ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

​“ನ್ಯಾಮತಿ KPS ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ: SSLCಯಲ್ಲಿ ಚಿರಂಜೀವಿ, ಮಂಜುನಾಥ್‌ಗೆ ತಾಲ್ಲೂಕು ಟಾಪರ್ ಗೌರವ”

On: April 25, 2026 7:45 PM
Follow Us:

ಕರ್ನಾಟಕ ಪಬ್ಲಿಕ್ ಶಾಲೆ, ನ್ಯಾಮತಿ (ದಾವಣಗೆರೆ ಜಿಲ್ಲೆ) – ಎಸ್‌ಎಸ್‌ಎಲ್‌ಸಿ 2025-26 ಫಲಿತಾಂಶದಲ್ಲಿ ಅದ್ಭುತ ಸಾಧನೆ

ನ್ಯಾಮತಿ: ತಾಲೂಕಿನ ಕರ್ನಾಟಕ ಪಬ್ಲಿಕ್ ಶಾಲೆಯು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ವಿದ್ಯಾರ್ಥಿಗಳ ಶ್ರಮ, ಶಿಕ್ಷಕರ ಸಮರ್ಪಣೆ ಮತ್ತು ಮುಖ್ಯ ಶಿಕ್ಷಕರ ದೂರದೃಷ್ಟಿಯ ನಾಯಕತ್ವಕ್ಕೆ ಇದು ಸ್ಪಷ್ಟ ಉದಾಹರಣೆಯಾಗಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿಯ ಕರ್ನಾಟಕ ಪಬ್ಲಿಕ್ ಶಾಲೆಯು ಜಿಲ್ಲೆಯಲ್ಲೇ ಗಮನಾರ್ಹ ಸಾಧನೆ ಮಾಡಿದೆ. ಶಾಲೆಯ ಇಬ್ಬರು ವಿದ್ಯಾರ್ಥಿಗಳು ತಾಲ್ಲೂಕಿಗೆ ಅಗ್ರಸ್ಥಾನ ಪಡೆಯುವ ಮೂಲಕ ಶಾಲೆಯ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ.

ಈ ವರ್ಷ ಶಾಲೆಯಿಂದ ಒಟ್ಟು 132 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಅವರಲ್ಲಿ 131 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ 127 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಒಟ್ಟಾರೆ ಶೇಕಡಾ 97ರಷ್ಟು ಫಲಿತಾಂಶ ದಾಖಲಿಸಲಾಗಿದೆ. ವಿಶೇಷವಾಗಿ, ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳು ಶೇಕಡಾ 100ರಷ್ಟು ಉತ್ತೀರ್ಣರಾಗಿದ್ದು, ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಶೇಕಡಾ 92.45ರಷ್ಟು ಸಾಧನೆ ತೋರಿದ್ದಾರೆ.

ಫಲಿತಾಂಶದ ಗುಣಮಟ್ಟವೂ ಗಮನಾರ್ಹವಾಗಿದ್ದು, ಶ್ರೇಣಿವಾರು ಫಲಿತಾಂಶದ ವಿವರ

  • ಅತ್ಯುನ್ನತ ಶ್ರೇಣಿಯಲ್ಲಿ 26 ವಿದ್ಯಾರ್ಥಿಗಳು
  • ಪ್ರಥಮ ದರ್ಜೆಯಲ್ಲಿ 76 ವಿದ್ಯಾರ್ಥಿಗಳು
  • ದ್ವಿತೀಯ ದರ್ಜೆಯಲ್ಲಿ 20 ವಿದ್ಯಾರ್ಥಿಗಳು
  • ತೃತೀಯ ದರ್ಜೆಯಲ್ಲಿ 5 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿದ್ಯಾರ್ಥಿಗಳ ವೈಯಕ್ತಿಕ ಸಾಧನೆ ಕೂಡ ಪ್ರಶಂಸನೀಯವಾಗಿದೆ. ಎಸ್.ಎನ್. ಚಿರಂಜೀವಿ ಹಾಗೂ ಸಿ.ಹೆಚ್. ಮಂಜುನಾಥ್ ಅವರು 625ರಲ್ಲಿ 617 ಅಂಕಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಜೊತೆಗೆ ಮಹಮದ್ ನಯಾಜ್ (609), ರಕ್ಷಿತಾ ಯು.ಬಿ (603) ಮತ್ತು ಉದಯ ಆರ್.ಎಸ್ (601) ಕೂಡ ಉತ್ತಮ ಅಂಕಗಳನ್ನು ಗಳಿಸಿ ಶಾಲೆಯ ಹೆಮ್ಮೆ ಹೆಚ್ಚಿಸಿದ್ದಾರೆ.

