ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಬಿಎಸ್‌ವೈ 50 ವರ್ಷದ ರಾಜಕೀಯ ಪಯಣಕ್ಕೆ ಅಭಿಮಾನೋತ್ಸವ: ಪೂರ್ವಭಾವಿ ಸಭೆಯಲ್ಲಿ ಭರ್ಜರಿ ಸಿದ್ಧತೆ

On: March 25, 2026 9:42 PM
Follow Us:

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಅಪಾರ ಪ್ರಭಾವ ಬೀರಿರುವ ಕೇಂದ್ರ ಸಂಸದೀಯ ಮಂಡಳಿಯ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಪಯಣವನ್ನು ಸ್ಮರಣೀಯವಾಗಿಸಲು ರಾಜ್ಯಾದ್ಯಂತ ಅಭಿಮಾನೋತ್ಸವ ಕಾರ್ಯಕ್ರಮವನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್‌ನಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಸಭೆಯಲ್ಲಿ ಭಾಗವಹಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು, ಯಡಿಯೂರಪ್ಪ ಅವರ ರಾಜಕೀಯ ಜೀವನವು ಕೇವಲ ಅಧಿಕಾರ ರಾಜಕೀಯಕ್ಕೆ ಸೀಮಿತವಾಗಿರದೆ, ರೈತರು, ಬಡವರು ಹಾಗೂ ಹಿಂದುಳಿದ ವರ್ಗಗಳ ಪರ ಹೋರಾಟಕ್ಕೆ ಸಮರ್ಪಿತವಾಗಿದೆ ಎಂದು ಹೇಳಿದರು. ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಹಲವು ಜನಪರ ಯೋಜನೆಗಳು ಜಾರಿಗೆ ಬಂದಿದ್ದು, ಅವರ ಸೇವೆಯನ್ನು ಗೌರವಿಸುವುದು ನಮ್ಮ ಕರ್ತವ್ಯ ಎಂದರು.

ವಿಪಕ್ಷ ನಾಯಕ ಆರ್. ಅಶೋಕ್ ಅವರು ಮಾತನಾಡಿ, ಯಡಿಯೂರಪ್ಪ ಅವರು ಸಾಮಾನ್ಯ ಕಾರ್ಯಕರ್ತರಿಂದ ಆರಂಭಿಸಿ ಮುಖ್ಯಮಂತ್ರಿ ಸ್ಥಾನವರೆಗೆ ಏರಿದ ನಾಯಕತ್ವವು ಹೊಸ ತಲೆಮಾರಿಗೆ ಪ್ರೇರಣೆಯಾಗಿದೆ ಎಂದು ಹೇಳಿದರು. ಅವರ ಹೋರಾಟ, ಶ್ರಮ ಮತ್ತು ನಿಷ್ಠೆ ರಾಜಕೀಯದಲ್ಲಿ ಮಾದರಿಯಾಗಿವೆ ಎಂದು ಅಭಿಪ್ರಾಯಪಟ್ಟರು.

ಇನ್ನೂ ಸಭೆಯಲ್ಲಿ ಛಲವಾದಿ ನಾರಾಯಣಸ್ವಾಮಿ, ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ, ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ. ಸಿ.ಎನ್. ಅಶ್ವಥ್ ನಾರಾಯಣ್, ಸಂಸದ ಬಿ.ವೈ. ರಾಘವೇಂದ್ರ ಸೇರಿದಂತೆ ಅನೇಕ ಹಿರಿಯ ನಾಯಕರು ಭಾಗವಹಿಸಿ ಅಭಿಮಾನೋತ್ಸವ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಅಗತ್ಯವಾದ ರೂಪರೇಷಗಳ ಬಗ್ಗೆ ಚರ್ಚಿಸಿದರು.

ಮಾಜಿ ಸಚಿವರಾದ ಬಿ. ಶ್ರೀರಾಮುಲು, ಅರಗ ಜ್ಞಾನೇಂದ್ರ, ವಿಧಾನಸಭೆಯ ವಿಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ತಿನ ಸದಸ್ಯರಾದ ಸುನೀಲ್ ವಲ್ಲ್ಯಾಪುರೆ ಹಾಗೂ ಭಾರತಿ ಶೆಟ್ಟಿ ಸೇರಿದಂತೆ ಹಲವರು ಸಭೆಯಲ್ಲಿ ಹಾಜರಿದ್ದರು.

ಸಭೆಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಅಭಿಮಾನೋತ್ಸವವನ್ನು ಭರ್ಜರಿಯಾಗಿ ಆಚರಿಸುವ ಕುರಿತು ಚರ್ಚೆ ನಡೆದಿದ್ದು, ಯುವಕರು ಹಾಗೂ ಪಕ್ಷದ ಕಾರ್ಯಕರ್ತರನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಯಡಿಯೂರಪ್ಪ ಅವರ ರಾಜಕೀಯ ಸಾಧನೆಗಳು, ಆಡಳಿತದ ಅನುಭವ ಮತ್ತು ಸಮಾಜ ಸೇವೆಯನ್ನು ಜನತೆಗೆ ಪರಿಚಯಿಸುವ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ಯೋಜನೆ ರೂಪಿಸಲಾಗಿದೆ.

ಈ ಅಭಿಮಾನೋತ್ಸವವು ಕೇವಲ ಆಚರಣೆ ಮಾತ್ರವಲ್ಲ, ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮಹತ್ವದ ಅಧ್ಯಾಯವಾಗಿರುವ ಯಡಿಯೂರಪ್ಪ ಅವರ ಸಾಧನೆಗಳನ್ನು ಸ್ಮರಿಸುವ ಒಂದು ವೇದಿಕೆಯಾಗಲಿದೆ ಎಂದು ನಾಯಕರು ಅಭಿಪ್ರಾಯಪಟ್ಟರು.

K.M.Sathish Gowda

Join WhatsApp

Join Now

Facebook

Join Now

Leave a Comment