ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಶಿವಮೊಗ್ಗದಲ್ಲಿ ‘ದೇಶೀಯ ದರ್ಶಿನಿ’ ಹೋಟೆಲ್ ಉದ್ಘಾಟನೆ: ಯುವ ಉದ್ಯಮಿ ಅವಿನಾಶ್ ಅವರಿಗೆ ಸಿ.ಎಸ್. ಷಡಾಕ್ಷರಿ ಶುಭ ಹಾರೈಕೆ

On: April 30, 2026 5:38 PM
Follow Us:

ಶಿವಮೊಗ್ಗ: ಅಖಿಲ ಭಾರತ ವೀರಶೈವ ಮಹಾಸಭಾದ ಶಿವಮೊಗ್ಗ ಜಿಲ್ಲಾ ಕಾರ್ಯದರ್ಶಿ ಅವಿನಾಶ್ ಅವರ ನೂತನ “ದೇಶೀಯ ದರ್ಶಿನಿ” ಹೋಟೆಲ್ ಬಸವೇಶ್ವರ ವೃತ್ತದ ಬಳಿ ಪ್ರಾರಂಭವಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ ಅವರು ನೂತನ ಹೋಟೆಲ್‌ನ್ನು ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂದಿನ ಯುವಕರು ಉದ್ಯಮ ಕ್ಷೇತ್ರದಲ್ಲಿ ಮುಂದಾಗುತ್ತಿರುವುದು ಸಂತೋಷಕರ ಸಂಗತಿ ಎಂದು ತಿಳಿಸಿ, ಇಂತಹ ಹೊಸ ಉದ್ಯಮಗಳು ಸ್ಥಳೀಯ ಆರ್ಥಿಕತೆಗೆ ಉತ್ತೇಜನ ನೀಡುವುದರ ಜೊತೆಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ ಎಂದು ಅಭಿಪ್ರಾಯಪಟ್ಟರು.

​”ಯುವ ಉದ್ಯಮಿಗಳ ಪರಿಶ್ರಮ ಮತ್ತು ಸಾಧನೆ ಸಮಾಜದ ಆರ್ಥಿಕ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಅವಿನಾಶ್ ಅವರ ಈ ಹೊಸ ಉದ್ಯಮವು ಯಶಸ್ವಿಯಾಗಿ ಬೆಳೆಯಲಿ ಹಾಗೂ ಜನಮನ ಗೆಲ್ಲಲಿ,” ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಆರ್. ಮೋಹನ್ ಕುಮಾರ್, ಕಾರ್ಯದರ್ಶಿ ಆರ್. ಪಾಪಣ್ಣ, ಕೆ.ಮೋಹನ್ ಕುಮಾರ್, ಬಸವ ಸಂಗಮದ ಅಧ್ಯಕ್ಷರಾದ ಚೇತನ್ ದುಮ್ಮಳ್ಳಿ, ದೃವಕುಮಾರ್ ಸೇರಿದಂತೆ ಸಮಾಜದ ಪ್ರಮುಖರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದು, ನೂತನ ಹೋಟೆಲ್‌ಗೆ ಶುಭ ಹಾರೈಸಿದರು.

ನಮ್ಮ ಡಿಟೆಕ್ಟಿವ್‌ ನ್ಯೂಸ್ 24 ಸುದ್ದಿ ಸಂಸ್ಥೆಯ ಪರವಾಗಿ ಅವಿನಾಶ್ ಅವರಿಗೆ ಶುಭಾಶಯ ಕೋರುತ್ತಾ, “ದೇಶೀಯ ದರ್ಶಿನಿ” ಹೋಟೆಲ್ ಉತ್ತಮ ಸೇವೆ, ಸ್ವಚ್ಛತೆ ಮತ್ತು ರುಚಿಕರ ಆಹಾರದ ಮೂಲಕ ಜನರ ಮೆಚ್ಚುಗೆ ಪಡೆಯಲಿ. ನಿಮ್ಮ ಈ ಹೊಸ ಉದ್ಯಮ ಇನ್ನಷ್ಟು ಉತ್ತುಂಗಕ್ಕೆ ಏರಿ, ಭವಿಷ್ಯದಲ್ಲಿ ಹೆಚ್ಚಿನ ಯಶಸ್ಸುಗಳನ್ನು ಸಾಧಿಸಲಿ ಎಂದು ಹಾರೈಸುತ್ತೇವೆ.