ಈ ಯಶಸ್ಸಿನ ಹಿಂದೆ ಶಾಲೆಯ ಮುಖ್ಯ ಶಿಕ್ಷಕರ ಮಾರ್ಗದರ್ಶನ ಅತ್ಯಂತ ಪ್ರಮುಖ ಪಾತ್ರವಹಿಸಿದೆ. ಅವರ ಯೋಜಿತ ಕಾರ್ಯಪದ್ಧತಿ, ವಿದ್ಯಾರ್ಥಿಗಳ ಮೇಲಿನ ಕಾಳಜಿ ಮತ್ತು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ದೃಢ ಸಂಕಲ್ಪವು ಈ ಫಲಿತಾಂಶದಲ್ಲಿ ಸ್ಪಷ್ಟವಾಗಿ ಕಾಣಿಸುತ್ತದೆ. ಸಹ ಶಿಕ್ಷಕರ ಸಮರ್ಪಿತ ಸೇವೆ, ಪ್ರತಿಯೊಬ್ಬ ವಿದ್ಯಾರ್ಥಿಯ ಸಾಮರ್ಥ್ಯವನ್ನು ಗುರುತಿಸಿ ಮಾರ್ಗದರ್ಶನ ನೀಡಿದ ಬದ್ಧತೆ ಈ ಸಾಧನೆಗೆ ಬಲವಾದ ಭದ್ರ ನೆಲೆಯಾಗಿದೆ.

ಇದಲ್ಲದೆ, ಪೋಷಕರ ಸಹಕಾರವೂ ಗಮನಾರ್ಹವಾಗಿದೆ. ತಮ್ಮ ಮಕ್ಕಳ ಶಿಕ್ಷಣದ ಬಗ್ಗೆ ತೋರಿದ ಜವಾಬ್ದಾರಿ ಮತ್ತು ಪ್ರೋತ್ಸಾಹವು ವಿದ್ಯಾರ್ಥಿಗಳ ಸಾಧನೆಗೆ ಪೂರಕವಾಗಿದೆ. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಸಹ ಶಾಲೆಯ ಅಭಿವೃದ್ಧಿಗೆ ನೀಡಿದ ಬೆಂಬಲ ಈ ಯಶಸ್ಸಿನ ಪ್ರಮುಖ ಅಂಶವಾಗಿದೆ.

ಈ ಸಾಧನೆಯ ಹಿನ್ನೆಲೆಯಲ್ಲಿ ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಗುರಿಗಳನ್ನು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಿರಿಯ ಸಹ ಶಿಕ್ಷಕರು ಧನ್ಯವಾದಗಳನ್ನು ತಿಳಿಸಿ, ಈ ಸಾಧನೆ ಎಲ್ಲರ ಸಹಕಾರದ ಫಲ ಎಂದು ಹೇಳಿದ್ದಾರೆ.

ಕರ್ನಾಟಕ ಪಬ್ಲಿಕ್ ಶಾಲೆ, ನ್ಯಾಮತಿ ತನ್ನ ಶೈಕ್ಷಣಿಕ ಸಾಧನೆಯ ಮೂಲಕ ತಾಲೂಕು ಹಾಗೂ ಜಿಲ್ಲೆಯ ಮಟ್ಟದಲ್ಲಿ ಮಾದರಿ ಶಿಕ್ಷಣ ಸಂಸ್ಥೆಯಾಗಿ ಹೊರಹೊಮ್ಮಿದೆ. ವಿದ್ಯಾರ್ಥಿಗಳ ಈ ಯಶೋಗಾಥೆ ಮುಂದಿನ ಪೀಳಿಗೆಗೆ ಪ್ರೇರಣೆಯಾಗುವುದರಲ್ಲಿ ಸಂಶಯವಿಲ್ಲ.

