ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

​ಬಿಎಸ್‍ವೈ 50 ವರ್ಷಗಳ ರಾಜಕೀಯ ಪಯಣ: ತುಮಕೂರಿನಲ್ಲಿ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬೃಹತ್ ಅಭಿಮಾನೋತ್ಸವಕ್ಕೆ ಸಿದ್ಧತೆ

On: April 30, 2026 9:56 PM
Follow Us:

ತುಮಕೂರು: ಕರ್ನಾಟಕ ರಾಜಕಾರಣದ ಧ್ರುವತಾರೆ, ರೈತ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ಸುದೀರ್ಘ ಸಾರ್ವಜನಿಕ ಜೀವನದ ಸುವರ್ಣ ಮಹೋತ್ಸವದ ಅಂಗವಾಗಿ ರಾಜ್ಯಾದ್ಯಂತ ‘ಅಭಿಮಾನೋತ್ಸವ’ವನ್ನು ಅತ್ಯಂತ ವಿಜೃಂಭಣೆಯಿಂದ ಆಯೋಜಿಸಲು ಬಿಜೆಪಿ ಸಜ್ಜಾಗಿದೆ. ಈ ಸಂಬಂಧ ತುಮಕೂರಿನಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕಾರ್ಯಕ್ರಮದ ರೂಪುರೇಷೆಗಳನ್ನು ಹಂಚಿಕೊಂಡರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಬಿ.ವೈ. ವಿಜಯೇಂದ್ರ ಅವರು, “ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಹೋರಾಟಕ್ಕೆ ಮತ್ತೊಂದು ಹೆಸರೇ ಬಿ.ಎಸ್. ಯಡಿಯೂರಪ್ಪ. ಶೂನ್ಯದಿಂದ ಸಾಮ್ರಾಜ್ಯ ಕಟ್ಟಿದ ಅವರ ಛಲ ಮತ್ತು ಪರಿಶ್ರಮ ಇಂದಿನ ಯುವ ಪೀಳಿಗೆಗೆ ಮಾದರಿ. ಕಳೆದ ಐದು ದಶಕಗಳಿಂದ ಬಡವರು, ಶೋಷಿತರು ಮತ್ತು ರೈತರ ಧ್ವನಿಯಾಗಿ ಅವರು ನಿರಂತರವಾಗಿ ಶ್ರಮಿಸಿದ್ದಾರೆ. ಅವರ ಈ ಸಾಧನೆಯನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ,” ಎಂದು ಭಾವನಾತ್ಮಕವಾಗಿ ನುಡಿದರು.

ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದ ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಅವರು, ಈ ಐತಿಹಾಸಿಕ ಅಭಿಮಾನೋತ್ಸವಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸುಮಾರು 10 ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ಮತ್ತು ಕಾರ್ಯಕರ್ತರು ಆಗಮಿಸುವ ನಿರೀಕ್ಷೆಯಿದೆ ಎಂದರು. ಇದು ಕೇವಲ ಒಂದು ರಾಜಕೀಯ ಕಾರ್ಯಕ್ರಮವಲ್ಲ, ಬದಲಾಗಿ ಒಬ್ಬ ಜನನಾಯಕನಿಗೆ ಜನತೆ ಸಲ್ಲಿಸುವ ಗೌರವ ಸಮರ್ಪಣೆ ಎಂದು ಅವರು ಬಣ್ಣಿಸಿದರು.

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಮಾತನಾಡಿ, “ಅಧಿಕಾರಕ್ಕಾಗಿ ಹಪಾಹಪಿಸುವ ರಾಜಕಾರಣಿಗಳ ನಡುವೆ, ಯಡಿಯೂರಪ್ಪ ಅವರು ತಮ್ಮ ಕೆಲಸಗಳ ಮೂಲಕವೇ ಗುರುತಿಸಿಕೊಂಡವರು. ‘ನಾನು ಅಹಿಂದ ನಾಯಕ’, ‘ಮಣ್ಣಿನ ಮಗ’ ಎಂದು ಬೊಬ್ಬೆ ಹೊಡೆಯುವವರನ್ನು ನಾವು ನೋಡಿದ್ದೇವೆ. ಆದರೆ, ಬಿಎಸ್‍ವೈ ಅವರು ಎಂದಿಗೂ ಮಾತಿಗೆ ಮಾರುಹೋದವರಲ್ಲ. ‘ನನ್ನ ಸಾಧನೆಗಳು ಮಾತನಾಡಬೇಕೇ ಹೊರತು, ನಾನಲ್ಲ’ ಎನ್ನುವ ತತ್ವದಡಿ ಅವರು ಭಾಗ್ಯಲಕ್ಷ್ಮಿ ಯೋಜನೆ, ರೈತ ಬಜೆಟ್‌ನಂತಹ ಜನಪರ ಯೋಜನೆಗಳನ್ನು ಜಾರಿಗೆ ತಂದರು,” ಎಂದು ಶ್ಲಾಘಿಸಿದರು.

