ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಪಶುವೈದ್ಯೆಯ ದುರಂತ ಸಾವು: ನೀರಾನೆ ದಾಳಿ ಪ್ರಕರಣಕ್ಕೆ ಉನ್ನತ ಮಟ್ಟದ ತನಿಖೆ – ಸಚಿವ ಮಧು ಬಂಗಾರಪ್ಪ

On: March 23, 2026 2:10 PM
Follow Us:

ಶಿವಮೊಗ್ಗ: ತಾವರೆಕೊಪ್ಪ ಮೃಗಾಲಯದಲ್ಲಿ ವನ್ಯಜೀವಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ನಡೆದ ದುರ್ಘಟನೆ ರಾಜ್ಯವನ್ನು ಕಂಬನಿ ಮಿಡಿಯುವಂತೆ ಮಾಡಿದೆ. ಕರ್ತವ್ಯನಿಷ್ಠೆಯಿಂದ ವನ್ಯಜೀವಿಗಳ ಸೇವೆಯಲ್ಲಿ ತೊಡಗಿದ್ದ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರು ನೀರಾನೆ ದಾಳಿಯಿಂದ ದುರ್ಘಟನೆಯಲ್ಲಿ ಸಾವನ್ನಪ್ಪಿರುವುದು ಅತ್ಯಂತ ನೋವಿನ ಸಂಗತಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.

ಈ ಕುರಿತು ಸಂತಾಪ ಸೂಚಿಸಿರುವ ಅವರು, “ತಮ್ಮ ವೃತ್ತಿ ಜೀವನವನ್ನು ಸಂಪೂರ್ಣವಾಗಿ ವನ್ಯಜೀವಿಗಳ ರಕ್ಷಣೆಗೆ ಮತ್ತು ಆರೈಕೆಗೆ ಮುಡಿಪಾಗಿಟ್ಟಿದ್ದ ಡಾ. ಸಮೀಕ್ಷಾ ರೆಡ್ಡಿ ಅವರ ಅಗಲಿಕೆ ಕೇವಲ ಅವರ ಕುಟುಂಬಕ್ಕೆ ಅಥವಾ ಅರಣ್ಯ ಇಲಾಖೆಗೆ ಮಾತ್ರವಲ್ಲ, ಇಡೀ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಯುವ ವಯಸ್ಸಿನಲ್ಲೇ ಸೇವಾಭಾವದಿಂದ ಕೆಲಸ ಮಾಡುತ್ತಿದ್ದ ವೈದ್ಯೆಯನ್ನು ಕಳೆದುಕೊಂಡಿರುವುದು ಅತೀವ ದುಃಖಕರ” ಎಂದು ಹೇಳಿದ್ದಾರೆ.

ಇಂತಹ ದುರಂತದ ಸಂದರ್ಭದಲ್ಲಿ ಸರ್ಕಾರ ಮೃತರ ಕುಟುಂಬದೊಂದಿಗೆ ದೃಢವಾಗಿ ನಿಲ್ಲಲಿದೆ ಎಂದು ಭರವಸೆ ನೀಡಿದ ಸಚಿವರು, ಘಟನೆ ಕುರಿತು ಈಗಾಗಲೇ ಅರಣ್ಯ ಸಚಿವರು ಉನ್ನತ ಮಟ್ಟದ ತನಿಖೆಗೆ ಆದೇಶಿಸಿರುವುದಾಗಿ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಡಾ. ಸಮೀಕ್ಷಾ ರೆಡ್ಡಿ ಅವರ ಅಗಲಿಕೆಯಿಂದ ಉಂಟಾದ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ, ಸಹೋದ್ಯೋಗಿಗಳಿಗೆ ಮತ್ತು ಸ್ನೇಹಿತರಿಗೆ ದೊರಕಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಚಿವರು ಸಂತಾಪ ತಿಳಿಸಿದ್ದಾರೆ.

K.M.Sathish Gowda

Join WhatsApp

Join Now

Facebook

Join Now

Read more

ಯುವಕರು ಸಂಘಟಿತರಾಗಿ ನಾರಾಯಣ ಗುರುಗಳ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲಿ: ಸಚಿವ ಮಧು ಬಂಗಾರಪ್ಪ

ಧರ್ಮ, ಪರಂಪರೆ ಹಾಗೂ ಮಠಮಾನ್ಯಗಳ ಸಂರಕ್ಷಣೆಗೆ ಸಂಘಟಿತ ಪ್ರಯತ್ನ ಅಗತ್ಯ: ಭಿನ್ನಾಭಿಪ್ರಾಯ ಬದಿಗಿಟ್ಟು ಸಮಾಜದ ಹಿತಕ್ಕಾಗಿ ಒಂದಾಗ ಬೇಕು: ವೀರಶೈವ ಲಿಂಗಾಯತ ಸಮಾಜದ ಒಗ್ಗಟ್ಟು ಕಾಪಾಡುವುದು ಎಲ್ಲರ ಜವಾಬ್ದಾರಿ: ಬಿ.ವೈ. ವಿಜಯೇಂದ್ರ

ಭಕ್ತಿಯ ಮಹಾಪ್ರವಾಹದಲ್ಲಿ ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಲಕ್ಷಾಂತರ ಜನರ ಸಾಕ್ಷಿ! ಕಾಲಿಡಲೂ ಜಾಗವಿಲ್ಲ, ಬಾನಂಗಳದಲ್ಲಿ ಜೈಕಾರ! ಶಿವಮೊಗ್ಗದಲ್ಲಿ ಮೈ ನವಿರೇಳಿಸಿದ ಗಣೇಶೋತ್ಸವದ ಅದ್ಧೂರಿ ಮೆರವಣಿಗೆ!

ಸೆ.26-27ರಂದು ಬೆಂಗಳೂರಿನಲ್ಲಿ ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಮಹಾಸಮ್ಮೇಳನ: ಪಂಚಪೀಠಾಧೀಶರ ಸಾನ್ನಿಧ್ಯ

ಶಿವಮೊಗ್ಗ ಹಿಂದೂ ಗಣಪತಿ ಮೆರವಣಿಗೆಗೆ ಭಕ್ತಿಯ ಸಾಥ್: ಐದು ಸಾವಿರ ಭಕ್ತರಿಗೆ ಅನ್ನದಾಸೋಹ: ಮೂರನೇ ವರ್ಷವೂ ಸೇವಾ ಪರಂಪರೆ ಮುಂದುವರಿಸಿದ ಎಸ್‌ಆರ್‌ವಿ ಎಂಟರ್‌ಪ್ರೈಸಸ್ ಗೆಳೆಯರ ಬಳಗ

50 ವರ್ಷಗಳ ದಾಂಪತ್ಯ ಜೀವನ ಸಮಾಜಕ್ಕೆ ಮಾದರಿ: ಸಂಸ್ಕಾರ, ಶಿಕ್ಷಣದೊಂದಿಗೆ ಬದುಕು ಕಟ್ಟಿಕೊಳ್ಳಿ: ತಾಯ್ನಾಡಿಗೆ ಮರಳಿ ಸೇವೆ ಸಲ್ಲಿಸಿ ಎಂದು ವಿದ್ಯಾರ್ಥಿಗಳಿಗೆ ಕೆ.ಈ. ಕಾಂತೇಶ್ ಕರೆ

Leave a Comment