K.M.Sathish Gowda

Join WhatsApp

Join Now

Facebook

Join Now

Read more

ಬರದ ನಡುವೆ ರೈತರ ನೆರವಿಗೆ ಧಾವಿಸದ ಸರ್ಕಾರ: ಎಕರೆಗೆ ₹50 ಸಾವಿರ ಪರಿಹಾರಕ್ಕೆ ಬಿ.ವೈ. ವಿಜಯೇಂದ್ರ ಒತ್ತಾಯ: ರಾಜ್ಯದ ಹಣಕಾಸು ಸ್ಥಿತಿಗತಿ ಕುರಿತು ಶ್ವೇತಪತ್ರಕ್ಕೆ ಆಗ್ರಹ

ಪ್ರಜಾಪ್ರಭುತ್ವದ ಶ್ರೇಷ್ಠತೆಗೆ ಸವಾಲೆಸೆದ ಶ್ರೀ ತರಳಬಾಳು ಜಗದ್ಗುರುಗಳು: ನಾಲ್ವಡಿಯವರ ‘ಜನಹಿತ’ದ ಮಾದರಿ ಇಂದೇಕೆ ಸಾಧ್ಯವಾಗುತ್ತಿಲ್ಲ!?ದಾವಣಗೆರೆಯಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪುತ್ಥಳಿ ಅನಾವರಣ: ವ್ಯವಸ್ಥೆಯ ಆತ್ಮಾವಲೋಕನಕ್ಕೆ ತರಳಬಾಳು ಶ್ರೀಗಳ ಕರೆ

ಮೂರು ಸಾವಿರ ಕಂಠಗಳು… ಒಂದೇ ನಾದ… ಬಸವಣ್ಣನವರ ವಚನಗಳಿಗೆ ದಾವಣಗೆರೆ ಸಾಕ್ಷಿ!: ‘ವಚನ ನಾದಲೋಕ’ದಲ್ಲಿ ಎಲ್ಲರೂ ಭಾಗವಹಿಸಿ ಎಂದು ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಮನವಿ

‘ಗಲಾಟೆ ಗಣಪತಿ’ಗೆ ತೆರೆ: ಭಯದಿಂದ ಭಕ್ತಿಯ ಸಂಭ್ರಮದತ್ತ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ: ಎಸ್‌ಪಿ ನಿಖಿಲ್ ಬಿ. ಅವರ ಕಾರ್ಯತಂತ್ರದಲ್ಲಿ ತಂತ್ರಜ್ಞಾನಾಧಾರಿತ ಕಣ್ಗಾವಲು: ಶಾಂತಿಯುತ ಮೆರವಣಿಗೆಗೆ ಸಾರ್ವಜನಿಕರ ಮೆಚ್ಚುಗೆ

​ಶ್ರೀ ಜಗದ್ಗುರು ರೇಣುಕಾಚಾರ್ಯರು-ಶರಣರನ್ನು ಬೇರ್ಪಡಿಸುವ ಕುತಂತ್ರ ನಿಲ್ಲಲಿ!: ಒಳಗಿನ ಶತ್ರುಗಳಿಂದಲೇ ಧರ್ಮಕ್ಕೆ ಕಂಟಕ, ಸ್ವಾರ್ಥಿಗಳ ಕಪಟ ನಾಟಕ ಇನ್ಮುಂದೆ ನಡೆಯಲ್ಲ!: ಧರ್ಮದ್ರೋಹಿಗಳಿಗೆ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಖಡಕ್ ಎಚ್ಚರಿಕೆ!

ರೈತರೆ, ಸಾಲಕ್ಕೆ ಹೆದರಬೇಡಿ! ಆತ್ಮಹತ್ಯೆ ಮಾಡಿಕೊಳ್ಳಬೇಡಿ; ಎದೆತಟ್ಟಿ ‘ನಾನು ರೈತ’ ಎಂದು ಹೇಳಿ ಹೋರಾಡಿ: ಬರ ಪರಿಹಾರದ ಹೆಸರಿನಲ್ಲಿ ರೈತರನ್ನು ಕಾಯಿಸುವುದೇಕೆ? ಶಾಶ್ವತ ನೀರಾವರಿ ಕಲ್ಪಿಸಿ, ಸಾಲಮನ್ನಾ ಮಾಡಿ: ಸಿಎಂಗೆ ಎಚ್.ಆರ್. ಬಸವರಾಜಪ್ಪ ಒತ್ತಾಯ

Leave a Comment