ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಮಾರ್ಚ್‌ 19ರಂದು ಹುಬ್ಬಳ್ಳಿಯ ತಿರುಮಲಕೊಪ್ಪದಲ್ಲಿ ಧಾರ್ಮಿಕ ಮಹೋತ್ಸವ: ಜಗದ್ಗುರು ರೇಣುಕಾಚಾರ್ಯರ ರಥೋತ್ಸವಕ್ಕೆ ಸಿದ್ಧತೆ

On: March 14, 2026 11:08 PM
Follow Us:

ಹುಬ್ಬಳ್ಳಿ: ಹುಬ್ಬಳ್ಳಿ ತಾಲ್ಲೂಕಿನ ತಿರುಮಲಕೊಪ್ಪ ಗ್ರಾಮದಲ್ಲಿರುವ ಶ್ರೀ ಜಗದ್ಗುರು ರೇಣುಕ ಧರ್ಮ ನಿವಾಸದಲ್ಲಿ ಮಾರ್ಚ್‌ 19ರಂದು ಶ್ರೀ ಜಗದ್ಗುರು ಪಂಚಾಚಾರ್ಯ ಯುಗಮಾನೋತ್ಸವ ಹಾಗೂ ಶ್ರೀ ಜಗದ್ಗುರು ರೇಣುಕಾಚಾರ್ಯರ ಭವ್ಯ ರಥೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಯೋಜಿಸಲಾಗಿದೆ.

ಈ ಮಹೋತ್ಸವವು ಬಾಳೆಹೊನ್ನೂರು ಶ್ರೀ ರಂಭಾಪುರಿ ಪೀಠದ ಡಾ. ವೀರಸೋಮೇಶ್ವರ ಜಗದ್ಗುರುಗಳ ಸಾನ್ನಿಧ್ಯದಲ್ಲಿ ನಡೆಯಲಿದ್ದು, ವಿವಿಧ ಮಠಾಧೀಶರು ಹಾಗೂ ಧಾರ್ಮಿಕ ಮುಖಂಡರು ಭಾಗವಹಿಸಲಿದ್ದಾರೆ. ಮುಕ್ತಿಮಂದಿರ ಕ್ಷೇತ್ರದ ವಿಮಲ ರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಸ್ವಾಮಿಗಳು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಈ ಸಂದರ್ಭದಲ್ಲಿ ಬಂಕಾಪುದ ರೇವಣಸಿದ್ಧೇಶ್ವರ ಶಿವಾಚಾರ್ಯರು, ಸುಳ್ಳದ ಶಿವಸಿದ್ಧರಾಮೇಶ್ವರ ಶಿವಾಚಾರ್ಯರು, ಸೂಡಿಯ ಡಾ.ಕೊಟ್ಟೂರು ಬಸವೇಶ್ವರ ಶಿವಾಚಾರ್ಯರು, ಮಳಲಿ ಮಠದ ಡಾ. ಗುರುನಾಗಭೂಷಣ ಶಿವಾಚಾರ್ಯರು, ಸಂಗೊಳ್ಳಿ ಗುರುಲಿಂಗ ಶಿವಾಚಾರ್ಯರು ಹಾಗೂ ಮಾಘನಗೇರ ಏಕಾಕ್ಷರ ಶಿವಾಚಾರ್ಯರು ಉಪದೇಶಾಮೃತ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಚಿವ ಸಂತೋಷ್ ಲಾಡ್, ಶಾಸಕ ಎಂ.ಆರ್. ಪಾಟೀಲ, ಮಾಜಿ ಸಂಸದ ಮಂಜುನಾಥ ಕುನ್ನೂರು, ಮಾಜಿ ಶಾಸಕ ಎಂ.ಎಸ್. ಅಕ್ಕಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಜೊತೆಗೆ ನೂಲ್ವಿಯ ಶಂಕರಗೌಡ ಸಿದ್ದನಗೌಡ, ಅದರಗುಂಚಿ ಎಸ್‌.ಎಸ್‌. ಪಾಟೀಲ, ಅಜ್ಜಯ್ಯ ಗಡ್ಡೆದೇವರಮಠ, ಎಂ.ಜಿ. ಹಿರೇಮಠ ಹಾಗೂ ವಿಶ್ವನಾಥ ಹಿರೇಗೌಡ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಗಣ್ಯರು ಮತ್ತು ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮಕ್ಕೂ ಮುನ್ನ ಮಾರ್ಚ್‌ 19ರಂದು ಸಂಜೆ ಶ್ರೀ ಜಗದ್ಗುರು ರೇಣುಕಾಚಾರ್ಯರ ರಥೋತ್ಸವವು ಶ್ರೀ ರಂಭಾಪುರಿ ಜಗದ್ಗುರುಗಳ ಸಾನ್ನಿಧ್ಯದಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ಅದೇ ದಿನ ಬೆಳಿಗ್ಗೆ ಶಿವದೀಕ್ಷೆ ಕಾರ್ಯಕ್ರಮವೂ ನಡೆಯಲಿದ್ದು, ಆಸಕ್ತ ಭಕ್ತರು ತಮ್ಮ ಹೆಸರುಗಳನ್ನು ಮುಂಗಡವಾಗಿ ನೋಂದಾಯಿಸಿಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ. ನೋಂದಣಿಗಾಗಿ ಮೊಬೈಲ್ ಸಂಖ್ಯೆಗಳು: 6360475874 ಹಾಗೂ 8970967311 ಅನ್ನು ಸಂಪರ್ಕಿಸಬಹುದು.

