ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ದಾವಣಗೆರೆ ಕಣದಿಂದ ಸಾದಿಕ್ ಪೈಲ್ವಾನ್ ಹೊರಕ್ಕೆ – ಕಾಂಗ್ರೆಸ್ ಗೆಲುವು ಖಚಿತವೆಂದ ಸಿದ್ದರಾಮಯ್ಯ

On: March 27, 2026 11:26 PM
Follow Us:

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಅವರು ಇಂದು ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಪಕ್ಷದ ಒಳಗೇ ಯಾವುದೇ ಗೊಂದಲಗಳಿಲ್ಲದ ಹಿನ್ನೆಲೆಯಲ್ಲಿ ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರುದಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾದಿಕ್ ಪೈಲ್ವಾನ್ ತಮ್ಮಿಗೆ ಬಹಳ ವರ್ಷಗಳಿಂದ ಪರಿಚಿತರಾಗಿದ್ದು, ಮೈಸೂರಿನ ಕುಸ್ತಿ ಅಖಾಡಗಳಲ್ಲಿ ಅವರು ಪಾಲ್ಗೊಳ್ಳುತ್ತಿದ್ದ ಸಮಯದಲ್ಲಿ ಪರಿಚಯವಾಗಿದ್ದೆ ಎಂದು ಹೇಳಿದರು. “ಅವರು ಅಭ್ಯರ್ಥಿಯಾಗಲು ಬಯಸುವುದು ಸಹಜ. ಅದರಲ್ಲಿ ತಪ್ಪೇನಿಲ್ಲ,” ಎಂದರು.

ನಿನ್ನೆ ಒಟ್ಟು 11 ಮಂದಿ ಪಕ್ಷೇತರ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆದಿದ್ದು, ಪಕ್ಷದ ಮನವಿಗೆ ಸ್ಪಂದಿಸಿ ಸಾದಿಕ್ ಪೈಲ್ವಾನ್ ಅವರು ಕೂಡ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲರಿಗೂ ಮುಖ್ಯಮಂತ್ರಿ ಧನ್ಯವಾದಗಳನ್ನು ಸಲ್ಲಿಸಿದರು.

ಇದೇ ವೇಳೆ, ದಾವಣಗೆರೆಗೆ ಶಾಸಕ ರಿಜ್ವಾನ್ ಅರ್ಷದ್, ಸಲೀಂ ಅಹ್ಮದ್‌. ನಜೀರ್ ಅಹ್ಮದ್ ಭೇಟಿ ನೀಡಿದ್ದ ವಿಚಾರವನ್ನು ಉಲ್ಲೇಖಿಸಿದ ಅವರು, ಅವರು ತಡವಾಗಿ ತಲುಪಿದ ಕಾರಣ ಸಾದಿಕ್ ಪೈಲ್ವಾನ್ ಅವರನ್ನು ನಾಮಪತ್ರ ಹಿಂಪಡೆಯುವಂತೆ ಮನವೊಲಿಸಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದರು. ವಿಧಾನಪರಿಷತ್‌ನಲ್ಲಿ ಉತ್ತರ ನೀಡುವ ಜವಾಬ್ದಾರಿ ಇದ್ದ ಕಾರಣ ತಾನು ಸ್ವತಃ ಭೇಟಿ ನೀಡಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.

ಸಾದಿಕ್ ಪೈಲ್ವಾನ್ ಅವರು ಸುಮಾರು 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ಪಕ್ಷದ ಕಟ್ಟಾಳುವಾಗಿ ಗುರುತಿಸಿಕೊಂಡಿದ್ದಾರೆ ಎಂದು ಸಿಎಂ ಹೇಳಿದರು. ದಾವಣಗೆರೆ ಕ್ಷೇತ್ರದಲ್ಲಿ ಸುಮಾರು 70 ಸಾವಿರ ಮುಸ್ಲಿಂ ಮತದಾರರಿದ್ದು, ಸಮುದಾಯದವರಿಂದ ಅಭ್ಯರ್ಥಿತ್ವದ ಆಸೆ ವ್ಯಕ್ತವಾಗಿತ್ತು. ಆದರೆ, ಪಕ್ಷದ ಉನ್ನತ ನಾಯಕರ ಮಂಡಳಿ ಎಲ್ಲಾ ಅಂಶಗಳನ್ನು ಪರಿಗಣಿಸಿ, ನಿಧನರಾದವರ ಕುಟುಂಬಕ್ಕೆ ಅವಕಾಶ ನೀಡುವ ಪದ್ಧತಿಯಂತೆ ಸಚಿವ ಎಸ್‌.ಎಸ್. ಮಲ್ಲಿಕಾರ್ಜುನ್ ಅವರ ಪುತ್ರ ಸಮರ್ಥ್ ಅವರಿಗೆ ಅಭ್ಯರ್ಥಿಯಾಗಿ ನೀಡಿದೆ ಎಂದು ವಿವರಿಸಿದರು.

ಒಟ್ಟಾರೆ, ಪಕ್ಷದಲ್ಲಿ ಏಕತೆ ಮತ್ತು ಸಮನ್ವಯತೆಯಿಂದ ಚುನಾವಣೆಗೆ ಎದುರಿಸುತ್ತಿದ್ದೇವೆ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯ ಸಾಧಿಸುವುದು ಖಚಿತ ಎಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದರು.

K.M.Sathish Gowda

Join WhatsApp

Join Now

Facebook

Join Now

Leave a Comment