ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಬಿ.ಎಸ್.ವೈ ಅಭಿಮಾನೋತ್ಸವ: ಸಿರಿಗೆರೆ ಶ್ರೀ ತರಳಬಾಳು ಜಗದ್ಗುರುಗಳಿಗೆ ವಿಜಯೇಂದ್ರ, ಕಾರಜೋಳ ಅವರಿಂದ ಅಧಿಕೃತ ಆಹ್ವಾನ

On: April 26, 2026 8:02 PM
Follow Us:

ಸಿರಿಗೆರೆ: ಚಿತ್ರದುರ್ಗದಲ್ಲಿ ಮೇ 9ರಂದು ನಡೆಯಲಿರುವ ಮಾಜಿ ಮುಖ್ಯಮಂತ್ರಿ, ರೈತಬಂಧು ಮತ್ತು ಜನನಾಯಕ ಸನ್ಮಾನ್ಯ ಶ್ರೀ ಬಿ.ಎಸ್‌. ಯಡಿಯೂರಪ್ಪ ಅವರ 50 ವರ್ಷಗಳ ಸಾರ್ವಜನಿಕ ಜೀವನದ ಸಾರ್ಥಕ ಸಾಧನೆಗಳನ್ನು ಗೌರವಿಸುವ “ಬಿ.ಎಸ್‌. ಯಡಿಯೂರಪ್ಪ ಅಭಿಮಾನೋತ್ಸವ” ಕಾರ್ಯಕ್ರಮಕ್ಕೆ ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಗಳಿಗೆ ಇಂದು ಗೌರವಪೂರ್ವಕವಾಗಿ ಆಹ್ವಾನ ನೀಡಲಾಯಿತು.

​ಮೇ 9 ರಂದು ಚಿತ್ರದುರ್ಗದ ಕೋಟೆ ನಾಡಿನಲ್ಲಿ ಬಿಜೆಪಿ ವತಿಯಿಂದ ಆಯೋಜಿಸಿರುವ ಈ ಬೃಹತ್ ಕಾರ್ಯಕ್ರಮಕ್ಕೆ ಆಮಂತ್ರಣ ನೀಡಲು ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಹಾಗೂ ಚಿತ್ರದುರ್ಗ ಲೋಕಸಭಾ ಸದಸ್ಯರಾದ ಗೋವಿಂದ ಕಾರಜೋಳ ಅವರು ಇಂದು ಸಿರಿಗೆರೆಯ ಶಾಂತಿ ವನಕ್ಕೆ ಭೇಟಿ ನೀಡಿದರು.

ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಗಳನ್ನು ಭೇಟಿ ಮಾಡಿದ ನಾಯಕರು, ಕಾರ್ಯಕ್ರಮದ ಅಧಿಕೃತ ಆಮಂತ್ರಣ ಪತ್ರಿಕೆಯನ್ನು ನೀಡಿ ಗೌರವಪೂರ್ವಕವಾಗಿ ಆಹ್ವಾನಿಸಿದರು.

​ಬಳಿಕ ನಾಯಕರು ಪೂಜ್ಯ ಶ್ರೀಗಳೊಂದಿಗೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಸಮಾಲೋಚನೆ ನಡೆಸಿದರು. “ಯಡಿಯೂರಪ್ಪನವರು ಐದು ದಶಕಗಳ ಕಾಲ ನಾಡು, ನುಡಿ ಮತ್ತು ರೈತರ ಏಳಿಗೆಗಾಗಿ ಶ್ರಮಿಸಿದ್ದಾರೆ. ಅವರ ಈ ಸಾರ್ಥಕ ಸಾಧನೆಯ ಸಂಭ್ರಮಕ್ಕೆ ಶ್ರೀಗಳವರ ದಿವ್ಯ ಸಾನ್ನಿಧ್ಯ ಮತ್ತು ಮಾರ್ಗದರ್ಶನ ಇರಬೇಕು” ಎಂದು ಈ ಸಂದರ್ಭದಲ್ಲಿ ಬಿ.ವೈ. ವಿಜಯೇಂದ್ರ ವಿನಂತಿಸಿದರು.

​ಈ ಕಾರ್ಯಕ್ರಮವು ಕೇವಲ ರಾಜಕೀಯ ಸಮಾವೇಶವಾಗಿರದೆ, ಯಡಿಯೂರಪ್ಪನವರ ಹೋರಾಟದ ಹಾದಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ವೇದಿಕೆಯಾಗಲಿದೆ. ಶ್ರೀ ತರಳಬಾಳು ಜಗದ್ಗುರುಗಳ ಪವಿತ್ರ ಉಪಸ್ಥಿತಿಯು ಈ ಸಮಾರಂಭಕ್ಕೆ ವಿಶೇಷ ಮೆರುಗು ಮತ್ತು ದೈವಿಕ ಕಳೆಯನ್ನು ನೀಡಲಿದೆ ಎಂದು ಬಿಜೆಪಿ ಮುಖಂಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