K.M.Sathish Gowda

Join WhatsApp

Join Now

Facebook

Join Now

Read more

ಬರದ ನಡುವೆ ರೈತರ ನೆರವಿಗೆ ಧಾವಿಸದ ಸರ್ಕಾರ: ಎಕರೆಗೆ ₹50 ಸಾವಿರ ಪರಿಹಾರಕ್ಕೆ ಬಿ.ವೈ. ವಿಜಯೇಂದ್ರ ಒತ್ತಾಯ: ರಾಜ್ಯದ ಹಣಕಾಸು ಸ್ಥಿತಿಗತಿ ಕುರಿತು ಶ್ವೇತಪತ್ರಕ್ಕೆ ಆಗ್ರಹ

ಪ್ರಜಾಪ್ರಭುತ್ವದ ಶ್ರೇಷ್ಠತೆಗೆ ಸವಾಲೆಸೆದ ಶ್ರೀ ತರಳಬಾಳು ಜಗದ್ಗುರುಗಳು: ನಾಲ್ವಡಿಯವರ ‘ಜನಹಿತ’ದ ಮಾದರಿ ಇಂದೇಕೆ ಸಾಧ್ಯವಾಗುತ್ತಿಲ್ಲ!?ದಾವಣಗೆರೆಯಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪುತ್ಥಳಿ ಅನಾವರಣ: ವ್ಯವಸ್ಥೆಯ ಆತ್ಮಾವಲೋಕನಕ್ಕೆ ತರಳಬಾಳು ಶ್ರೀಗಳ ಕರೆ

ಮೂರು ಸಾವಿರ ಕಂಠಗಳು… ಒಂದೇ ನಾದ… ಬಸವಣ್ಣನವರ ವಚನಗಳಿಗೆ ದಾವಣಗೆರೆ ಸಾಕ್ಷಿ!: ‘ವಚನ ನಾದಲೋಕ’ದಲ್ಲಿ ಎಲ್ಲರೂ ಭಾಗವಹಿಸಿ ಎಂದು ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಮನವಿ

‘ಗಲಾಟೆ ಗಣಪತಿ’ಗೆ ತೆರೆ: ಭಯದಿಂದ ಭಕ್ತಿಯ ಸಂಭ್ರಮದತ್ತ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ: ಎಸ್‌ಪಿ ನಿಖಿಲ್ ಬಿ. ಅವರ ಕಾರ್ಯತಂತ್ರದಲ್ಲಿ ತಂತ್ರಜ್ಞಾನಾಧಾರಿತ ಕಣ್ಗಾವಲು: ಶಾಂತಿಯುತ ಮೆರವಣಿಗೆಗೆ ಸಾರ್ವಜನಿಕರ ಮೆಚ್ಚುಗೆ

​ಶ್ರೀ ಜಗದ್ಗುರು ರೇಣುಕಾಚಾರ್ಯರು-ಶರಣರನ್ನು ಬೇರ್ಪಡಿಸುವ ಕುತಂತ್ರ ನಿಲ್ಲಲಿ!: ಒಳಗಿನ ಶತ್ರುಗಳಿಂದಲೇ ಧರ್ಮಕ್ಕೆ ಕಂಟಕ, ಸ್ವಾರ್ಥಿಗಳ ಕಪಟ ನಾಟಕ ಇನ್ಮುಂದೆ ನಡೆಯಲ್ಲ!: ಧರ್ಮದ್ರೋಹಿಗಳಿಗೆ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಖಡಕ್ ಎಚ್ಚರಿಕೆ!

ರೈತರೆ, ಸಾಲಕ್ಕೆ ಹೆದರಬೇಡಿ! ಆತ್ಮಹತ್ಯೆ ಮಾಡಿಕೊಳ್ಳಬೇಡಿ; ಎದೆತಟ್ಟಿ ‘ನಾನು ರೈತ’ ಎಂದು ಹೇಳಿ ಹೋರಾಡಿ: ಬರ ಪರಿಹಾರದ ಹೆಸರಿನಲ್ಲಿ ರೈತರನ್ನು ಕಾಯಿಸುವುದೇಕೆ? ಶಾಶ್ವತ ನೀರಾವರಿ ಕಲ್ಪಿಸಿ, ಸಾಲಮನ್ನಾ ಮಾಡಿ: ಸಿಎಂಗೆ ಎಚ್.ಆರ್. ಬಸವರಾಜಪ್ಪ ಒತ್ತಾಯ

Leave a Comment