ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಪುರಲೆ ಗ್ರಾಮದಲ್ಲಿ ಪೂರ್ವಭಾವಿ ಸಭೆ: ಶ್ರೀ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವಕ್ಕೆ ಸಿದ್ಧತೆ

On: May 8, 2026 9:25 PM
Follow Us:

ಶಿವಮೊಗ್ಗ: ನಗರದ ಸಮೀಪದ ಪುರಲೆ ಗ್ರಾಮದಲ್ಲಿ ಶ್ರೀ ಜಗದ್ಗುರು ಪಂಚಪೀಠಾಧೀಶ್ವರರ ಭವ್ಯ ಅಡ್ಡಪಲ್ಲಕ್ಕಿ ಮಹೋತ್ಸವ, ಧರ್ಮಜಾಗೃತಿ ಸಭೆ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಅಭಿನಂದನಾ ಸಮಾರಂಭದ ಅಂಗವಾಗಿ ಪೂರ್ವಭಾವಿ ಸಭೆ ನಡೆಯಿತು.

​ಮುಂಬರುವ ಮೇ 17, 2026 ರಂದು ನಡೆಯಲಿರುವ ಈ ಐತಿಹಾಸಿಕ ಕಾರ್ಯಕ್ರಮವನ್ನು ಅಭೂತಪೂರ್ವ ರೀತಿಯಲ್ಲಿ ಸಂಘಟಿಸುವ ಕುರಿತು ಸಮಾಜದ ಮುಖಂಡರು ಸುದೀರ್ಘ ಚರ್ಚೆ ನಡೆಸಿದರು.

​ಸಭೆಯಲ್ಲಿ ಭಾಗವಹಿಸಿದ್ದ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಎಸ್. ಷಡಾಕ್ಷರಿ ಅವರು ಮಾತನಾಡಿ, “ಪಂಚಪೀಠಗಳ ಜಗದ್ಗುರುಗಳ ಆಗಮನವು ನಮ್ಮಗಳಿಗೆ ದೊರೆತ ಸೌಭಾಗ್ಯ. ಈ ಕಾರ್ಯಕ್ರಮವು ಕೇವಲ ಒಂದು ಸಮಾರಂಭವಾಗದೆ, ಧರ್ಮ ಜಾಗೃತಿಯ ಸಂಕೇತವಾಗಬೇಕು. ಪ್ರತಿಯೊಬ್ಬ ಭಕ್ತರೂ ಸ್ವಯಂಪ್ರೇರಿತರಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು,” ಎಂದು ಕರೆ ನೀಡಿದರು.

​ಈ ಸಭೆಯಲ್ಲಿ ಬಳ್ಳೇಕೆರೆ ಸಂತೋಷ್ ಅವರು ಮಾತನಾಡಿ, ಕಾರ್ಯಕ್ರಮದ ವ್ಯವಸ್ಥಿತ ಆಯೋಜನೆ, ಸ್ವಯಂಸೇವಕರ ನಿಯೋಜನೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಉಪಯುಕ್ತ ಸಲಹೆಗಳನ್ನು ನೀಡಿದರು. ಪುರಲೆ ಗ್ರಾಮದ ಭಕ್ತಾದಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಲಾಯಿತು.

ಈ ಸಂಧರ್ಭದಲ್ಲಿ ಸಮಾಜದ ಮುಖಂಡರಾದ ಡಾ. ಹಿರೇಮಠ್, ಮೋಹನ್ ಕುಮಾರ್, ಲೋಕೇಶ್ ಹಾಗೂ ಮಲ್ಲಿಕಾರ್ಜುನ್, ಚೇತನ್ ದುಮಳ್ಳಿ, ನವೀನ್, ರಾಜಶೇಖರ್ ಸೇರಿದಂತೆ ಸಮಿತಿಯ ವಿವಿಧ ಪದಾಧಿಕಾರಿಗಳು ಹಾಗೂ ಗ್ರಾಮದ ಹಿರಿಯರು ಭಾಗವಹಿಸಿದ್ದರು.

