ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಬಸವ ಜಯಂತಿ ಅಂಗವಾಗಿ ನಮ್ಮೂರ ಬಳಗದಿಂದ ಉಚಿತ ಆರೋಗ್ಯ ಶಿಬಿರ: ವಚನ ಕ್ರಾಂತಿ ಸಮ ಸಮಾಜಕ್ಕೆ ದಾರಿ- ಹೆಚ್.ಪಿ. ಗಿರೀಶ್

On: April 20, 2026 3:36 PM
Follow Us:

ಶಿವಮೊಗ್ಗ: ನಮ್ಮೂರ ಬಳಗದ ವತಿಯಿಂದ ಅಲ್ಲಮಪ್ರಭು ಮೈದಾನ (ಫ್ರೀಡಂ ಪಾರ್ಕ್)ನಲ್ಲಿ ವಿಶ್ವಗುರು, ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿಯನ್ನು ಆಚರಿಸಲಾಯಿತು. ಈ ಅಂಗವಾಗಿ ಶಿವಮೊಗ್ಗ ಕಿಡ್ನಿ ಆಸ್ಪತ್ರೆ ಮತ್ತು ವಾಸನ್ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಸಲ್ಲಿಸಿ ಗೌರವ ನಮನ ಸಲ್ಲಿಸಲಾಯಿತು. ನಂತರ ಸಿಹಿ ವಿತರಣೆ ಮೂಲಕ ಜಯಂತಿ ಆಚರಣೆಗೆ ವಿಶೇಷ ಸಾಂಸ್ಕೃತಿಕ ಸ್ಪರ್ಶ ನೀಡಲಾಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ನಮ್ಮೂರ ಬಳಗದ ಸಂಚಾಲಕ ಹೆಚ್.ಪಿ. ಗಿರೀಶ್ ಅವರು, 12ನೇ ಶತಮಾನದಲ್ಲಿಯೇ ಬಸವಣ್ಣನವರು ಅನುಭವ ಮಂಟಪದ ಮೂಲಕ ಸಮ ಸಮಾಜದ ಕಲ್ಪನೆಯನ್ನು ಜಾರಿಗೆ ತಂದಿದ್ದರು ಎಂದು ಹೇಳಿದರು. “ಸಂವಿಧಾನದ ತತ್ವಗಳಿಗೆ ಸಮಾನವಾದ ಚಿಂತನೆ, ಶಿಕ್ಷಣದ ಮಹತ್ವ, ಹಾಗೂ ದಾಸೋಹ ಸೇವೆಯ ಪರಿಕಲ್ಪನೆಗಳನ್ನು ಬಸವಣ್ಣನವರು ಅಂದು ರೂಪಿಸಿದ್ದರು. ಅವರ ವಚನಗಳು ಇಂದಿಗೂ ಸಮಾಜಕ್ಕೆ ದಾರಿ ತೋರಿಸುವ ಶಕ್ತಿಶಾಲಿ ಮಾರ್ಗದರ್ಶಕವಾಗಿವೆ. ಸಮ ಸಮಾಜ ನಿರ್ಮಾಣಕ್ಕೆ ವಚನ ಕ್ರಾಂತಿಯ ಆಶಯಗಳು ಅತ್ಯಂತ ಅವಶ್ಯಕ” ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಡಿ.ವಿ.ಎಸ್. ಕಾಲೇಜಿನ ನಿವೃತ್ತ ಉಪನ್ಯಾಸಕರಾದ ನಾಗರಾಜ್ ರಾವ್ ಅವರು, ಬಸವಣ್ಣನವರು ತಮ್ಮ ವಚನಗಳ ಮೂಲಕ ಸಾಮಾಜಿಕ ಕ್ರಾಂತಿಗೆ ಚಾಲನೆ ನೀಡಿದ ಮಹಾನ್ ಕಾಯಕ ಯೋಗಿ ಎಂದು ಹೇಳಿದರು. ಮೇಲು-ಕೀಳು ಎಂಬ ಸಾಮಾಜಿಕ ಪಿಡುಗುಗಳ ವಿರುದ್ಧ ನಿರಂತರವಾಗಿ ಹೋರಾಡಿದ ಅವರ ಆದರ್ಶಗಳು ಇಂದಿಗೂ ಸಮಾಜಕ್ಕೆ ಪ್ರೇರಣೆಯಾಗಿವೆ. “ನಮ್ಮೂರ ಬಳಗವು ಬಸವ ಜಯಂತಿಯ ಅಂಗವಾಗಿ ಆರೋಗ್ಯ ಶಿಬಿರವನ್ನು ಆಯೋಜಿಸಿರುವುದು ಶ್ಲಾಘನೀಯ ಕಾರ್ಯ” ಎಂದು ಅವರು ಅಭಿಪ್ರಾಯಪಟ್ಟರು.

ಈ ಕಾರ್ಯಕ್ರಮದಲ್ಲಿ ನಮ್ಮೂರ ಬಳಗದ ಪ್ರಧಾನ ಸಂಚಾಲಕ ಕೆ. ರಂಗನಾಥ್, ಗೌರವ ಸಂಚಾಲಕರುಗಳಾದ ನಾಗರಾಜ್ ಕಂಕಾರಿ ಹಾಗೂ ಸಿ. ರವಿ, ಸಂಚಾಲಕರುಗಳಾದ ಕೆ.ಆರ್. ಸುರೇಶ್, ರಾಜೇಶ್ ಮಂದಾರ, ಟಿ. ಗುರುಪ್ರಸಾದ್, ಆರ್. ಕಿರಣ್, ಎಂ. ರಾಕೇಶ್, ಕೇಬಲ್ ಲೋಕೇಶ್, ರಾಘವೇಂದ್ರ ರಾವ್, ಸುಬ್ರಮಣಿ, ಎಸ್. ಬಸವರಾಜ್, ಮನ್ವಿಕ್ ಜೈನ್, ಎಂ. ಸುಹಾಸ್, ಜಯಪ್ರಕಾಶ್, ಮುರಳಿ ಸಣ್ಣಕ್ಕಿ, ಕೇಶವಮೂರ್ತಿ, ಶಿವಿ ಯೋಗೀಶ್, ಭವಾನಿರಾವ್, ನಂದನ್, ಕೇಶವ ಸಿಗೆಹಟ್ಟಿ, ಸಂದೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿದ್ದು, ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಹಾಗೂ ಬಸವ ತತ್ವಗಳ ಕುರಿತು ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸಿತು.

K.M.Sathish Gowda

Join WhatsApp

Join Now

Facebook

Join Now

Leave a Comment