​ಪೂಜ್ಯ ಶ್ರೀಗಳು ನಾಯಕರ ಆಹ್ವಾನವನ್ನು ಸ್ವೀಕರಿಸಿ, ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಹರಸಿದರು. ಭೇಟಿಯ ಸಮಯದಲ್ಲಿ ಜಿಲ್ಲೆಯ ಪ್ರಮುಖ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

K.M.Sathish Gowda

Join WhatsApp

Join Now

Facebook

Join Now

Read more

ಬರದ ನಡುವೆ ರೈತರ ನೆರವಿಗೆ ಧಾವಿಸದ ಸರ್ಕಾರ: ಎಕರೆಗೆ ₹50 ಸಾವಿರ ಪರಿಹಾರಕ್ಕೆ ಬಿ.ವೈ. ವಿಜಯೇಂದ್ರ ಒತ್ತಾಯ: ರಾಜ್ಯದ ಹಣಕಾಸು ಸ್ಥಿತಿಗತಿ ಕುರಿತು ಶ್ವೇತಪತ್ರಕ್ಕೆ ಆಗ್ರಹ

ಪ್ರಜಾಪ್ರಭುತ್ವದ ಶ್ರೇಷ್ಠತೆಗೆ ಸವಾಲೆಸೆದ ಶ್ರೀ ತರಳಬಾಳು ಜಗದ್ಗುರುಗಳು: ನಾಲ್ವಡಿಯವರ ‘ಜನಹಿತ’ದ ಮಾದರಿ ಇಂದೇಕೆ ಸಾಧ್ಯವಾಗುತ್ತಿಲ್ಲ!?ದಾವಣಗೆರೆಯಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪುತ್ಥಳಿ ಅನಾವರಣ: ವ್ಯವಸ್ಥೆಯ ಆತ್ಮಾವಲೋಕನಕ್ಕೆ ತರಳಬಾಳು ಶ್ರೀಗಳ ಕರೆ

ಮೂರು ಸಾವಿರ ಕಂಠಗಳು… ಒಂದೇ ನಾದ… ಬಸವಣ್ಣನವರ ವಚನಗಳಿಗೆ ದಾವಣಗೆರೆ ಸಾಕ್ಷಿ!: ‘ವಚನ ನಾದಲೋಕ’ದಲ್ಲಿ ಎಲ್ಲರೂ ಭಾಗವಹಿಸಿ ಎಂದು ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಮನವಿ

‘ಗಲಾಟೆ ಗಣಪತಿ’ಗೆ ತೆರೆ: ಭಯದಿಂದ ಭಕ್ತಿಯ ಸಂಭ್ರಮದತ್ತ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ: ಎಸ್‌ಪಿ ನಿಖಿಲ್ ಬಿ. ಅವರ ಕಾರ್ಯತಂತ್ರದಲ್ಲಿ ತಂತ್ರಜ್ಞಾನಾಧಾರಿತ ಕಣ್ಗಾವಲು: ಶಾಂತಿಯುತ ಮೆರವಣಿಗೆಗೆ ಸಾರ್ವಜನಿಕರ ಮೆಚ್ಚುಗೆ

​ಶ್ರೀ ಜಗದ್ಗುರು ರೇಣುಕಾಚಾರ್ಯರು-ಶರಣರನ್ನು ಬೇರ್ಪಡಿಸುವ ಕುತಂತ್ರ ನಿಲ್ಲಲಿ!: ಒಳಗಿನ ಶತ್ರುಗಳಿಂದಲೇ ಧರ್ಮಕ್ಕೆ ಕಂಟಕ, ಸ್ವಾರ್ಥಿಗಳ ಕಪಟ ನಾಟಕ ಇನ್ಮುಂದೆ ನಡೆಯಲ್ಲ!: ಧರ್ಮದ್ರೋಹಿಗಳಿಗೆ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಖಡಕ್ ಎಚ್ಚರಿಕೆ!

ರೈತರೆ, ಸಾಲಕ್ಕೆ ಹೆದರಬೇಡಿ! ಆತ್ಮಹತ್ಯೆ ಮಾಡಿಕೊಳ್ಳಬೇಡಿ; ಎದೆತಟ್ಟಿ ‘ನಾನು ರೈತ’ ಎಂದು ಹೇಳಿ ಹೋರಾಡಿ: ಬರ ಪರಿಹಾರದ ಹೆಸರಿನಲ್ಲಿ ರೈತರನ್ನು ಕಾಯಿಸುವುದೇಕೆ? ಶಾಶ್ವತ ನೀರಾವರಿ ಕಲ್ಪಿಸಿ, ಸಾಲಮನ್ನಾ ಮಾಡಿ: ಸಿಎಂಗೆ ಎಚ್.ಆರ್. ಬಸವರಾಜಪ್ಪ ಒತ್ತಾಯ

Leave a Comment