ಈ ಪೂರ್ವಭಾವಿ ಸಭೆಯಲ್ಲಿ ಮಾಜಿ ಸಚಿವ ಗೋಪಾಲಯ್ಯ, ಶಾಸಕ ಸುರೇಶ್ ಗೌಡ, ಜಿಲ್ಲಾ ಅಧ್ಯಕ್ಷ ಹೆಬ್ಬಾಕ ರವಿ, ವಿಧಾನಪರಿಷತ್ ಸದಸ್ಯ ಚಿದಾನಂದ ಗೌಡ ಸೇರಿದಂತೆ ತುಮಕೂರು ಮತ್ತು ಮಧುಗಿರಿ ಸಂಘಟನಾತ್ಮಕ ಜಿಲ್ಲೆಗಳ ಅನೇಕ ಮುಖಂಡರು ಭಾಗವಹಿಸಿದ್ದರು.

K.M.Sathish Gowda

Join WhatsApp

Join Now

Facebook

Join Now

Read more

ಬರದ ನಡುವೆ ರೈತರ ನೆರವಿಗೆ ಧಾವಿಸದ ಸರ್ಕಾರ: ಎಕರೆಗೆ ₹50 ಸಾವಿರ ಪರಿಹಾರಕ್ಕೆ ಬಿ.ವೈ. ವಿಜಯೇಂದ್ರ ಒತ್ತಾಯ: ರಾಜ್ಯದ ಹಣಕಾಸು ಸ್ಥಿತಿಗತಿ ಕುರಿತು ಶ್ವೇತಪತ್ರಕ್ಕೆ ಆಗ್ರಹ

ಪ್ರಜಾಪ್ರಭುತ್ವದ ಶ್ರೇಷ್ಠತೆಗೆ ಸವಾಲೆಸೆದ ಶ್ರೀ ತರಳಬಾಳು ಜಗದ್ಗುರುಗಳು: ನಾಲ್ವಡಿಯವರ ‘ಜನಹಿತ’ದ ಮಾದರಿ ಇಂದೇಕೆ ಸಾಧ್ಯವಾಗುತ್ತಿಲ್ಲ!?ದಾವಣಗೆರೆಯಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪುತ್ಥಳಿ ಅನಾವರಣ: ವ್ಯವಸ್ಥೆಯ ಆತ್ಮಾವಲೋಕನಕ್ಕೆ ತರಳಬಾಳು ಶ್ರೀಗಳ ಕರೆ

ಮೂರು ಸಾವಿರ ಕಂಠಗಳು… ಒಂದೇ ನಾದ… ಬಸವಣ್ಣನವರ ವಚನಗಳಿಗೆ ದಾವಣಗೆರೆ ಸಾಕ್ಷಿ!: ‘ವಚನ ನಾದಲೋಕ’ದಲ್ಲಿ ಎಲ್ಲರೂ ಭಾಗವಹಿಸಿ ಎಂದು ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಮನವಿ

‘ಗಲಾಟೆ ಗಣಪತಿ’ಗೆ ತೆರೆ: ಭಯದಿಂದ ಭಕ್ತಿಯ ಸಂಭ್ರಮದತ್ತ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ: ಎಸ್‌ಪಿ ನಿಖಿಲ್ ಬಿ. ಅವರ ಕಾರ್ಯತಂತ್ರದಲ್ಲಿ ತಂತ್ರಜ್ಞಾನಾಧಾರಿತ ಕಣ್ಗಾವಲು: ಶಾಂತಿಯುತ ಮೆರವಣಿಗೆಗೆ ಸಾರ್ವಜನಿಕರ ಮೆಚ್ಚುಗೆ

​ಶ್ರೀ ಜಗದ್ಗುರು ರೇಣುಕಾಚಾರ್ಯರು-ಶರಣರನ್ನು ಬೇರ್ಪಡಿಸುವ ಕುತಂತ್ರ ನಿಲ್ಲಲಿ!: ಒಳಗಿನ ಶತ್ರುಗಳಿಂದಲೇ ಧರ್ಮಕ್ಕೆ ಕಂಟಕ, ಸ್ವಾರ್ಥಿಗಳ ಕಪಟ ನಾಟಕ ಇನ್ಮುಂದೆ ನಡೆಯಲ್ಲ!: ಧರ್ಮದ್ರೋಹಿಗಳಿಗೆ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಖಡಕ್ ಎಚ್ಚರಿಕೆ!

ರೈತರೆ, ಸಾಲಕ್ಕೆ ಹೆದರಬೇಡಿ! ಆತ್ಮಹತ್ಯೆ ಮಾಡಿಕೊಳ್ಳಬೇಡಿ; ಎದೆತಟ್ಟಿ ‘ನಾನು ರೈತ’ ಎಂದು ಹೇಳಿ ಹೋರಾಡಿ: ಬರ ಪರಿಹಾರದ ಹೆಸರಿನಲ್ಲಿ ರೈತರನ್ನು ಕಾಯಿಸುವುದೇಕೆ? ಶಾಶ್ವತ ನೀರಾವರಿ ಕಲ್ಪಿಸಿ, ಸಾಲಮನ್ನಾ ಮಾಡಿ: ಸಿಎಂಗೆ ಎಚ್.ಆರ್. ಬಸವರಾಜಪ್ಪ ಒತ್ತಾಯ

Leave a Comment