ಇದೇ ವೇಳೆ ಪ್ರಾತಃಕಾಲದಲ್ಲಿ ಲಿಂಗ ಶ್ರೀಮದ್ ರಂಭಾಪುರಿ ವೀರಗಂಗಾಧರ ಜಗದ್ಗುರುಗಳ ಮಂಗಳ ಮೂರ್ತಿಗೆ ರುದ್ರಾಭಿಷೇಕ ಪೂಜೆ ನೆರವೇರಿಸಲಾಗುತ್ತದೆ.

ಮಾರ್ಚ್‌ 20ರಂದು ಸಂಜೆ ಪಾರ್ವತಿ ರಥೋತ್ಸವ ಹಾಗೂ ಧಾರ್ಮಿಕ ಸಮಾರಂಭ ನಡೆಯಲಿದ್ದು, ಮಠಾಧೀಶರು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ. ತಿರುಮಲಕೊಪ್ಪದ ಶ್ರೀ ಬಸವೇಶ್ವರ ಯುವಕ ಮಂಡಳಿ ಹಾಗೂ ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಪ್ರೌಢಶಾಲೆಯ ಶಿಕ್ಷಕ ವೃಂದ ಕಾರ್ಯಕ್ರಮದ ಆಯೋಜನೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದಾರೆ.

ಕಾರ್ಯಕ್ರಮಕ್ಕೆ ಆಗಮಿಸುವ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಧಾರ್ಮಿಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಶ್ರೀ ರಂಭಾಪುರಿ ಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಹೆಚ್‌. ಬಾಳನಗೌಡ ಮನವಿ ಮಾಡಿದ್ದಾರೆ.

K.M.Sathish Gowda

Join WhatsApp

Join Now

Facebook

Join Now

Read more

34 ವರ್ಷಗಳ ನಂತರ ಮರುಕಳಿಸಿದ ಐತಿಹಾಸಿಕ ಕ್ಷಣ: ಮೇ 17 ರಂದು ಶಿವಮೊಗ್ಗದಲ್ಲಿ ಪಂಚಪೀಠಾಧೀಶರ ಭವ್ಯ ಅಡ್ಡಪಲ್ಲಕ್ಕಿ ಮಹೋತ್ಸವ; ಭಕ್ತರಿಗೆ ರಂಭಾಪುರಿ ಶ್ರೀಗಳ ಕರೆ

ತಾಯಿ ಎಂಬುದು ಕೇವಲ ಒಂದು ಪದವಲ್ಲ; ಅದು ಪ್ರೀತಿ, ತ್ಯಾಗ ಮತ್ತು ಕರ್ತವ್ಯದ ಪ್ರತಿರೂಪ: ಶ್ರೀ ಶಾಂತವೀರ ಮಹಾಸ್ವಾಮೀಜಿ

ಶಿವಮೊಗ್ಗದಲ್ಲಿ ಪಂಚಪೀಠಾಧೀಶ್ವರರ ಅಡ್ಡ ಪಲ್ಲಕ್ಕಿ ಮಹೋತ್ಸವದ ಸಂಭ್ರಮ: ಅಲ್ಲಮಪ್ರಭು ಮೈದಾನದಲ್ಲಿ ಭೂಮಿ ಪೂಜೆ

ಪುರಲೆ ಗ್ರಾಮದಲ್ಲಿ ಪೂರ್ವಭಾವಿ ಸಭೆ: ಶ್ರೀ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವಕ್ಕೆ ಸಿದ್ಧತೆ

ಪಂಚಪೀಠಾಧೀಶ್ವರರ ಅಡ್ಡ ಪಲ್ಲಕ್ಕಿ ಮಹೋತ್ಸವ ಹಾಗೂ ಬಿಎಸ್‌ವೈ ಅಭಿನಂದನಾ ಸಮಾರಂಭ: ಶಿವಮೊಗ್ಗ ಕಾರ್ಯಕ್ರಮಕ್ಕೆ ಭದ್ರಾವತಿಯಲ್ಲಿ ಸಿದ್ಧತಾ ಸಭೆ

ಶಿವಮೊಗ್ಗ: ಅಡ್ಡಪಲ್ಲಕ್ಕಿ ಮಹೋತ್ಸವಕ್ಕೆ ಭರದ ಸಿದ್ಧತೆ; “ಉತ್ಸವವನ್ನು ಐತಿಹಾಸಿಕವಾಗಿಸಿ” ಎಂದು ಆಯನೂರು ಮಂಜುನಾಥ್ ಕರೆ

Leave a Comment