ಶಿವಮೊಗ್ಗ: ನಗರದ ವಿದ್ಯುತ್ ಬಳಕೆದಾರರಿಗೆ ಮಹತ್ವದ ಮಾಹಿತಿ ಪ್ರಕಟವಾಗಿದೆ. 220 ಕೆವಿ ಎಂಆರ್‌ಎಸ್ (ಮುಖ್ಯ ಸ್ವೀಕರಣಾ ಕೇಂದ್ರ) ವ್ಯಾಪ್ತಿಯಲ್ಲಿ ನಡೆಯಲಿರುವ ತ್ರೈಮಾಸಿಕ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಏಪ್ರಿಲ್ 21ರಂದು ಹಲವು ಪ್ರದೇಶಗಳಲ್ಲಿ ನಿಗದಿತ ಅವಧಿಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ತೇವರಚಟ್ನಹಳ್ಳಿ ವಿದ್ಯುತ್ ಉಪಕೇಂದ್ರದಿಂದ ಸರಬರಾಜು ಆಗುವ 66 ಕೆವಿ ಬಸ್‌ಲೈನ್‌ಗಳ ನಿರ್ವಹಣಾ ಕಾರ್ಯ ನಡೆಯುವ ಕಾರಣದಿಂದ ಬೆಳಿಗ್ಗೆ 9.30ರಿಂದ ಸಂಜೆ 6 ಗಂಟೆಯವರೆಗೆ ನಗರ ಉಪವಿಭಾಗ–1ರ ವ್ಯಾಪ್ತಿಯ ಅನೇಕ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಶಿವ ಬಸವ ನಗರ, ಇಂದಿರಾ ಗಾಂಧಿ ಬಡಾವಣೆ, ಕುವೆಂಪು ನಗರ, ಸೂಡಾ ಲೇಔಟ್, ತ್ರಿಮೂರ್ತಿ ನಗರ, ನವುಲೆ, ಮಾರುತಿ ಬಡಾವಣೆ, ಸರ್ಜಿ ಕನ್ವೆನ್ಷನ್ ಹಾಲ್ ಸುತ್ತಮುತ್ತ, ಎಲ್.ಬಿ.ಎಸ್ ನಗರ, ಅಶ್ವತ್ ನಗರ, ಕೀರ್ತಿ ನಗರ, ದೇವಂಗಿ 1ನೇ ಹಂತ, ಬಸವೇಶ್ವರ ನಗರ, ಡಾಲರ್ಸ್ ಕಾಲೋನಿ, ಪವನ ಶ್ರೀ ಬಡಾವಣೆ, ಕೃಷಿ ನಗರ 1ನೇ ಹಂತ ಹಾಗೂ 2ನೇ ಮುಖ್ಯರಸ್ತೆ, ರಾಯಲ್ ಬಡಾವಣೆ, ಅನೂಪ್ ಪಟೇಲ್ ಬಡಾವಣೆ, ಪೆಬಲ್ಸ್ ಅಪಾರ್ಟ್‌ಮೆಂಟ್, ಶಾಂತಿನಗರ (ರಾಗಿಗುಡ್ಡ), ಪಾಪ್ಯುಲರ್ ರೈಸ್ ಮಿಲ್, ಪೇಸ್ ಕಾಲೇಜು, ತರಳಬಾಳು ಬಡಾವಣೆ, ಈಶ್ವರ್ ರೈಸ್ ಮಿಲ್, ಸೇವಲಾಲ್ ನಗರ, ವಡ್ಡರಹಟ್ಟಿ, ವಿಜಯಲಕ್ಷ್ಮಿ ರೈಸ್ ಮಿಲ್, ದೇವಂಗಿ ತೋಟ, ತಾವರೆಚಟ್ನಹಳ್ಳಿ ಯುಜಿಡಿ ಪ್ಲಾಂಟ್, ಗುಂಡಪ್ಪ ಶೆಡ್ ಯುಜಿಡಿ ಪ್ಲಾಂಟ್, ಶಾದ್ ನಗರ, ಮಲ್ಲಿಕಾರ್ಜುನ ನಗರ, ರೆಡ್ಡಿ ಲೇಔಟ್, ಜೆಎಸ್‌ಎಸ್‌ಸಿ ಇಂಜಿನಿಯರಿಂಗ್ ಕಾಲೇಜು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳು ಈ ವ್ಯಾಪ್ತಿಗೆ ಒಳಪಡುತ್ತವೆ.
ನಿರ್ವಹಣಾ ಕಾಮಗಾರಿಗಳು ವಿದ್ಯುತ್ ವ್ಯವಸ್ಥೆಯ ಸುಧಾರಣೆ ಹಾಗೂ ಸುರಕ್ಷಿತ ಸರಬರಾಜು ದೃಷ್ಟಿಯಿಂದ ಅಗತ್ಯವಾಗಿರುವುದರಿಂದ ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಅಧಿಕಾರಿಗಳು ವಿನಂತಿಸಿದ್ದಾರೆ.
ವಿದ್ಯುತ್ ವ್ಯತ್ಯಯದ ಅವಧಿಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಂಡು ಮುಂಚಿತವಾಗಿ ಸಿದ್ಧತೆ ಮಾಡಿಕೊಳ್ಳುವಂತೆ ಬಳಕೆದಾರರಿಗೆ ಸೂಚಿಸಲಾಗಿದೆ.





