಜಕೀಯದಲ್ಲೇ ಮುಂದುವರಿಯುತ್ತೇನೆ” ಎಂದು ಹೇಳಿದರು.

‘ನನ್ನನ್ನು ಬೆಳೆಸಿದಂತೆ ಮಗನನ್ನೂ ಬೆಳೆಸಿ’

ಮುಖ್ಯಮಂತ್ರಿಯಾಗಿರುವ ಕಾರಣ ಕ್ಷೇತ್ರಕ್ಕೆ ಆಗಾಗ ಭೇಟಿ ನೀಡಲು ಸಾಧ್ಯವಾಗುತ್ತಿಲ್ಲ ಎಂಬುದನ್ನು ತಿಳಿಸಿದ ಅವರು, ತಮ್ಮ ಪುತ್ರ ಯತೀಂದ್ರ ಸಿದ್ದರಾಮಯ್ಯ ಬಗ್ಗೆ ಗ್ರಾಮಸ್ಥರಿಗೆ ಮನವಿ ಮಾಡಿದರು.

“ನಾನು ಮುಖ್ಯಮಂತ್ರಿಯಾಗಿರುವುದರಿಂದ ಎಲ್ಲಾ ಸಮಯದಲ್ಲೂ ಕ್ಷೇತ್ರದಲ್ಲಿ ಇರಲು ಸಾಧ್ಯವಾಗುವುದಿಲ್ಲ. ನನ್ನ ಮಗ ಯತೀಂದ್ರ ಆಗಾಗ ಕ್ಷೇತ್ರಕ್ಕೆ ಬರುತ್ತಾನೆ. ನೀವು ನನ್ನನ್ನು ಹೇಗೆ ಬೆಳೆಸಿದಿರೋ, ಹಾಗೆಯೇ ಯತೀಂದ್ರನನ್ನೂ ರಾಜಕೀಯವಾಗಿ ಬೆಳೆಸಬೇಕು” ಎಂದು ಗ್ರಾಮಸ್ಥರಲ್ಲಿ ವಿನಂತಿಸಿದರು.

ಭಕ್ತಿಯ ಬಗ್ಗೆ ಸಿದ್ದರಾಮಯ್ಯ ಅಭಿಪ್ರಾಯ

ಕಾರ್ಯಕ್ರಮದ ವೇಳೆ ದೇವರ ಮೇಲಿನ ನಂಬಿಕೆ ಮತ್ತು ಭಕ್ತಿಯ ಕುರಿತು ಕೂಡ ಸಿದ್ದರಾಮಯ್ಯ ತಮ್ಮ ಅಭಿಪ್ರಾಯ ಹಂಚಿಕೊಂಡರು.

“ದೇವರ ಮೇಲಿನ ಭಕ್ತಿ ಶುದ್ಧವಾಗಿರಬೇಕು. ದೇವರು ಇದ್ದಾನೆ ಎಂಬ ನಂಬಿಕೆ ಎಲ್ಲರಲ್ಲೂ ಇರಬೇಕು. ಆದರೆ ಶುದ್ಧವಾದ ಭಕ್ತಿ ಇಲ್ಲದೆ ಎಷ್ಟೇ ದೇವಾಲಯಗಳಿಗೆ ಹೋಗಿ ದರ್ಶನ ಮಾಡಿದರೂ ಅದರ ಪ್ರಯೋಜನ ಇರುವುದಿಲ್ಲ. ಭಕ್ತಿ ಎಂದರೆ ಯಾರನ್ನೂ ದ್ವೇಷಿಸದ ಮನಸ್ಸು ಇರಬೇಕು” ಎಂದು ಅವರು ಹೇಳಿದರು.

ಸಚಿವರಿಗೆ ಸಿದ್ದರಾಮಯ್ಯ ವಿಶೇಷ ಔತಣಕೂಟ

ರಾಜ್ಯ ರಾಜಕಾರಣದಲ್ಲಿ ‘ಡಿನ್ನರ್ ರಾಜಕೀಯ’ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರಿಗೆ ವಿಶೇಷ ಔತಣಕೂಟ ಆಯೋಜಿಸಿದ್ದಾರೆ. ಮಾರ್ಚ್ 16ರಂದು ಬೆಂಗಳೂರಿನ ತಮ್ಮ ಸರ್ಕಾರಿ ನಿವಾಸ ‘ಕಾವೇರಿ’ಯಲ್ಲಿ ಸಚಿವರಿಗೆ ಊಟದ ಕೂಟ ಏರ್ಪಡಿಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಇದಕ್ಕೂ ಕೆಲ ದಿನಗಳ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಹ ಡಿನ್ನರ್ ಸಭೆ ಆಯೋಜಿಸಿದ್ದರು. ಅದರ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಸಚಿವರನ್ನು ಊಟಕ್ಕೆ ಆಹ್ವಾನಿಸಿರುವುದು ಕಾಂಗ್ರೆಸ್ ಪಕ್ಷದ ಒಳರಾಜಕೀಯ ಚರ್ಚೆಗೆ ಕಾರಣವಾಗಿದೆ.

ಪ್ರಸ್ತುತ ವಿಧಾನಸಭೆಯ ಬಜೆಟ್ ಅಧಿವೇಶನ ನಡೆಯುತ್ತಿರುವ ಸಮಯದಲ್ಲೇ ಕಾಂಗ್ರೆಸ್ ಪಕ್ಷದ ಆಂತರಿಕ ಚಟುವಟಿಕೆಗಳು ಚುರುಕುಗೊಂಡಿರುವ ಲಕ್ಷಣಗಳು ಕಾಣಿಸುತ್ತಿವೆ. ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರು ಡಿನ್ನರ್ ಸಭೆ ಆಯೋಜಿಸಿದ್ದರು. ಇದೀಗ ಮುಖ್ಯಮಂತ್ರಿ ಕೂಡ ಸಚಿವರೊಂದಿಗೆ ಸಭೆ ನಡೆಸಲು ಮುಂದಾಗಿರುವುದು ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.

ಸಭೆಯಲ್ಲಿ ಹಲವು ಪ್ರಮುಖ ವಿಚಾರಗಳ ಚರ್ಚೆ ಸಾಧ್ಯತೆ

ಕಾವೇರಿ ನಿವಾಸದಲ್ಲಿ ನಡೆಯಲಿರುವ ಈ ಔತಣಕೂಟದಲ್ಲಿ ಹಲವು ಪ್ರಮುಖ ರಾಜಕೀಯ ವಿಷಯಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ವಿಶೇಷವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಸಿದ್ಧತೆ, ಜಿಬಿಎ ಚುನಾವಣೆಗಳ ತಯಾರಿ, ಒಳಮೀಸಲಾತಿ ವಿಚಾರ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಯಬಹುದು

K.M.Sathish Gowda

Join WhatsApp

Join Now

Facebook

Join Now

Leave a Comment