K.M.Sathish Gowda

Join WhatsApp

Join Now

Facebook

Join Now

Read more

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶ್ರೀ ವೀರಭದ್ರೇಶ್ವರ ಜಯಂತ್ಯೋತ್ಸವ: ಆದರ್ಶ ಡೆವಲಪರ್ಸ್‌ನ ಜಯಶಂಕರ್‌ಗೆ ‘ಶ್ರೀ ವೀರಭದ್ರೇಶ್ವರ ಪ್ರಶಸ್ತಿ’ ಪ್ರಧಾನ: ‘ವೀರಭದ್ರನಾಗಿ ಬದುಕಿದರೆ ಸಮಾಜ ಸುಭದ್ರವಾಗುತ್ತದೆ’: ಶ್ರೀ ರಂಭಾಪುರಿ ಜಗದ್ಗುರುಗಳು

ಪ್ರತಿಭೆಯ ಹಣೆಗೆ ವಿಭೂತಿಯಂತೆ ಹೊಳೆಯಲಿ ಸಂಸ್ಕಾರ: ಅಂಕಗಳ ಬೆನ್ನಟ್ಟುವ ಶಿಕ್ಷಣದ ಜೊತೆಗೆ ಮೌಲ್ಯಾಧಾರಿತ ಬದುಕಿಗೂ ಆದ್ಯತೆ ಅಗತ್ಯ: ಸಿದ್ಧಗಂಗಾ ಮಠದ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ

ಸಂಸ್ಕಾರಯುತ ಶಿಕ್ಷಣವೇ ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ: ಶ್ರೀ ರಂಭಾಪುರಿ ಜಗದ್ಗುರುಗಳು

ಸಿರಿಗೆರೆಯಲ್ಲಿ ಶ್ರೀ ಶಿವಕುಮಾರ ಮಹಾಸ್ವಾಮಿಗಳವರ 35ನೇ ಶ್ರದ್ಧಾಂಜಲಿ: ‘ತರಳಬಾಳು’ ನಮ್ಮ ಮಠದ ಸಂವಿಧಾನ!: ಸಮಾಜಮುಖಿ ಆಡಳಿತಕ್ಕೆ ಗುರುಗಳ ಆದರ್ಶ ಅನುಸರಿಸಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ತೂಕಬದ್ಧ ನಡವಳಿಕೆಗೆ ಶ್ರೀ ತರಳಬಾಳು ಜಗದ್ಗುರುಗಳ ಮೆಚ್ಚುಗೆ

ತಂದೆ-ತಾಯಿಯನ್ನು ವೃದ್ಧಾಶ್ರಮಕ್ಕೆ ಕಳುಹಿಸುವುದಿಲ್ಲ ಎಂಬ ಸಂಕಲ್ಪ ಮಾಡಿಕೊಳ್ಳಿ: ಮಕ್ಕಳಿಗೆ ಸಂಸ್ಕಾರ ನೀಡುವುದೇ ದಂಪತಿಗಳ ದೊಡ್ಡ ಕರ್ತವ್ಯ: ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಭಗವತ್ಪಾದರು

ಗುರುಗಳ ಶ್ರದ್ಧಾಂಜಲಿಗೆ ನಿಜವಾದ ಗೌರವವೆಂದರೆ ದುಶ್ಚಟಗಳಿಂದ ದೂರವಿರುವ ಸಂಕಲ್ಪ: ಬಸವಣ್ಣನವರ ವಚನವನ್ನು ಬದುಕಿನಲ್ಲಿ ಅಳವಡಿಸಿಕೊಂಡು ಸಮಾಜದ ನೋವು-ನಲಿವುಗಳಿಗೆ ಸ್ಪಂದಿಸಿದ ಲಿಂ. ಶ್ರೀ ಶಿವಕುಮಾರ ಮಹಾಸ್ವಾಮೀಜಿ: ಶ್ರೀ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

Leave a Comment